Pinarayi Vijayan| ಮಹಿಳೆಯರ ಮೇಲಿನ ದೌರ್ಜನ್ಯ ತಡೆ, ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ; ಪಿಣರಾಯಿ ವಿಜಯನ್

Special Courts to Try Crimes Against Women: ಪ್ರಸ್ತುತ ಸಂದರ್ಭವನ್ನು ಪರಿಗಣಿಸಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಪ್ರಾರಂಭಿಸಲು ಆದ್ಯತೆ ನೀಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಪಿಣರಾಯಿ ವಿಜಯನ್.

ಪಿಣರಾಯಿ ವಿಜಯನ್.

 • Share this:
  ಕೊಚ್ಚಿ (ಅಕ್ಟೋಬರ್​26); ದೇಶದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು (Sexual Harassment Case Against Women's and Kids) ದಿನದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ. ಹೀಗಾಗಿ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಬಗ್ಗೆಯೂ ಆಗಿಂದಾಗ್ಗೆ ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಇಂದು ಹೇಳಿಕೆ ನೀಡಿರುವ ಕೇರಳದ (Kerala) ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan), "ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ (Sexual Harassment) ಪ್ರಕರರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಗಳನ್ನು(Special Court) ತೆರೆಯುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಉಳಿದಂತೆ ರಾಜ್ಯದಲ್ಲಿ ಯಾವುದೇ ಹೊಸ ನ್ಯಾಯಾಲಯವನ್ನು ಸ್ಥಾಪಿಸುವ ಯೋಜನೆಯ ಸದ್ಯಕ್ಕಿಲ್ಲ" ಎಂದು ತಿಳಿಸಿದ್ದಾರೆ.

  ಮಹಿಳೆಯರು ಮತ್ತು ಮಕ್ಕಳಿಗಾಗಿ ಕೇರಳದಲ್ಲಿ ವಿಶೇಷ ನ್ಯಾಯಾಲಯ:

  ದಕ್ಷಿಣ ರಾಜ್ಯದಲ್ಲಿ ಹೊಸ ನ್ಯಾಯಾಲಯಗಳ ಸ್ಥಾಪನೆ ಕುರಿತಂತೆ ಶಾಸಕ ಕ್ಸೇವಿಯರ್‌ ಚಿಟ್ಟಿಲಪ್ಪಿಲ್ಲಿ ಅವರು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದ್ದ ಪ್ರಶ್ನೆಗೆ ಪಿಣರಾಯಿ ವಿಜಯನ್ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. ಹೊಸ ನ್ಯಾಯಾಲಯಗಳ ಸ್ಥಾಪನೆಯ ಆದ್ಯತಾ ಪಟ್ಟಿಯಲ್ಲಿ ವಡಕ್ಕಂಚೇರಿ ಉಪ ನ್ಯಾಯಾಲಯವನ್ನು ಮೂರನೇ ಸ್ಥಾನಕ್ಕೆ ಸೇರಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

  "ಹೊಸ ನ್ಯಾಯಾಲಯಗಳ ಸ್ಥಾಪನೆ ಕುರಿತಂತೆ ಸರ್ಕಾರವು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಪ್ರಸ್ತುತ ಸಂದರ್ಭವನ್ನು ಪರಿಗಣಿಸಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಪ್ರಾರಂಭಿಸಲು ಆದ್ಯತೆ ನೀಡಲಾಗಿದೆ. ಈ ವಿಶೇಷ ನ್ಯಾಯಾಲಯಗಳು ಸಿದ್ಧವಾದ ನಂತರ, ಇತಹ ನ್ಯಾಯಾಲಯಗಳ ಸ್ಥಾಪನೆಯ ವಿಷಯವನ್ನು ಸರ್ಕಾರ ಪರಿಶೀಲಿಸುತ್ತದೆ" ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

  ಇದನ್ನೂ ಓದಿ: Congress Developments| Miss Call ಮೂಲಕ ಸದಸ್ಯತ್ವ ನೋಂದಣಿ-ಬೆಲೆ ಏರಿಕೆ ವಿರುದ್ಧ ಬೀದಿಗಿಳಿಯಲು ಕಾಂಗ್ರೆಸ್ ನಿರ್ಧಾರ!

  ಸಂತ್ರಸ್ತರ ನೆರವಿಗೆ ವಿಶೇಷ ಕೋರ್ಟ್ ಅಗತ್ಯ:

  ಇಡೀ ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಸಂಖ್ಯೆಯಲ್ಲಿ ಹೆಚ್ಚುತ್ತಿದ್ದು, ಸರ್ಕಾರಗಳು ಇಂತಹ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಯಾವ ಕ್ರಮವನ್ನು ಕೈಗೊಳ್ಳದೇ ಮೌನವಾಗಿರುವುದು ಬೇಸರದ ಸಂಗತಿ. ಇಂತಹ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಿ, ನ್ಯಾಯ ದೊರೆಯುವುದು ಎಂಬುದು ಕನಸಿನ ಮಾತು ಎನ್ನುವಂತಾಗಿದೆ.

  ಇದನ್ನೂ ಓದಿ: ಭಾರತದ ವಿರುದ್ಧದ ಪಾಕ್​ ಗೆಲುವಿಗೆ ಸಂಭ್ರಮ ಅರೋಪ; ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ವಿರುದ್ಧ UAPA ಕೇಸ್​!

  ನ್ಯಾಯಕ್ಕಾಗಿ ವರ್ಷಾನುಗಟ್ಟಲೆ ಕೋರ್ಟಿಗೆ ಅಲೆದಾಡುವ ಸಂತ್ರಸ್ಥರು ಕೊನೆಗೆ ‘ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣವನ್ನು ಕೈಬಿಡಲಾಗಿದೆ’ ಎಂಬ ನ್ಯಾಯಾಧೀಶರ ಮಾತಿನಿಂದ ಜರ್ಜರಿತಗೊಂಡಂತಹ ಘಟನೆಗಳು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ. ಈ ನಿಟ್ಟಿನಲ್ಲಿ ಕೇರಳ ಜಾರಿ ಮಾಡಿರುವ ವಿಶೇಷ ನ್ಯಾಯಾಲಯಗಳು ಶೀರ್ಘದಲ್ಲೇ ಕಾರ್ಯರೂಪಕ್ಕೆ ಬರಲಿ. ಕೇರಳ ಇಡೀ ದೇಶಕ್ಕೆ ಮಾದರಿಯಾಗಲಿ.
  Published by:MAshok Kumar
  First published: