• Home
  • »
  • News
  • »
  • national-international
  • »
  • Kerala: ವಾಕ್ಸಮರದ ಮಧ್ಯೆ ಗವರ್ನರನ್ನೇ ಕೆಳಗಿಳಿಸಲು ನಿರ್ಧರಿಸಿದ ಕೇರಳ ಸರ್ಕಾರ!

Kerala: ವಾಕ್ಸಮರದ ಮಧ್ಯೆ ಗವರ್ನರನ್ನೇ ಕೆಳಗಿಳಿಸಲು ನಿರ್ಧರಿಸಿದ ಕೇರಳ ಸರ್ಕಾರ!

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹಾಗೂ ಕೇರಳ ಸಿಎಂ

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹಾಗೂ ಕೇರಳ ಸಿಎಂ

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಎಲ್‌ಡಿಎಫ್ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ವಜಾಗೊಳಿಸಲು ಕೇರಳದ ಎಡ ನೇತೃತ್ವದ ಸರ್ಕಾರ ಇಂದು ನಿರ್ಧರಿಸಿದೆ.

  • Trending Desk
  • Last Updated :
  • Kerala, India
  • Share this:

    ತಿರುವನಂತಪುರಂ: ಕೇರಳ (Kerala) ರಾಜ್ಯದಲ್ಲಿರುವ ಎಲ್ಲಾ ವಿಶ್ವವಿದ್ಯಾನಿಲಗಳ (Universities) ಉಪಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೇರಳ ರಾಜ್ಯ ಸರ್ಕಾರ (Kerala Government) ಮತ್ತು ಗವರ್ನರ್‌ ಆರಿಫ್‌ ಮೊಹಮ್ಮದ್‌ ಖಾನ್‌ ಅವರ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ಕೇರಳ ಸರ್ಕಾರವು ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಉಪಕುಲಪತಿಗಳನ್ನು ನೇಮಿಸಿತ್ತು. ಸರ್ಕಾರದ ಈ ನಡೆ ಗವರ್ನರ್‌ ಅವರ ಕೋಪಕ್ಕೆ ಕಾರಣವಾಗಿದ್ದು, ಎಲ್ಲಾ ಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು.


    ರಾಜ್ಯಪಾಲರ ವಿರುದ್ಧ ಕೇರಳ ಸರ್ಕಾರ ಕ್ರಮ


    ಪ್ರಸ್ತುತ ಕೇರಳದಲ್ಲಿ ಹಲವು ದಿನಗಳಿಂದ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ನಡೆಯುತ್ತಿದ್ದ ಶೀತಲ ಸಮರ ಮತ್ತೊಂದು ಪ್ರಮುಖ ಘಟ್ಟವನ್ನು ತಲುಪಿದೆ. ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಎಲ್‌ಡಿಎಫ್ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ವಜಾಗೊಳಿಸಲು ಕೇರಳದ ಎಡ ನೇತೃತ್ವದ ಸರ್ಕಾರ ಇಂದು ನಿರ್ಧರಿಸಿದೆ.


    ಇದನ್ನೂ ಓದಿ: ಸಾಲು ಸಾಲು ಸೋಲುಗಳ ನಂತರ ಸ್ಟಾರ್ಟ್​ಅಪ್​ನಲ್ಲಿ ಯಶಸ್ಸು, ಸಾರಾ ಟೌಕನ್‌ ಎಂಬ ಮಹಿಳೆಯ ಸಾಧನೆ ಕಥೆ


    ರಾಜ್ಯಪಾಲರನ್ನು ವಿವಿ ಕುಲಪತಿ ಹುದ್ದೆಯಿಂದ ತೆಗೆದುಹಾಕಲು ಸುಗ್ರೀವಾಜ್ಞೆ ತರಲು ನಿರ್ಧಾರ


    ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ಪದಚ್ಯುತಗೊಳಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ನಿರ್ಧರಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಂಪುಟವು ರಾಜ್ಯಪಾಲರನ್ನು ಹುದ್ದೆಯಿಂದ ತೆಗೆದುಹಾಕಲು ಸುಗ್ರೀವಾಜ್ಞೆ ಅಥವಾ ವಿಶೇಷ ಆದೇಶವನ್ನು ತರಲು ಒಪ್ಪಿಗೆ ನೀಡಿದೆ. ರಾಜ್ಯದ ಎಲ್ಲಾ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳನ್ನು ರಾಜೀನಾಮೆ ನೀಡುವಂತೆ ಖಾನ್ ಸೂಚಿಸಿದ ಕೆಲ ದಿನಗಳ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.


    ಆಯೋಗದ ಶಿಫಾರಸನ್ನು ಜಾರಿಗೊಳಿಸಲು ಸರ್ಕಾರದ ನಿರ್ಧಾರ


    ಇತ್ತೀಚೆಗೆ ಉಪಕುಲಪತಿಗಳ ನೇಮಕದಲ್ಲಿ ರಾಜ್ಯಪಾಲ ಆರಿಫ್ ಖಾನ್ ಅವರ ಮಧ್ಯಸ್ಥಿಕೆಯೇ ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ಕೆಳಗಿಳಿಸುವ ಆಯೋಗದ ಶಿಫಾರಸನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸುವುದಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಯುಜಿಸಿ ನಿಯಮಾವಳಿಗಳನ್ನು ಉಲ್ಲಂಘಿಸಿ ಉಪ ಕುಲಪತಿಗಳ ನೇಮಕ ಅನೂರ್ಜಿತವಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ ರಾಜ್ಯಪಾಲರು ಒಂಬತ್ತು ಉಪಕುಲಪತಿಗಳನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದರು.


    ಉಪಕುಲಪತಿಗಳ ನೇಮಕ ಸೇರಿದಂತೆ ವಿಶ್ವವಿದ್ಯಾಲಯಗಳ ಕಾರ್ಯವೈಖರಿ ಕುರಿತು ರಾಜ್ಯಪಾಲರ ಜತೆಗಿನ ಜಟಾಪಟಿಯಲ್ಲಿ ಪ್ರಸ್ತುತ ಕೇರಳ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.


    "ಖ್ಯಾತ ಶಿಕ್ಷಣ ತಜ್ಞರನ್ನು ನೇಮಕ ಮಾಡಲಾಗುವುದು"


    ಕೇರಳದ ಉನ್ನತ ಶಿಕ್ಷಣ ಸಚಿವ ಆರ್. ಬಿಂದು ಅವರು ರಾಜ್ಯಪಾಲರ ಬದಲಿಗೆ ಪರಿಣಿತ ಶಿಕ್ಷಣ ತಜ್ಞರನ್ನು ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಯನ್ನಾಗಿ ಮಾಡಲು ಸರ್ಕಾರ ಬಯಸಿದೆ ಎಂದು ಹೇಳಿದರು.


    ಎಪಿಜೆ ಅಬ್ದುಲ್ ಕಲಾಂ ವಿವಿಗೆ ಉಪಕುಲಪತಿ ನೇಮಿಸಿದ ಗವರ್ನರ್‌


    ಅಕ್ಟೋಬರ್‌ನಲ್ಲಿ, ವಿಶ್ವವಿದ್ಯಾನಿಲಯದ ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ತಿರುವನಂತಪುರಂನಲ್ಲಿರುವ ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ (ಕೆಟಿಯು) ಉಪಕುಲಪತಿಯಾಗಿ ಡಾ. ರಾಜಶ್ರೀ ಎಂಎಸ್ ಅವರನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು.‌ ಪ್ರಸ್ತುತ ಪ್ರಕರಣದಲ್ಲಿ ಪ್ರತಿವಾದಿ ರಾಜಶ್ರೀ ಅವರ ಹೆಸರನ್ನು ಮಾತ್ರ ಕುಲಪತಿಗೆ ಶಿಫಾರಸು ಮಾಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.


    ಕುಲಪತಿಗಳು ಶೋಧನಾ ಸಮಿತಿಯು ಶಿಫಾರಸು ಮಾಡಿದ ಹೆಸರುಗಳ ಸಮಿತಿಯಿಂದ ಉಪಕುಲಪತಿಯನ್ನು ನೇಮಿಸಬೇಕು


    ಯುಜಿಸಿ ನಿಯಮಾವಳಿಗಳ ಪ್ರಕಾರ, ಕುಲಪತಿಗಳು ಶೋಧನಾ ಸಮಿತಿಯು ಶಿಫಾರಸು ಮಾಡಿದ ಹೆಸರುಗಳ ಸಮಿತಿಯಿಂದ ಉಪಕುಲಪತಿಯನ್ನು ನೇಮಿಸಬೇಕು. ಆದ್ದರಿಂದ, ಒಂದು ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದೆ ಮತ್ತು ಹೆಸರಿನ ಸಮಿತಿಯನ್ನು ಶಿಫಾರಸು ಮಾಡದಿದ್ದಾಗ ಇತರ ಅಭ್ಯರ್ಥಿಗಳ ಹೆಸರನ್ನು ಪರಿಗಣಿಸಲು ಕುಲಪತಿಗೆ ಯಾವುದೇ ಆಯ್ಕೆ ಇರಲಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು. ಸುಪ್ರೀಂ ಕೋರ್ಟ್‌ ತೀರ್ಪಿನ ಬಳಿಕ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಪ್ರೊಫೆಸರ್ ಡಾ.ಸಿಜಾ ಥಾಮಸ್ ಅವರನ್ನು ತಿರುವನಂತಪುರಂನಲ್ಲಿರುವ ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನೇಮಿಸಿದರು.


    ಇದನ್ನೂ ಓದಿ: ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಫ್ರೀ ಶವರ್, ಒಡೆದ ನಲ್ಲಿಯ ವಿಡಿಯೋ ಫುಲ್ ವೈರಲ್


    ರಾಜ್ಯಪಾಲರು ಆದೇಶ ಹೊರಡಿಸಿದ್ದ ನೇಮಕಾತಿಯನ್ನು ತಡೆಹಿಡಿಯುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿತ್ತು. ನಿನ್ನೆ ನ್ಯಾಯಾಲಯವು ಸರ್ಕಾರದ ಈ ಅರ್ಜಿಯನ್ನು ತಳ್ಳಿಹಾಕಿದೆ. ಒಟ್ಟಾರೆ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ಆರೋಪ- ಪ್ರತ್ಯಾರೋಪಗಳು ನಡೆಯುತ್ತಿದ್ದು, ಇದು ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂಬ ಪ್ರಶ್ನೆಗೆ ಸದ್ಯದಲ್ಲಿಯೇ ಉತ್ತರ ಸಿಗಲಿದೆ.

    Published by:Precilla Olivia Dias
    First published: