Kerala Gold Smuggling: ಕೇರಳ ಚಿನ್ನದ ಸ್ಮಗ್ಲಿಂಗ್ ಪ್ರಕರಣ; ಎನ್​ಐಎ ತನಿಖೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ

Kerala Airport Gold Scam: ಕೇರಳದ ಚಿನ್ನದಕಳ್ಳಸಾಗಾಣಿಕೆ ಪ್ರಕರಣದ ತನಿಖೆಗೆ ಮಧ್ಯಸ್ಥಿಕೆ ವಹಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಪಿಣರಾಯಿ ವಿಜಯನ್ ಪತ್ರ ಬರೆದಿದ್ದರು. ಅದರ ಮಾರನೇ ದಿನವೇ ಕೇಂದ್ರ ಸರ್ಕಾರ ಈ ಪ್ರಕರಣವನ್ನು ಎನ್​ಐಎ ತನಿಖೆಗೆ ಹಸ್ತಾಂತರಿಸಿದೆ.

Sushma Chakre | news18-kannada
Updated:July 10, 2020, 7:57 AM IST
Kerala Gold Smuggling: ಕೇರಳ ಚಿನ್ನದ ಸ್ಮಗ್ಲಿಂಗ್ ಪ್ರಕರಣ; ಎನ್​ಐಎ ತನಿಖೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ
ಕೇರಳ ಚಿನ್ನದ ಸ್ಮಗ್ಲಿಂಗ್ ಆರೋಪಿ ಸರಿತ್​ನಲ್ಲಿ ಪೊಲೀಸರು ವಶಕ್ಕೆ ಪಡೆದಿರುವುದು
  • Share this:
ನವದೆಹಲಿ (ಜು. 10): ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದ 15 ಕೋಟಿ ರೂ. ಮೌಲ್ಯದ ಚಿನ್ನದ ಸ್ಮಗ್ಲಿಂಗ್ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳ (ಎನ್​ಐಎ)ಗೆ ವಹಿಸಿದೆ.

ಕೇರಳದ ತಿರುವನಂತಪುರಂನ ಚಿನ್ನದ ಕಳ್ಳಸಾಗಾಣಿಕೆ ಪ್ರಕರಣವನ್ನು ಎನ್​ಐಎಎ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಈ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ರೀತಿಯ ಚಿನ್ನದ ಸ್ಮಗ್ಲಿಂಗ್​ನಿಂದಾಗಿ ದೇಶದ ಭದ್ರತೆ ಮೇಲೆ ಪರಿಣಾಮಗಳು ಉಂಟಾಗುತ್ತವೆ. ಹೀಗಾಗಿ, ಈ ಪ್ರಕರಣದ ತನಿಖೆಯನ್ನು ಎನ್​ಐಎಗೆ ನೀಡಲಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: Kerala Gold Smuggling: ಕೇರಳದಲ್ಲಿ ಚಿನ್ನದ ಸ್ಮಗ್ಲಿಂಗ್ ಪ್ರಕರಣ; ಸಿಎಂ ಪಿಣರಾಯಿ ವಿಜಯನ್ ಮುಖ್ಯ ಕಾರ್ಯದರ್ಶಿಗೆ ಗೇಟ್​ಪಾಸ್​

ಈ ಪ್ರಕರಣದಿಂದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮೇಲೂ ಸಾಕಷ್ಟು ಆರೋಪ, ಅನುಮಾನಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಚಿನ್ನದ ಸ್ಮಗ್ಲಿಂಗ್ ಪ್ರಕರಣದ ತನಿಖೆಗೆ ಮಧ್ಯಸ್ಥಿಕೆ ವಹಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಪಿಣರಾಯಿ ವಿಜಯನ್ ಪತ್ರ ಬರೆದಿದ್ದರು. ಅದರ ಮಾರನೇ ದಿನವೇ ಕೇಂದ್ರ ಸರ್ಕಾರ ಈ ಪ್ರಕರಣವನ್ನು ಎನ್​ಐಎ ತನಿಖೆಗೆ ಹಸ್ತಾಂತರಿಸಿದೆ.


ಈ ಪ್ರಕರಣಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೇ ನೇರ ಹೊಣೆಗಾರರು ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಕೇರಳದ ಕಾಂಗ್ರೆಸ್ ನಾಯಕರು ಕೂಡ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದರು.

ಸೋಮವಾರ ಕೇರಳದ ವಿಮಾನ ನಿಲ್ದಾಣದಲ್ಲಿ ಗೃಹೋಪಯೋಗಿ ವಸ್ತುಗಳ ಜೊತೆಗೆ ಡಿಪ್ಲೋಮೆಟಿಕ್ ಬ್ಯಾಗ್​ನಲ್ಲಿ ಇರಿಸಿಕೊಂಡು ಬಂದಿದ್ದ, ಯುಎಇಯ ಧೂತವಾಸ  ಕಚೇರಿಯ ವಿಳಾಸವಿದ್ದ ಸೀಲ್ ಆಗಿದ್ದ ಬ್ಯಾಗ್​ನಲ್ಲಿ 30 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಾಣಿಕೆ ಮಾಡಲಾಗುತ್ತಿತ್ತು. 15 ಕೋಟಿ ರೂ. ಮೌಲ್ಯದ ಈ ಚಿನ್ನವನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಆದರೆ, ಕೇರಳದಲ್ಲಿರುವ ಯುಎಇಯ ಧೂತವಾಸ ಹಾಗೂ ಭಾರತದಲ್ಲಿರುವ ಯುಎಇ ರಾಯಭಾರಿ ಕಚೇರಿ ಆ ಚಿನ್ನಕ್ಕೂ ತಮಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿತ್ತು.

 
Published by: Sushma Chakre
First published: July 10, 2020, 7:52 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading