KHPT Recruitment 2020: ಕಮ್ಯುನಿಟಿ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ವಿದ್ಯಾಭ್ಯಾಸ ಪಡೆದವರಿಗೆ ಅವಕಾಶ

ವಿದ್ಯಾರ್ಹತೆ: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

JOB

JOB

  • Share this:
    ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) ಖಾಲಿ ಇರುವ ಕಮ್ಯುನಿಟಿ ಕೋ-ಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್​ಸೈಟ್​ಗೆ ತೆರಳಿ ಅರ್ಜಿ ಸಲ್ಲಿಸಬೇಕಾಗಿ ತಿಳಿಸಿದೆ.

    ವಿದ್ಯಾರ್ಹತೆ: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಯೋಮಿತಿ: ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

    ವೇತನದ ವಿವರ:
    ಕಮ್ಯನಿಟಿ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000 ರಿಂದ 17,0000ರೂ ವೇತನವನ್ನು ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಅರ್ಜಿ ಸಲ್ಲಿಸುವುದು ಹೇಗೆ?:
    ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ jobs@khpt.org ವಿಳಾಸಕ್ಕೆ ಮೇಲ್ ಮಾಡಬೇಕು. ಡಿಸೆಂಬರ್ 20,2020ರೊಳಗೆ ಅರ್ಜಿ ಸಲ್ಲಿಸಬಹುಬೇಕು.

    ಹೆಚ್ಚಿನ ಮಾಹಿತಿಗಾಗಿ  http://www.khpt.org/ ವೆಬ್​ಸಯಟ್​ಗೆ ಭೇಟಿ ನೀಡಿ.
    First published: