lok sabha elections 2019: ಕಾಶ್ಮೀರ ಭಾರತದ ಅವಿಭಾಜ್ಯ ಅಂಗ; ಓಮರ್ ಅಬ್ದುಲ್ಲಾ ಹೇಳಿಕೆಗೆ ಟಾಂಗ್ ಕೊಟ್ಟ ಅಮಿತ್ ಶಾ !

ದೇಶದ ರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ. ಉಗ್ರಗಾಮಿಗಳನ್ನು ಹುಡುಕಿ ಹುಡುಕಿ ಕೊಲ್ಲಲಾಗುತ್ತಿದೆ. ಬಾಲಾಕೋಟ್ ದಾಳಿಯ ಮೂಲಕ ಭಾರತೀಯ ಸೈನಿಕರ ಸಾವಿಗೆ ಪ್ರತಿಕಾರ ತೀರಿಸಲಾಗಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

MAshok Kumar | news18
Updated:April 17, 2019, 3:54 PM IST
lok sabha elections 2019: ಕಾಶ್ಮೀರ ಭಾರತದ ಅವಿಭಾಜ್ಯ ಅಂಗ; ಓಮರ್ ಅಬ್ದುಲ್ಲಾ ಹೇಳಿಕೆಗೆ ಟಾಂಗ್ ಕೊಟ್ಟ ಅಮಿತ್ ಶಾ !
ಅಮಿತ್ ಶಾ
  • News18
  • Last Updated: April 17, 2019, 3:54 PM IST
  • Share this:
ಮುಂಬೈ (ಏ.17): ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಅದನ್ನು ನಮ್ಮಿಂದ ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಬಗ್ಗೆ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್​ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಓಮರ್ ಅಬ್ದುಲ್ಲಾ. “ಕಣಿವೆ ರಾಜ್ಯಕ್ಕೆ ಪ್ರತ್ಯೇಕ ಪ್ರಧಾನಿಯ ಅವಶ್ಯಕತೆ ಇದೆ,” ಎಂದು ಪರೋಕ್ಷವಾಗಿ ಸ್ವತಂತ್ರ್ಯ ದೇಶದ ಬಗ್ಗೆ ಮಾತನಾಡಿದ್ದರು.

ಇದನ್ನೂ ಓದಿ : ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; ಮೂವರು ಉಗ್ರರ ಸಾವು

ಬುಧವಾರ ಮಹಾರಾಷ್ಟ್ರದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಚುನಾವಣಾ ಪ್ರಚಾರದ ವೇಳೆ ಓಮರ್ ಅಬ್ದುಲ್ಲಾ ಅವರ ಈ ಹೇಳಿಕೆಯ ವಿರುದ್ಧ ತೀವ್ರ ಖಂಡನೆ ವ್ಯಕ್ತಪಡಿಸಿರುವ ಅಮಿತ್ ಶಾ, “ಅಬ್ದುಲ್ಲಾ ಅವರು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಹಾಗೂ ರಾಷ್ಟ್ರಪತಿ ಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ. ಕಾಂಗ್ರೆಸ್​ ಸಹ ದೇಶವನ್ನು ಒಡೆಯಲು ಉತ್ಸುಕವಾಗಿದೆ. ಆದರೆ ಬಿಜೆಪಿ ಅಧಿಕಾರದಲ್ಲಿ ಇರುವವರೆಗೆ ಅದು ಸಾಧ್ಯವಿಲ್ಲ. ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಯಾವುದೇ ಕಾರಣಕ್ಕೂ ದೇಶಕ್ಕೆ ಇಬ್ಬರು ಪ್ರಧಾನಿಗಳನ್ನು ನೇಮಕ ಮಾಡುವ ಸಾಧ್ಯತೆ ಇಲ್ಲ,” ಎಂದು ತಿರುಗೇಟು ನೀಡಿದ್ದಾರೆ.

ಉಗ್ರಗಾಮಿಗಳ ಬಗ್ಗೆ ಮಾತನಾಡಿರುವ ಶಾ, “ದೇಶದ ರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ. ಉಗ್ರಗಾಮಿಗಳನ್ನು ಹುಡುಕಿ ಹುಡುಕಿ ಕೊಲ್ಲಲಾಗುತ್ತಿದೆ. ಬಾಲಾಕೋಟ್ ದಾಳಿಯ ಮೂಲಕ ಭಾರತೀಯ ಸೈನಿಕರ ಸಾವಿಗೆ ಪ್ರತಿಕಾರ ತೀರಿಸಲಾಗಿದೆ, ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕಾಶ್ಮೀರದ ವಿಶೇಷ ಸವಲತ್ತಿಗೆ ಕತ್ತರಿ ಹಾಕಿದರೆ ಪ್ರತ್ಯೇಕ ದೇಶದ ಕೂಗಿಗೆ ಇನ್ನಷ್ಟು ಬಲ? ಯಾಕೆ ಗೊತ್ತೇ?

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ಹಾಗೂ ಎನ್​ಸಿಪಿ ಮೈತ್ರಿ ಸತತ 15 ವರ್ಷಗಳ ಅಧಿಕಾರ ನಡೆಸಿತ್ತು. ಆದರೆ 2014ರಲ್ಲಿ ಬಿಜೆಪಿ ಹಾಗೂ ಶಿವಸೇನೆ ಮೈತ್ರಿ ಮೊದಲ ಬಾರಿಗೆ ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿದಿತ್ತು.
First published: April 17, 2019, 3:54 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading