ತಿರುವನಂತಪುರಂ (ಆ. 9): ಕೇರಳದ ಮುನ್ನಾರ್ ಬಳಿ ನಿನ್ನೆ ಭೂಕುಸಿತ ಉಂಟಾಗಿ 20 ಮನೆಗಳು ಕೊಚ್ಚಿಕೊಂಡು ಹೋಗಿದ್ದವು. 70ಕ್ಕೂ ಹೆಚ್ಚು ಜನರು ಮಣ್ಣಿನಡಿ ಸಿಲುಕಿದ್ದರು. ಈ ದುರಂತದ ಸಾವಿನ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ನಿನ್ನೆ 26 ಜನರ ಮೃತದೇಹಗಳನ್ನು ಹೊರಗೆಳೆಯಲಾಗಿತ್ತು. ಇಂದು ನಡೆದ ಕಾರ್ಯಾಚರಣೆ ವೇಳೆ ಮತ್ತೆರಡು ಶವಗಳು ಪತ್ತೆಯಾಗಿವೆ.
ಕೇರಳದ ಮುನ್ನಾರ್ ಬಳಿ ಮಳೆಯಿಂದಾಗಿ ಭಾರೀ ಭೂಕುಸಿತ ಉಂಟಾಗಿದ್ದು, ಒಟ್ಟು 28 ಜನರು ಸಾವನ್ನಪ್ಪಿದ್ದಾರೆ. ಸರ್ಕಾರದ ಮಾಹಿತಿ ಪ್ರಕಾರ, ಈ ಘಟನೆ ನಡೆದ ವೇಳೆ 78 ಜನರು ಅಲ್ಲಿ ವಾಸವಾಗಿದ್ದರು. ಅವರೆಲ್ಲರೂ ಮಣ್ಣಿನಡಿ ಸಿಲುಕಿದ್ದಾರೆ. ಅವರಲ್ಲಿ 12 ಜನರನ್ನು ರಕ್ಷಣೆ ಮಾಡಲಾಗಿದ್ದು, 28 ಮೃತದೇಹಗಳನ್ನು ಹೊರಗೆಳೆಯಲಾಗಿದೆ. ಉಳಿದವರು ಬದುಕಿರುವ ಸಾಧ್ಯತೆ ಕಡಿಮೆಯಿದ್ದು, ಅವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ದೇವರನಾಡೆಂದೇ ಕರೆಯಲಾಗುವ ಕೇರಳದಲ್ಲಿ ಪ್ರತಿವರ್ಷ ಪ್ರವಾಹದಿಂದ ಲಕ್ಷಾಂತರ ಎಕರೆ ಜಾಗ, ಮನೆಗಳು ಕೊಚ್ಚಿಹೋಗುತ್ತವೆ. ನೂರಾರು ಜನರು ಸಾವನ್ನಪ್ಪುತ್ತಾರೆ. ಈಗ ಮಳೆಯ ಆರ್ಭಟ ಹೆಚ್ಚಾಗುತ್ತಿದ್ದು, ಇಂದು ಮುನ್ನಾರ್ ಬಳಿ ನಡೆದ ಭೂಕುಸಿತದ ಮೂಲಕ ಈ ವರ್ಷವೂ ಕೇರಳದಲ್ಲಿ ಪ್ರವಾಹ ತನ್ನ ಆರ್ಭಟವನ್ನು ಶುರುಮಾಡಿದೆ.
ಇದನ್ನೂ ಓದಿ: Karnataka Rains: ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ
ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನ ರಾಜಮಲಾದಲ್ಲಿ ಶನಿವಾರ ಮುಂಜಾನೆ ಗುಡ್ಡ ಕುಸಿದಿದೆ. ಇದರ ಪರಿಣಾಮ ಹಲವರು ಮಣ್ಣಿನಡಿ ಸಿಲುಕಿದ್ದರು. ಇಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಟೀ ಎಸ್ಟೇಟ್ಗಳಲ್ಲಿ ಕೆಲಸ ಮಾಡುತ್ತಿದ್ದವರು ಆ ಭಾಗದಲ್ಲಿ ವಾಸವಾಗಿದ್ದರು. ಮೂರು ದಿನಗಳಿಂದ ಕೇರಳದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹಲವೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲು ಕೂಡ ಸಾಧ್ಯವಾಗದಂತಾಗಿದೆ. ರಸ್ತೆಗಳಲ್ಲಿ ಬಿದ್ದ ಮರ, ಮಣ್ಣನ್ನು ತೆರವುಗೊಳಿಸಿ, ಮಣ್ಣಿನಡಿ ಸಿಲುಕಿದವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
#save_estate_workers #MunarLandSlide#MunarFloods pic.twitter.com/Xbs7ieHVQc
— Ranganathapandiyar (@Rangana24024069) August 8, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ