ಬಾತ್​ರೂಂಗೆ ಕರೆದೊಯ್ದು 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

6 ವರ್ಷದ ಬಾಲಕಿಯನ್ನು ಕಲ್ಯಾಣ ಮಂಟಪದಲ್ಲಿರುವ ಬಾತ್​ರೂಂಗೆ ಕರೆದೊಯ್ದು ಅತ್ಯಾಚಾರ ನಡೆಸಿದ ಯುವಕನ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ದೂರು ನೀಡಿದ್ದರು. ಆ ದೂರನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.

news18-kannada
Updated:December 9, 2019, 1:07 PM IST
ಬಾತ್​ರೂಂಗೆ ಕರೆದೊಯ್ದು 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ
ಪ್ರಾತಿನಿಧಿಕ ಚಿತ್ರ
  • Share this:
ನವದೆಹಲಿ (ಡಿ. 9): ತೆಲಂಗಾಣದ ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ, ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಬರ್ಬರ ಹತ್ಯೆ, ರಾಂಚಿ ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರದಂತಹ ವಿಕೃತಿಗಳು ನಡೆದು ಒಂದು ವಾರವೂ ಕಳೆದಿಲ್ಲ. ಅಷ್ಟರಲ್ಲಾಗಲೇ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಮದುವೆ ಸಭಾಂಗಣದ ಬಾತ್​ರೂಂಗೆ ಕರೆದುಕೊಂಡು ಹೋಗಿ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಪಶ್ಚಿಮ ಬಂಗಾಳದ ಕೊಲ್ಕತ್ತದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷದ ಯುವಕನನ್ನು ಬಂಧಿಸಲಾಗಿದೆ. 6 ವರ್ಷದ ಬಾಲಕಿಯನ್ನು ಕಲ್ಯಾಣ ಮಂಟಪದಲ್ಲಿರುವ ಬಾತ್​ರೂಂಗೆ ಕರೆದೊಯ್ದು ಅತ್ಯಾಚಾರ ನಡೆಸಿದ ಯುವಕನ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ದೂರು ನೀಡಿದ್ದರು. ಆ ದೂರನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಕಾರು ಅಪಘಾತದಲ್ಲಿ ಸಾವನ್ನಪ್ಪಿದ ತಂದೆ; ರಸ್ತೆಯವರೆಗೂ ತೆವಳಿ ಜೀವ ಉಳಿಸಿಕೊಂಡ ಅವಳಿ ಮಕ್ಕಳು

ಕಲ್ಯಾಣ ಮಂಟಪದ ಮೊದಲ ಮಹಡಿಯಲ್ಲಿರುವ ಬಾತ್​ರೂಂನಲ್ಲಿ ಬಾಲಕಿಯ ಮೇಲೆ ಆರೋಪಿ ಅತ್ಯಾಚಾರ ನಡೆಸಿದ್ದಾನೆ. ಅದೇ ಕಲ್ಯಾಣ ಮಂಟಪದಲ್ಲಿ ಕೆಲಸ ಮಾಡುವ ಯುವಕ ಮದುವೆ ಸಮಾರಂಭಕ್ಕೆ ಬಂದಿದ್ದ 6 ವರ್ಷದ ಬಾಲಕಿಯನ್ನು ಬಾತ್​ರೂಂನೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಆಕೆಯನ್ನು ಹುಡುಕಿಕೊಂಡು ಮೊದಲ ಮಹಡಿಗೆ ಬಂದ ತಾಯಿಯ ಬಳಿ ಆ ಬಾಲಕಿ ನಡೆದ ವಿಷಯವನ್ನು ಹೇಳಿದ್ದಾಳೆ ಎಂದು ಇಂಡಿಯನ್ ಎಕ್ಸ್​​ಪ್ರೆಸ್ ವರದಿ ಮಾಡಿದೆ. ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.
First published:December 9, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ