KSDA Recruitment 2020: ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ!

ಕೃಷಿ ಬೆಲೆ ಆಯೋಗದಲ್ಲಿ ಕಾರ್ಯ ನಿರ್ವಹಿಸಲು ತಾಂತ್ರಿಕ ಸಲಹೆಗಾರರು, ಹೆಚ್ಚುವರಿ ತಾಂತ್ರಿಕ ಸಲಹೆಗಾರರು ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಹ್ವಾನ ಹೊರಡಿಸಿದೆ. ಕೃಷಿ ಬೆಲೆ ಆಯೋಗದಲ್ಲಿ ಕಾರ್ಯ ನಿರ್ವಹಿಸಲು ತಾಂತ್ರಿಕ ಸಲಹೆಗಾರರು, ಹೆಚ್ಚುವರಿ ತಾಂತ್ರಿಕ ಸಲಹೆಗಾರರು ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಅ. 16ರೊಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ.

  ವಿದ್ಯಾರ್ಹತೆ:

  ಪ್ರಕಟನೆಯಲ್ಲಿ ತಿಳಿಸಿರುವಂತೆ ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ.

  ವೇತನ:

  ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

  ಅರ್ಜಿ ಶುಲ್ಕ:

  ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

  ಅರ್ಜಿ ಸಲ್ಲಿಸುವುದು ಹೇಗೆ?:

  ಆಸಕ್ತ ಅಭ್ಯರ್ಥಿಗಳು ಕೃಷಿ ಇಲಾಖೆಯ ಅಧಿಕೃತ ವೆಬ್‌ಸೈಟ್ https://raitamitra.karnataka.gov.in/ ಗೆ ಭೇಟಿ ನೀಡಿ.  ಅಲ್ಲಿ ನೀಡಲಾಗಿರುವ ಅರ್ಜಿಯನ್ನ ಭರ್ತಿ ಮಾಡಬೇಕು. ಅಕ್ಟೋಬರ್ 16,2020ರ ಒಳಗೆ ಅರ್ಜಿ ಸಲ್ಲಿಸಬೇಕು.  ಕಚೇರಿ ವಿಳಾಸ:

  ಕೃಷಿ ಬೆಲೆ ಆಯೋಗ ಕಚೇರಿ, ಕೃಷಿ ಆಯಿಕ್ತಾಲಯ ಆವರಣ, ಶೇಷಾದ್ರಿರಸ್ತೆ, ಬೆಂಗಳೂರು -01
  Published by:Harshith AS
  First published: