ಗರ್ಭಿಣಿ ಆನೆ ಹತ್ಯೆ ಪ್ರಕರಣದಲ್ಲಿ ಓರ್ವ ಅರೆಸ್ಟ್​; ಅಷ್ಟಕ್ಕೂ ಈತ ಯಾರು ಗೊತ್ತಾ?

ಪ್ರಕರಣದಲ್ಲಿ ಒರ್ವನನ್ನು ಬಂಧಿಸಲಾಗಿದೆ. ಇನ್ನೂ ಅನೇಕರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಸಂಜೆ ವೇಳೆಗೆ ಮತ್ತಷ್ಟು ಜನರ ಬಂಧನ ಆಗಲಿದೆ, ಎಂದು ಅರಣ್ಯ ಇಲಾಖೆ ಸಚಿವ ಕೆ ರಾಜು ತಿಳಿಸಿದ್ದಾರೆ.

news18-kannada
Updated:June 5, 2020, 1:07 PM IST
ಗರ್ಭಿಣಿ ಆನೆ ಹತ್ಯೆ ಪ್ರಕರಣದಲ್ಲಿ ಓರ್ವ ಅರೆಸ್ಟ್​; ಅಷ್ಟಕ್ಕೂ ಈತ ಯಾರು ಗೊತ್ತಾ?
ನೀರಿನಲ್ಲಿ ನಿಂತಲ್ಲೇ ಸಾವನ್ನಪ್ಪಿದ ಆನೆ
  • Share this:
ಬೆಂಗಳೂರು (ಜೂ.5): ಗರ್ಭಿಣಿ ಆನೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಇನ್ನೂ ಕೆಲವರು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅನಾನನಸ್​ ಹಣ್ಣಿ​ನಲ್ಲಿ ಪಟಾಕಿ ಇಟ್ಟು ಅದನ್ನು ಆನೆಗೆ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಾಣಿ ಪ್ರಿಯರು ಈ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕೆಂಡ ಕಾರುತ್ತಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕೇರಳ ಸರ್ಕಾರ, ತಪ್ಪಿತಸ್ಥರನ್ನು ಪತ್ತೆಹಚ್ಚಲು ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಸದ್ಯ ಈ ತಂಡ ಓರ್ವನನ್ನು ಬಂಧಿಸಿದೆ.

ಬಂಧಿತ ವ್ಯಕ್ತಿ ಪಾಲಕ್ಕಾಡ್​ನ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಸಾಯುವುದಕ್ಕೂ ಮೊದಲು ಈತ ಕೆಲಸ ಮಾಡುವ ತೋಟದ ಬಳಿ  ಈ ಆನೆ ಕಾಣಿಸಿಕೊಂಡಿತ್ತು. ಬಂಧಿತನೇ ಆನೆಗೆ ಮದ್ದು ತುಂಬಿದ ಪೈನಾಪಾಲ್​ ತಿನ್ನಿಸಿದ್ದ ಎನ್ನಲಾಗಿದೆ. ಈ ವಿಚಾರವನ್ನು ಆತನೂ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

"ಪ್ರಕರಣದಲ್ಲಿ ಒರ್ವನನ್ನು ಬಂಧಿಸಲಾಗಿದೆ. ಇನ್ನೂ ಅನೇಕರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಸಂಜೆ ವೇಳೆಗೆ ಮತ್ತಷ್ಟು ಜನರ ಬಂಧನ ಆಗಲಿದೆ," ಎಂದು ಅರಣ್ಯ ಇಲಾಖೆ ಸಚಿವ ಕೆ ರಾಜು ತಿಳಿಸಿದ್ದಾರೆ.

ಇದನ್ನೂ ಓದಿ: ಗರ್ಭಿಣಿ ಆನೆಯ ದುರಂತ ಸಾವು ಪ್ರಕರಣ; ಕೇರಳ ಸರ್ಕಾರದಿಂದ ವಿಶೇಷ ತನಿಖಾ ತಂಡ ರಚನೆ

ಏನಿದು ಪ್ರಕರಣ:

ಕೇರಳದ ಪಾಲಕ್ಕಾಡ್​ನ ಸೈಲೆಂಟ್ ವ್ಯಾಲಿ ನ್ಯಾಷನಲ್ ಪಾರ್ಕ್​ (ಎಸ್​ವಿಎನ್​ಪಿ) ಆನೆ ಗರ್ಭಿಣಿಯಾಗಿತ್ತು. ಮೇ 27ರಂದು 15 ವರ್ಷದ ಈ ಆನೆ ಹತ್ತಿರದಲ್ಲಿದ್ದ ಊರೊಳಗೆ ಪ್ರವೇಶಿಸಿತ್ತು. ಊರಿನ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಆ ಆನೆಯನ್ನು ನೋಡಿ ಎಲ್ಲರೂ ಹೆದರಿ ಮನೆಯಲ್ಲಿ ಕುಳಿತಿದ್ದರು. ಆದರೆ, ಅವರಲ್ಲಿ ಯಾರೋ ಆನೆಗೆ ತಿನ್ನಲು ಪೈನಾಪಲ್ ಹಣ್ಣನ್ನು ನೀಡಿದರು. ಮೊದಲೇ ಹಸಿವಿನಿಂದ ಆಹಾರಕ್ಕಾಗಿ ಹುಡುಕಾಡುತ್ತಿದ್ದ ಆನೆ ಆ ಹಣ್ಣನ್ನು ತಿನ್ನುತ್ತಿದ್ದಂತೆ ಅದರೊಳಗಿದ್ದ ಮದ್ದುಗುಂಡು ಸ್ಫೋಟವಾಯಿತು. ಪೈನಾಪಲ್ ಹಣ್ಣಿನೊಳಗೆ ಸ್ಫೋಟಕವನ್ನು ತುಂಬಿದ್ದರಿಂದ ಆನೆಯ ಬಾಯಿಗೆ ತೀವ್ರ ಗಾಯವಾಗಿತ್ತು.ತನಗೆ ಪ್ರಾಣ ಹೋಗುವಷ್ಟು ನೋವಾದರೂ ಆ ಆನೆ ಅಲ್ಲಿದ್ದ ಯಾರೊಬ್ಬರಿಗೂ ತೊಂದರೆ ಕೊಡಲಿಲ್ಲ, ಮನೆ-ಅಂಗಡಿಗಳಿಗೂ ಹಾನಿ ಮಾಡಲಿಲ್ಲ. ತನ್ನ ನೋವನ್ನು ನುಂಗಿಕೊಂಡು ಕಾಡಿನೊಳಗೆ ಸೇರಿಕೊಂಡ ಆನೆ ನಂತರ ವೆಲ್ಲಿಯಾರ್​ ನದಿಯೊಳಗೆ ಇಳಿದು ತನ್ನ ಬಾಯಿ, ಸೊಂಡಿಲನ್ನು ನೀರಿನಲ್ಲಿಟ್ಟುಕೊಂಡು ನಿಂತಿತ್ತು. ಈ ವೇಳೆ ಅಲ್ಲಿಯೇ ಆನೆ ಮೃತಪಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್​ ವಿಶೇಷ ತಂಡ ರಚನೆ ಮಾಡಿದ್ದಾರೆ.

 
First published: June 5, 2020, 12:51 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading