Karnataka State Police Recruitment 2021: 545 ಸಬ್ ಇನ್ಸ್​​​ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

JOB

JOB

  • Share this:
    ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್)   ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ.

    ವಿದ್ಯಾರ್ಹತೆ: ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

    ವಯೋಮಿತಿ:

    -ಏಪ್ರಿಲ್ 1,2020ರ ಅನ್ವಯ ಕನಿಷ್ಟ 21 ರಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಟ 32 ವರ್ಷ.

    -ಇತರೆ ಅಭ್ಯರ್ಥಿಗಳಿಗೆ ಗರಿಷ್ಟ 30 ವ‍ರ್ಷ ಮತ್ತು ಸೇವಾ ನಿರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ.

    -ಸೇವಾ ನಿರತ ಗರಿಷ್ಟ 35 ವರ್ಷದೊಳಗಿನ ಇತರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವೇತನ ಶ್ರೇಣಿ: ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900 ರೂ. ನಿಂದ 70,850 ರೂ. ಗಳ ವರೆಗೆ ವೇತನವನ್ನು ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ ಹೇಗೆ?: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

    ಶುಲ್ಕದ ವಿವರ:

    -ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 500ರೂ

    -ಪರಿಶಿಷ್ಟ ಜಾತಿ, ಪರಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್‌.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು.

    ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ http://rec20.ksp-online.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡುವ ಮೂಲಕ ಫೆಬ್ರವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
    Published by:Harshith AS
    First published: