Konkan Railway Recruitment 2020: ಖಾಲಿರುವ ಟೆಕ್ನಿಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಖಾಲಿ ಇರುವ ಟೆಕ್ನೀಶಿಯನ್ ಹುದ್ದೆಗಳಿಗೆ ಎಸ್ಎಸ್ಎಲ್​ಸಿ ಮಾಡಿರುವವರು ಅರ್ಜಿ  ಸಲ್ಲಿಸಬಹುದಾಗಿದೆ.

Jobs

Jobs

  • Share this:
    ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ (ಕೆಆರ್ಸಿಎಲ್) ಖಾಲಿ ಇರುವ 58 ಟೆಕ್ನೀಶಿಯನ್-III ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ನವೆಂಬರ್ 27,2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

    ವಿದ್ಯಾರ್ಹತೆ: ಖಾಲಿ ಇರುವ ಟೆಕ್ನೀಶಿಯನ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನುಇಲೆಕ್ಟ್ರೀಷಿಯನ್, ಇಲೆಕ್ಟ್ರಾನಿಕ್ಸ್‌ ಮೆಕ್ಯಾನಿಕ್, ಎಲ್‌ಟಿ ಎಕ್ವಿಪ್‌ಮೆಂಟ್, ವೈಯರ್‌ಮ್ಯಾನ್, ಮೆಕ್ಯಾನಿಕ್ ಹೆಚ್‌ಟಿ, ಕೇಬಲ್ ಜಾಯಿಂಟಿಂಗ್, ಹುದ್ದೆಗಳನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

    ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ ವಯೋಮಿತಿಯೊಳಗಿರುವ ಆಸಕ್ತರು ಅರ್ಜಿ ಸಲ್ಲಿಬಹುದಾಗಿದೆ.

    ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
    ಆಯ್ಕೆವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 500-ರೂ, ಎಸ್​ಸಿ / ಎಸ್​ಟಿ / ಒಬಿಸಿ / ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳು 250-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಆನ್​ಲೈನ್​  ಮೂಲಕ ಪಾವತಿ ಮಾಡಬೇಕಿದೆ.

    ಅರ್ಜಿ ಸಲ್ಲಿಸುವುದು ಹೇಗೆ?: ಅಧಿಕೃತ ವೆಬ್ಸೈಟ್ http://konkanrailway.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ನವೆಂಬರ್ 27,2020ರೊಳಗೆ ಅರ್ಜಿ ಸಲ್ಲಿಸಲು ನಿನೆಯ ದಿನಾಂಕವಾಗಿದೆ.
    Published by:Harshith AS
    First published: