ಕೇರಳದಲ್ಲಿ ವರುಣನ ಆರ್ಭಟಕ್ಕೆ 29 ಮಂದಿ ಬಲಿ; ಸಿಎಂ ವೈಮಾನಿಕ ಸಮೀಕ್ಷೆ


Updated:August 11, 2018, 9:29 AM IST
ಕೇರಳದಲ್ಲಿ ವರುಣನ ಆರ್ಭಟಕ್ಕೆ 29 ಮಂದಿ ಬಲಿ; ಸಿಎಂ ವೈಮಾನಿಕ ಸಮೀಕ್ಷೆ

Updated: August 11, 2018, 9:29 AM IST
- ನ್ಯೂಸ್18 ಕನ್ನಡ

ತಿರುವನಂತಪುರಂ(ಆ. 11): ದೇವರನಾಡು ಕೇರಳದಲ್ಲಿ ಮಳೆರಾಯ ತನ್ನ ರೌದ್ರನರ್ತನ ತೋರಿದ್ದಾನೆ. ಎಡೆಬಿಡದೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ, ಭೂಕುಸಿತ, ಮನೆಕುಸಿತ ಅವಘಡದಿಂದಾಗಿ ರಾಜ್ಯದಲ್ಲಿ ಈವರೆಗೂ 29 ಮಂದಿ ಜೀವ ಕಳೆದುಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದೇ ವೇಳೆ ಕೇರಳ ಮುಖ್ಯಮಂತ್ರಿ ಪಿನಾರಯಿ ವಿಜಯನ್ ಅವರು ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುವ ಪ್ರಯತ್ನ ಮಾಡಿದ್ದಾರೆ.

ಕೇರಳ ರಾಜ್ಯದ ಇಡುಕ್ಕಿ, ಚಿರತೋಣಿ, ಕಾಕ್ಕಿ, ಮುಲ್ಲಪೆರಿಯಾರ್, ಇಡಮಲಯಾರ್ ಸೇರಿದಂತೆ 24 ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹೀಗಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಇಡುಕ್ಕಿ ಎರ್ನಾಕುಲಂ ಜಿಲ್ಲೆಯಲ್ಲಿಯೇ ಹೆಚ್ಚಿನ ಹಾನಿ ಸಂಭವಿಸಿದೆ. ನಾಪತ್ತೆಯಾದವರ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಲ್ಲಿನ ರಾಜ್ಯ ಸರ್ಕಾರ ತಿಳಿಸಿದೆ.

ಕೇರಳದಲ್ಲಿ 50 ವರ್ಷಗಳ ಇತಿಹಾಸದಲ್ಲೇ ದಾಖಲೆ ಪ್ರಮಾಣದ ಮಳೆಯಾಗಿದೆ. 26 ವರ್ಷಗಳ ನಂತರ ಇಡುಕ್ಕಿ ಅಣೆಕಟ್ಟು ನಿರ್ಮಾಣವಾದ ನಂತರ ಡ್ಯಾಂನ ಎಲ್ಲ ಐದು ಗೇಟ್ ತೆರೆದು ನೀರನ್ನು ಬಿಡುತ್ತಿರುವುದು ಇದು ಮೂರನೇ ಬಾರಿ.

ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಕರೆ: 
ಕೇರಳದಲ್ಲಿ ಭೀಕರ ಮಳೆಯಿಂದಾಗಿ ಆಗುತ್ತಿರುವ ಹಾನಿ ಬಗ್ಗೆ ರಾಹುಲ್ ಗಾಂಧಿ ವಿಷಾದಿಸಿದ್ದಾರೆ. ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
Loading...
ಕೇಂದ್ರ ಗೃಹ ಸಚಿವರಿಂದ ನಾಳೆ ವೈಮಾನಿಕ ಸಮೀಕ್ಷೆ:
ಕೇರಳದಲ್ಲಿ ಮಳೆಯಿಂದಾಗಿ ಸಂಭವಿಸಿರುವ ಹಾನಿಗೆ ಕೇಂದ್ರ ಸರ್ಕಾರ ನೆರವಿನ ಅಭಯ ನೀಡಿದೆ. ಅಗತ್ಯ ಸಹಾಯ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಭರವಸೆ ನೀಡಿದ್ದಾರೆ. ನಾಳೆ (ಆ.12) ರಾಜನಾಥ ಸಿಂಗ್ ಅವರು ಕೇರಳಕ್ಕೆ ತೆರಳಿ, ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಹೇಳಿದ್ದಾರೆ.

ರಾಜ್ಯದಲ್ಲಿ ಮಳೆಯಬ್ಬರಕ್ಕೆ ಬ್ರೇಕ್:
ಕರ್ನಾಟಕದಲ್ಲಿ ಮಳೆಯ ಅಬ್ಬರ ತಗ್ಗಿದೆ. ಆದರೆ, ಕಳೆದ ಎರಡು ದಿನಗಳಿಂದ ಸತತವಾಗಿ ಮಳೆ ಸುರಿದ ಪರಿಣಾಮ ಮೈಸೂರು ಭಾಗದ ಡ್ಯಾಂಗಳು ಸೇರಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡುತ್ತಿರುವುದರಿಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಇನ್ನು ಕೇರಳ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕಪಿಲಾ ನದಿ ಪ್ರವಾಹ ಭೀತಿ ಮುಂದುವರೆದಿದೆ. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ನದಿ ನೀರು ಹರಿದ ಪರಿಣಾಮವಾಗಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಸತತವಾಗಿ ಮಳೆಯಾದ ಪರಿಣಾಮ ಕಾವೇರಿ ಮೈತುಂಬಿ ಹರಿಯುತ್ತಿದೆ.
First published:August 11, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ