Kerala Floods| ಕೇರಳ ಪ್ರವಾಹ: 6 ಜನ ಸಾವು, 12 ಜನ ಕಣ್ಮರೆ, ಶಬರಿಮಲೆ ಯಾತ್ರೆ ಮುಂದೂಡಿಕೆ!

ಕೇರಳದ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್ ಮತ್ತು ತ್ರಿಶೂರ್ ಸೇರಿದಂತೆ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಸಿಎಂ ಪಿಣರಾಯಿ ವಿಜಯನ್ ಶನಿವಾರ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದು, ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸುವಂತೆ ಸೂಚಿಸಿದ್ದಾರೆ.

ಕೇರಳ ಪ್ರವಾಹದಲ್ಲಿ ಭೂ ಕುಸಿತ ಉಂಟಾಗಿರುವುದು.

ಕೇರಳ ಪ್ರವಾಹದಲ್ಲಿ ಭೂ ಕುಸಿತ ಉಂಟಾಗಿರುವುದು.

 • Share this:
  ಕೊಚ್ಚಿ (ಅಕ್ಟೋಬರ್​ 17); ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ (Kerala) ಭಾರೀ ಮಳೆಯಿಂದಾಗಿ ಶನಿವಾರ 6 ಜನ ಸಾವನ್ನಪ್ಪಿದ್ದಾರೆ ಮತ್ತು 12ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮಳೆಯಿಂದಾಗಿ ಹಲವು ಭಾಗಗಳಲ್ಲಿ ಪ್ರವಾಹ (Kerala Flood) ಮತ್ತು ಭೂಕುಸಿತ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದೆ. ಈ ನಡುವೆ ಅಧಿಕ ಮಳೆಯಿಂದಾಗಿ (Heavy Rain) ಕೇರಳ ದಕ್ಷಿಣ ಭಾಗದ ಎಲ್ಲಾ ಅಣೆಕಟ್ಟುಗಳು (DAM) ತುಂಬಿದ್ದು, ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪರಿಣಾಮ ಗುಡ್ಡಗಾಡು ಪ್ರದೇಶಗಳು, ಹಳ್ಳಿ-ಗ್ರಾಮ ಮತ್ತು ಸಣ್ಣ ಪಟ್ಟಣಗಳು ದ್ವೀಪದಂತಾಗಿವೆ. ಅನೇಕ ಗ್ರಾಮಗಳು ಹೊರಗಿನ ಪ್ರಪಂಚದಿಂದ ಸಂಪೂರ್ಣ ಸಂಪರ್ಕ ಕಡಿತಗೊಂಡಿವೆ. ಈ ನಡುವೆ ಕೇರಳ ಸರ್ಕಾರ ಅಯ್ಯಪ್ಪ ಸ್ವಾಮಿಯ ಶಬರಿಮಲೆ (Shabarimala) ಯಾತ್ರೆಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ರದ್ದು ಮಾಡಿದೆ.

  ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಮತ್ತು ರಾಜ್ಯದ ವಿಪತ್ತು ಪ್ರತಿಕ್ರಿಯೆ ಕಾರ್ಯವಿಧಾನವನ್ನು ಸಕ್ರಿಯಗೊಳಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳ ಎದುರು ಮಾತನಾಡಿರುವ ಪಿಣರಾಯಿ ವಿಜಯನ್, " ರಾಜ್ಯದ ಪರಿಸ್ಥಿತಿ ಗಂಭೀರವಾಗಿದೆ. ಆದರೆ, ಇತ್ತೀಚಿನ ಹವಾಮಾನ ವರದಿಗಳು ಶೀಘ್ರದಲ್ಲೇ ಮಳೆ ನಿಲ್ಲಲಿದೆ ಎಂದು ಸೂಚಿಸಿದ್ದು ಪರಿಸ್ಥಿತಿಯು ಇನ್ನಷ್ಟು ಹದಗೆಡುವ ಲಕ್ಷಣಗಳನ್ನು ಗೋಚರಿಸುತ್ತಿಲ್ಲ. ಹೀಗಾಗಿ ಈ ಪ್ರವಾಹವನ್ನು ಶೀಘ್ರದಲ್ಲೇ ನಿಭಾಯಿಸಲಾಗುವುದು" ಎಂದು ತಿಳಿಸಿದ್ದಾರೆ.

  "ಅಕ್ಟೋಬರ್ 18 ರಿಂದ ಮತ್ತೆ ತೆರೆಯಬೇಕಾದ ಕಾಲೇಜುಗಳನ್ನು ಅಕ್ಟೋಬರ್ 20 ರಿಂದ ತೆರೆಯಲಾಗುತ್ತದೆ ಮತ್ತು ಶಬರಿಮಲೆ ಯಾತ್ರೆಯನ್ನು ಅಕ್ಟೋಬರ್ 19 ರವರೆಗೆ ನಿರ್ಬಂಧಿಸಲುನಿರ್ಧರಿಸಲಾಗಿದೆ" ಎಂದು ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

  ಕೇರಳದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್:

  ಕೇರಳದ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್ ಮತ್ತು ತ್ರಿಶೂರ್ ಸೇರಿದಂತೆ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಸಿಎಂ ಪಿಣರಾಯಿ ವಿಜಯನ್ ಶನಿವಾರ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದು, ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸುವಂತೆ ಸೂಚಿಸಿದ್ದಾರೆ ಅಲ್ಲದೆ, ಕೊಟ್ಟಾಯಂ ಸೇರಿದಂತೆ ಪ್ರವಾಹಕ್ಕೆ ಸಿಲುಕಿರುವ ಜನರನ್ನು ಸ್ಥಳಾಂತರಿಸಲು ಎಲ್ಲಾ ವಿಧಾನಗಳನ್ನು ಬಳಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ. ಸುರಕ್ಷತಾ ಕ್ರಮಗಳು ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಅವರು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದಾರೆ ಎನ್ನಲಾಗಿದೆ.

  ಇದನ್ನೂ ಓದಿ: Karnataka Weather Today: ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ನಿರೀಕ್ಷೆ-16 ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ

  ಕೋವಿಡ್​ ನಿಯಮಗಳನ್ನು ಪಾಲಿಸಲು ಕರೆ:

  ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಿದ ನಂತರ ಕೋವಿಡ್​ ನಿಯಮಗಳನ್ನು ಪಾಲಿಸಬೇಕು ಎಂದು ಎಲ್ಲಾ ವೈದ್ಯ ಸಿಬ್ಬಂದಿ ಮತ್ತು ರಕ್ಷಣಾ ಸಿಬ್ಬಂದಿಗಳಿಗೆ ಕೇರಳ ಸರ್ಕಾರ ಎಚ್ಚರಿಕೆ ನೀಡಿದೆ. ರಕ್ಷಣಾ ಕಾರ್ಯಾಚರಣೆ ನಂತರ ಕೋವಿಡ್ -19 ಸುರಕ್ಷತಾ ಪ್ರೋಟೋಕಾಲ್‌ಗಳೊಂದಿಗೆ ಶಿಬಿರಗಳನ್ನು ಪ್ರಾರಂಭಿಸಬೇಕು. ಈ ಶಿಬಿರಗಳಲ್ಲಿ ಕುಡಿಯುವ ನೀರು ಮತ್ತು ಔಷಧಿಯ ಜೊತೆಗೆ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳು ಲಭ್ಯವಿರಬೇಕು ಎಂದು ಪಿಣರಾಯಿ ವಿಜಯನ್ ಸೂಚಿಸಿದ್ದಾರೆ.

  ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ವಿಶೇಷವಾಗಿ ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳ ಮೇಲೆ ಮಳೆ ಕೆಟ್ಟ ಪರಿಣಾಮ ಬೀರಿದೆ. ಸೇನೆ ಮತ್ತು ವಾಯುಪಡೆಯನ್ನು ಈ ಭಾಗದಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಶುಕ್ರವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಟ್ಟಾಯಂ ಮತ್ತು ಪತ್ತನಂತಿಟ್ಟಾ ಜಿಲ್ಲೆಗಳು ಅತ್ಯಂತ ಹೆಚ್ಚು ಹಾನಿಗೆ ಒಳಗಾಗಿವೆ ಎನ್ನಲಾಗಿದೆ.

  ಇದನ್ನೂ ಓದಿ: Petrol Price| ಸಾರ್ವಕಾಲಿಕ ದಾಖಲೆ ಬರೆದ ತೈಲ ಬೆಲೆ; ಬಡವರ ಪಾಲಿಗೆ ದುಬಾರಿಯಾಯ್ತು ಪೆಟ್ರೋಲ್-ಡೀಸೆಲ್!

  ಏರುತ್ತಿದೆ ನದಿ ನೀರಿನ ಮಟ್ಟ:

  ಪ್ರವಾಹದ ನೀರಿನಲ್ಲಿ ಸಿಲುಕಿರುವ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸುವುದು ಸೇರಿದಂತೆ ಕೊಟ್ಟಾಯಂ ಜಿಲ್ಲೆಯ ವಿವಿಧ ಭಾಗಗಳಿಂದ ಇಂತಹ ರಕ್ಷಣಾ ಕಾರ್ಯಾಚರಣೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿವೆ. ಕೊಲ್ಲಂ ಮತ್ತು ಕೊಟ್ಟಾಯಂ ಜಿಲ್ಲೆಗಳು ಸೇರಿದಂತೆ ಹಲವೆಡೆ ರಸ್ತೆಗಳ ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ನದಿಗಳ ನೀರಿನ ಮಟ್ಟವೂ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು ಜನ ಭಯದಲ್ಲಿ ಬದುಕುವಂತಾಗಿದೆ.
  Published by:MAshok Kumar
  First published: