ತಿರುವನಂತಪುರಂ (ಆ. 10): ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ಬಳಿ ಶನಿವಾರ ಭೂಕುಸಿತ ಉಂಟಾಗಿ 20 ಮನೆಗಳು ಕೊಚ್ಚಿಕೊಂಡು ಹೋಗಿದ್ದವು. 70ಕ್ಕೂ ಹೆಚ್ಚು ಜನರು ಮಣ್ಣಿನಡಿ ಸಿಲುಕಿದ್ದರು. ಈ ದುರಂತದಲ್ಲಿ ಇದುವರೆಗೂ 43 ಜನರ ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ. ಉಳಿದವರ ಶೋಧ ಕಾರ್ಯ ಮುಂದುವರೆದಿದೆ.
ಕೇರಳದ ಇಡುಕ್ಕಿಯಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ 20 ಮನೆಗಳಲ್ಲಿ ವಾಸವಾಗಿದ್ದ 78 ಜನರು ಮಣ್ಣಿನಡಿ ಸಿಲುಕಿದ್ದರು. ಶನಿವಾರ 26 ಜನರ ಶವಗಳನ್ನು ಪತ್ತೆಹಚ್ಚಲಾಗಿತ್ತು. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಮತ್ತೆ 17 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದುವರೆಗೂ 12 ಜನರನ್ನು ರಕ್ಷಿಸಲಾಗಿದೆ. ಉಳಿದವರ ಶವಗಳಿಗಾಗಿ ಎನ್ಡಿಆರ್ಎಫ್ ಸಿಬ್ಬಂದಿ ಇಂದು ಕೂಡ ಶೋಧ ಕಾರ್ಯ ನಡೆಸಲಿದ್ದಾರೆ.
ಇದನ್ನೂ ಓದಿ: Malgudi Museum: ಶಿವಮೊಗ್ಗದ ಅರಸಾಳು ರೈಲು ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ; ಶಂಕರ್ನಾಗ್ ಕಲ್ಪನೆಗೆ ಹೊಸ ರೂಪ
ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಮುನ್ನಾರ್ನ ರಾಜಮಲಾದಲ್ಲಿ ಶನಿವಾರ ಮುಂಜಾನೆ ಗುಡ್ಡ ಕುಸಿದಿತ್ತು. ಇದರ ಪರಿಣಾಮ ಹಲವರು ಮಣ್ಣಿನಡಿ ಸಿಲುಕಿದ್ದರು. ಇಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಟೀ ಎಸ್ಟೇಟ್ಗಳಲ್ಲಿ ಕೆಲಸ ಮಾಡುತ್ತಿದ್ದವರು ಆ ಭಾಗದಲ್ಲಿ ವಾಸವಾಗಿದ್ದರು. 4 ದಿನಗಳಿಂದ ಕೇರಳದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹಲವೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲು ಕೂಡ ಸಾಧ್ಯವಾಗದಂತಾಗಿದೆ. ರಸ್ತೆಗಳಲ್ಲಿ ಬಿದ್ದ ಮರ, ಮಣ್ಣನ್ನು ತೆರವುಗೊಳಿಸಿ, ಮಣ್ಣಿನಡಿ ಸಿಲುಕಿದವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
Pamba in full glory after shutters of Dam opened. Stay safe folks. #Pamba #Kerala #KeralaRains #Floods2020 pic.twitter.com/qvgrWlzlaz
— West Coast Rain Tracker (@RainTracker) August 9, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ