ತಿರುವನಂತಪುರಂ (ಆ. 7): ಕೇರಳದ ಮುನ್ನಾರ್ ಬಳಿ ಮಳೆಯಿಂದಾಗಿ ಭಾರೀ ಭೂಕುಸಿತ ಉಂಟಾಗಿದ್ದು, 10 ಸಾವನ್ನಪ್ಪಿದ್ದಾರೆ. ಈಗಾಗಲೇ ಮಣ್ಣಿನಡಿ ಸಿಲುಕಿದ್ದ 12 ಜನರನ್ನು ರಕ್ಷಣೆ ಮಾಡಲಾಗಿದ್ದು, 80ಕ್ಕೂ ಹೆಚ್ಚು ಜನರು ಮಣ್ಣಿನಡಿ ಸಿಲುಕಿದ್ದಾರೆ. ಉಳಿದವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಮೂಲಕ ಕೇರಳದಲ್ಲಿ ಈ ವರ್ಷವೂ ಪ್ರವಾಹ ತನ್ನ ಉಗ್ರರೂಪವನ್ನು ಪ್ರದರ್ಶಿಸಲಾರಂಭಿಸಿದೆ.
ಪ್ರತಿವರ್ಷ ದೇವರನಾಡೆಂದೇ ಕರೆಯಲಾಗುವ ಕೇರಳದಲ್ಲಿ ಪ್ರವಾಹದಿಂದ ಲಕ್ಷಾಂತರ ಎಕರೆ ಜಾಗ, ಮನೆಗಳು ಕೊಚ್ಚಿಹೋಗುತ್ತವೆ. ನೂರಾರು ಜನರು ಸಾವನ್ನಪ್ಪುತ್ತಾರೆ. ಈಗ ಮಳೆಯ ಆರ್ಭಟ ಹೆಚ್ಚಾಗುತ್ತಿದ್ದು, ಇಂದು ಮುನ್ನಾರ್ ಬಳಿ ನಡೆದ ಭೂಕುಸಿತದಲ್ಲಿ 10 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನ ರಾಜಮಲಾದಲ್ಲಿ ಇಂದು ಮುಂಜಾನೆ ಗುಡ್ಡ ಕುಸಿದಿದೆ. ಇದರ ಪರಿಣಾಮ ಹಲವರು ಮಣ್ಣಿನಡಿ ಸಿಲುಕಿದ್ದಾರೆ. ಕೊಡಗು ಜಿಲ್ಲೆಯಲ್ಲೂ ನಿನ್ನೆ ಇದೇ ರೀತಿ ಭಾಗಮಂಡಲದ ಅರ್ಚಕರ ಕುಟುಂಬ ಮಣ್ಣಿನಡಿ ಸಿಲುಕಿ ನಾಪತ್ತೆಯಾಗಿತ್ತು.
ಇದನ್ನೂ ಓದಿ: ನೆರೆಗೆ ನಲುಗಿರುವ ಕರ್ನಾಟಕ ರಾಜ್ಯಕ್ಕೆ ಕೇಂದ್ರ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಬೇಕು; ಎಚ್.ಡಿ. ಕುಮಾರಸ್ವಾಮಿ ಆಗ್ರಹ
ಮುನ್ನಾರ್ನಲ್ಲಿ ಉಂಟಾಗಿರುವ ಭೂಕುಸಿತದಲ್ಲಿ ಇನ್ನೂ 80ಕ್ಕೂ ಹೆಚ್ಚು ಜನರು ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಟೀ ಎಸ್ಟೇಟ್ಗಳಲ್ಲಿ ಕೆಲಸ ಮಾಡುತ್ತಿದ್ದವರು ಆ ಭಾಗದಲ್ಲಿ ವಾಸವಾಗಿದ್ದರು. ಮೂರು ದಿನಗಳಿಂದ ಕೇರಳದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹಲವೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲು ಕೂಡ ಸಾಧ್ಯವಾಗದಂತಾಗಿದೆ. ರಸ್ತೆಗಳಲ್ಲಿ ಬಿದ್ದ ಮರ, ಮಣ್ಣನ್ನು ತೆರವುಗೊಳಿಸಿ, ಮಣ್ಣಿನಡಿ ಸಿಲುಕಿದವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.
#WATCH 5 dead in landslide in Idukki's Rajamala, #Kerala; 10 rescued so far
Kerala CM has requested assistance from Indian Air Force for the rescue operation. pic.twitter.com/yWmwXHUxEz
— ANI (@ANI) August 7, 2020
ಇದನ್ನೂ ಓದಿ: Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ; ಚಾರ್ಮಾಡಿ ಘಾಟ್, ಶೃಂಗೇರಿ- ಮಂಗಳೂರು ಹೆದ್ದಾರಿ ಬಂದ್
Kerala: 5 people have lost their lives in a landslide at Rajamala in Idduki district; rescue operation underway.
Kerala Health Minister has said that a mobile medical team & 15 ambulances sent to the incident site. pic.twitter.com/yzxiRpfuyZ
— ANI (@ANI) August 7, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ