ಇಂದಿನಿಂದ ಜಮ್ಮು ಕಾಶ್ಮೀರ ಪ್ರವಾಸಿಗರಿಗೆ ಮುಕ್ತ; 2 ತಿಂಗಳ ಬಳಿಕ ನಿರ್ಬಂಧ ತೆರವುಗೊಳಿಸಿದ ಸರ್ಕಾರ

ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ವರ್ಷದ ಮೊದಲ ಏಳು ತಿಂಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದರು.

Latha CG | news18-kannada
Updated:October 10, 2019, 11:47 AM IST
ಇಂದಿನಿಂದ ಜಮ್ಮು ಕಾಶ್ಮೀರ ಪ್ರವಾಸಿಗರಿಗೆ ಮುಕ್ತ; 2 ತಿಂಗಳ ಬಳಿಕ ನಿರ್ಬಂಧ ತೆರವುಗೊಳಿಸಿದ ಸರ್ಕಾರ
ಕಾಶ್ಮೀರ
  • Share this:
ನವದೆಹಲಿ(ಅ.10): ಕಳೆದ ಎರಡು ತಿಂಗಳಲ್ಲಿ ಜಮ್ಮು ಕಾಶ್ಮೀರ ತೊರೆಯುವಂತೆ ಪ್ರವಾಸಿಗರಿಗೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದ್ದು, ಇಂದಿನಿಂದ  ಕಾಶ್ಮೀರ ಎಲ್ಲರಿಗೂ ಮುಕ್ತವಾಗಿದೆ.

ಕೇಂದ್ರ ಸರ್ಕಾರ ಕಣಿವೆ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮೊದಲೇ ಜಮ್ಮು ಕಾಶ್ಮೀರವನ್ನು ತೊರೆಯುವಂತೆ ಎಲ್ಲಾ ಪ್ರವಾಸಿಗರಿಗೆ ಸೂಚನೆ ನೀಡಿತ್ತು. ಹೀಗಾಗಿ ಕಳೆದ ಎರಡು ತಿಂಗಳಿನಿಂದ ಕಾಶ್ಮೀರ ಪ್ರವಾಸಿಗರಿಲ್ಲದೆ ಬಣಗುಡುತ್ತಿತ್ತು. ಆದರೆ ಪ್ರವಾಸಿಗರಿಗೆ ಹೇರಿದ್ದ ನಿಷೇಧವನ್ನು ಹಿಂಪಡೆಯುವುದಾಗಿ  ಅ.8ರಂದು ರಾಜ್ಯಪಾಲ ಸತ್ಯಪಾಲ್ ಮಲಿಕ್​ ತಿಳಿಸಿದ್ದರು.

ಸೋಮವಾರ ಜಮ್ಮು ಕಾಶ್ಮೀರ ರಾಜ್ಯದ ಭದ್ರತಾ ಸಲಹೆಗಾರ ಹಾಗೂ ಮುಖ್ಯ ಕಾರ್ಯದರ್ಶಿಗಳ ಜೊತೆ ರಾಜ್ಯಪಾಲ ಸತ್ಯಪಾಲ್ ಮಲಿಕ್ ಕಣಿವೆ ರಾಜ್ಯದಲ್ಲಿ ಪ್ರವಾಸಿಗರ ರಕ್ಷಣೆ ಕುರಿತು ಚರ್ಚೆ ನಡೆಸಿದ್ದರು. ಪ್ರವಾಸಿಗರಿಗೆ ಕಣಿವೆ ರಾಜ್ಯಕ್ಕಿದ್ದ ಪ್ರವೇಶ ರದ್ದಿನ ಪ್ರಸ್ತಾವನೆಯನ್ನು ತೆಗದುಹಾಕುವಂತೆ ಗೃಹ ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದರು.

370ನೇ ವಿಧಿಯನ್ನು ರದ್ದು ಪಡಿಸಿದ ಬಳಿಕ ಭದ್ರತಾ ದೃಷ್ಟಿಯಿಂದ ಕಣಿವೆ ರಾಜ್ಯದಲ್ಲಿದ್ದ ಪ್ರವಾಸಿಗರನ್ನು ಹೊರ ಕಳಿಸಲಾಗಿತ್ತು. ಜೊತೆಗೆ ಯಾರೂ ಪ್ರವೇಶಿಸದಂತೆ ನಿಷೇಧ ಹೇರಲಾಗಿತ್ತು. ಇಂದಿನಿಂದ ಜಮ್ಮು-ಕಾಶ್ಮೀರ ಪ್ರವಾಸಿಗರಿಗೆ ಮುಕ್ತವಾಗಿದೆ.

ಎರಡು ಬೃಹತ್​ ಪ್ರತಿಭಟನೆಗಳಿಗೆ ಸಾಕ್ಷಿಯಾಗಲಿದೆ ಬೆಂಗಳೂರು; ತಂಡೋಪ ತಂಡವಾಗಿ ಬರುತ್ತಿದ್ದಾರೆ ರೈತರು

ಕಣಿವೆ ಪ್ರದೇಶ ಕಾಶ್ಮೀರದಲ್ಲಿ ಪ್ರವಾಸಿಗರಿಗೆ ಅಮರನಾಥ ಯಾತ್ರಿಗರಿಗೆ ಉಗ್ರರಿಂದ ಅಪಾಯ ಇರುವ ಸೂಚನೆ ಅರಿತಿದ್ದ ಕೇಂದ್ರ ಸರ್ಕಾರ ಇವರ ಭದ್ರತಾ ದೃಷ್ಟಿಯಿಂದ ಕಳೆದ ಆಗಸ್ಟ್ 2ರಂದು ಅಮರನಾಥ ಯಾತ್ರಿಕರು ಮತ್ತು ಪ್ರವಾಸಿಗರು ಕಾಶ್ಮೀರವನ್ನು ಕೂಡಲೇ ತೊರೆದು ಹೋಗಬೇಕೆಂದು ಸೂಚನೆ ನೀಡಿತ್ತು.
ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ 370ನೇ ವಿಧಿಯನ್ನು ರದ್ದುಪಡಿಸುವ ಮೂರು ದಿನಗಳ ಮುಂಚೆಯಷ್ಟೇ ಈ ಆದೇಶ ಹೊರಡಿಸಲಾಗಿತ್ತು. ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರವನ್ನು ಮೂರು ಭಾಗ ಮಾಡಿ  ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿತ್ತು.ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ವರ್ಷದ ಮೊದಲ ಏಳು ತಿಂಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಜುಲೈ ತಿಂಗಳಲ್ಲಿ ಸುಮಾರು 3,40,000 ಯಾತ್ರಿಕರು ಕಣಿವೆ ರಾಜ್ಯಕ್ಕೆ ಆಗಮಿಸಿದ್ದರು. ಆದರೆ ಆಗಸ್ಟ್ 5ರ ಬಳಿಕ ಕೇವಲ 150 ವಿದೇಶಿ ಪ್ರಯಾಣಿಕರು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಎಲ್ಲಾ ನೌಕರರಿಗೆ ದೀಪಾವಳಿ ಬಂಪರ್​ ಗಿಫ್ಟ್​: ತುಟ್ಟಿ ಭತ್ಯೆ ಮೂರು ಪಟ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ

First published: October 10, 2019, 10:06 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading