Ashish Mishra Denied Bail| ಲಖೀಂಪುರ್​ ರೈತ ಹತ್ಯಾಕಾಂಡ; ಆಶೀಶ್ ಮಿಶ್ರಾಗೆ ಜಾಮೀನು ನಿರಾಕರಣೆ, ಮತ್ತಿಬ್ಬರ ಬಂಧನ

ಆಶಿಶ್ ಮಿಶ್ರಾನ ಆಪ್ತ ಸ್ನೇಹಿತರೆಂದು ಹೇಳಲಾಗುವ ಅಂಕಿತ್ ದಾಸ್ ಮತ್ತು ಕಾಳೆ ಲಖಿಂಪುರದ ಕ್ರೈಂ ಬ್ರಾಂಚ್ ಕಚೇರಿಯಲ್ಲಿ ಎಸ್ಐಟಿ ಮುಂದೆ ಹಾಜರಾಗಿದ್ದರು. ಅಕ್ಟೋಬರ್ 3 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಸ್ ಮತ್ತು ಕಾಲೇ ಅವರನ್ನು ವಿಚಾರಣೆಗಾಗಿ ತನಿಖಾಧಿಕಾರಿಗಳು ಕರೆಸಿಕೊಂಡಿದ್ದರು.

ಬಂಧಿತ ಆಶೀಶ್ ಮಿಶ್ರಾ.

ಬಂಧಿತ ಆಶೀಶ್ ಮಿಶ್ರಾ.

 • Share this:
  ಲಖ್ನೋ (ಅಕ್ಟೋಬರ್​ 14); ಉತ್ತರ ಪ್ರದೇಶದ ಲಖೀಂಪುರ್​ ಖೇರಿ ರೈತ ಹತ್ಯಾಕಾಂಡ (Lakhimpur Kheri Massacre) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ (Ajay Mishra) ಅವರ ಮಗ ಆಶೀಶ್ ಮಿಶ್ರಾಗೆ (Ashish Mishra) ನ್ಯಾಯಾಲಯವು ಬುಧವಾರ ಜಾಮೀನು ನಿರಾಕರಿಸಿದೆ. ಅಲ್ಲದೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸಿದೆ ಎಂದು ತಿಳಿದುಬಂದಿದೆ. ಬಂಧಿತರನ್ನು  ಅಂಕಿತ್ ದಾಸ್ ಮತ್ತು ಲತೀಫ್ ಅಲಿಯಾಸ್ ಕಾಳೆ  ಎಂದು ಗುರುತಿಸಲಾಗಿದೆ. ವಿಶೇಷ ತನಿಖಾ ತಂಡದ (SIT) ಮುಂದೆ ಹಾಜರಾದ ಅಂಕಿತ್ ದಾಸ್ ಮತ್ತು ಲತೀಫ್ ಅಲಿಯಾಸ್ ಕಾಳೆ ಅವರನ್ನು ವಿಚಾರಣೆಯ ನಂತರ ಬಂಧಿಸಲಾಯಿತು. ಬಂಧನಕ್ಕೆ ಒಳಗಾದ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

  ಅಕ್ಟೋಬರ್​ 03 ರಂದು ನಡೆದ ಲಖೀಂಪುರ್​ ಖೇರಿ ರೈತ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ 13 ಜನರ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ. ಆದರೆ, ಈವರೆಗೆ ಪೊಲೀಸರು 6 ಜನರನ್ನು ಮಾತ್ರ ಬಂಧಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

  ಆಶೀಶ್ ಮಿಶ್ರಾ ಜಾಮೀನು ನಿರಾಕರಣೆ;

  ಆಶೀಶ್ ಮಿಶ್ರಾ ಮತ್ತು ಅವನ ಸಹಚರ ಆಶಿಶ್ ಪಾಂಡೆ ಬುಧವಾರ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ಅದನ್ನು ತಿರಸ್ಕರಿಸಿದೆ. ಸುಮಾರು 12 ಗಂಟೆಗಳ ವಿಚಾರಣೆಯ ನಂತರ ವಿಶೇಷ ತನಿಖಾ ತಂಡದಿಂದ ಅಕ್ಟೋಬರ್ 9 ರಂದು ಬಂಧಿಸಲ್ಪಟ್ಟ ಆಶಿಶ್ ಮಿಶ್ರಾನನ್ನು, ಮಂಗಳವಾರದಿಂದ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಶಿಶ್ ಮಿಶ್ರಾ, ಲುವಕುಶ್, ಆಶಿಶ್ ಪಾಂಡೆ, ಭಾರತಿ, ಅಂಕಿತ್ ಮತ್ತು ಕಾಳೆ ಎಂಬ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

  ಯಾರು ಈ ಅಂಕಿತ್ ದಾಸ್ ಮತ್ತು ಕಾಳೆ;

  ಆಶಿಶ್ ಮಿಶ್ರಾನ ಆಪ್ತ ಸ್ನೇಹಿತರೆಂದು ಹೇಳಲಾಗುವ ಅಂಕಿತ್ ದಾಸ್ ಮತ್ತು ಕಾಳೆ ಲಖಿಂಪುರದ ಕ್ರೈಂ ಬ್ರಾಂಚ್ ಕಚೇರಿಯಲ್ಲಿ ಎಸ್ಐಟಿ ಮುಂದೆ ಹಾಜರಾಗಿದ್ದರು. ಅಕ್ಟೋಬರ್ 3 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಸ್ ಮತ್ತು ಕಾಲೇ ಅವರನ್ನು ವಿಚಾರಣೆಗಾಗಿ ತನಿಖಾಧಿಕಾರಿಗಳು ಕರೆಸಿಕೊಂಡಿದ್ದರು.

  ಏನಿದು ಘಟನೆ!;

  ಅಕ್ಟೋಬರ್ 3 ರಂದು ಯುಪಿ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಲಖಿಂಪುರ್‌ ಖೇರಿಗೆ ನೀಡಿದ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದ ರೈತರ ಮೇಲೆ ಕಾರುಗಳನ್ನು ಹರಿಸಲಾಗಿತ್ತು. ಈ ಘಟನೆಯಲ್ಲಿ 4 ಜನ ರೈತರು ಮೃತಪಟ್ಟಿದ್ದರೆ, ನಂತರ ನಡೆದ ಗಲಭೆಯಲ್ಲಿ 5 ಜನ ಮೃತಪಟ್ಟಿದ್ದರು. ಈ ಘಟನೆಗೆ ಸಚಿವ ಅಜಯ್ ಮಿಶ್ರಾ ಮತ್ತು ಅವರ ಮಗ ಆಶೀಶ್ ಮಿಶ್ರಾ ಕಾರಣ ಎಂಬುದು ರೈತ ಆರೋಪ.

  ಇದನ್ನೂ ಓದಿ: Lakhimpur Kheri Massacre: ಯೂತ್ ಕಾಂಗ್ರೆಸ್ಸಿನಿಂದ ದೆಹಲಿಯಲ್ಲಿ ಪಂಜಿನ ಮೆರವಣಿಗೆ, ಕೇಂದ್ರ ಸಚಿವರ ವಜಾಕ್ಕೆ ಆಗ್ರಹ

  ಕಾಂಗ್ರೆಸ್​ನಿಂದ ಪಂಜಿನ ಮೆರವಣಿಗೆ;

  ಉತ್ತರ ಪ್ರದೇಶದ ಲಖೀಂಪುರ್​ ಖೇರಿಯಲ್ಲಿ ರೈತರ ಹತ್ಯಾಕಾಂಡಕ್ಕೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್​ ಮಿಶ್ರಾ ಕಾರಣಕರ್ತನಾಗಿದ್ದು ಕೂಡಲೇ ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾ ಮಾಡಬೇಕು. ಲಖೀಂಪುರ್ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ರೈತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಸಂಜೆ ಪಂಜಿನ ಮೆರವಣಿಗೆ ಮಾಡಲಾಯಿತು.

  ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ., ದೇಶದಲ್ಲಿ ಅನ್ನದಾತನಿಗೆ ಕಿರುಕುಳ ನೀಡುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿ ಎಂದು ತೋರುತ್ತದೆ‌. ಇದು ವಿಫಲವಾದ ತಂತ್ರ. ರೈತರು ಈಗ ಬಿಜೆಪಿಯ ಕುಟಿಲ ನೀತಿ ಮತ್ತು ತಂತ್ರಗಳನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕ್ಷಮಿಸಲಾಗದ ಕೃತ್ಯ ನಡೆಸಿರುವುದು ಮತ್ತು ರೈತರನ್ನು ನಿರ್ದಯವಾಗಿ ಹತ್ಯೆ ಮಾಡಿರುವುದು ಭಾರತದ ಆತ್ಮವನ್ನು ಕದಡಿದೆ.

  ಇದನ್ನೂ ಓದಿ: Lakhimpur Kheri Massacre| ರಾಷ್ಟ್ರಪತಿ ಭೇಟಿ ಮಾಡಿ ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಕ್ಕೆ ಆಗ್ರಹಿಸಿದ ಕಾಂಗ್ರೆಸ್ ನಿಯೋಗ

  ಲಖೀಂಪುರ್ ಖೇರಿ ಘಟನೆಯಲ್ಲಿ ಬಿಜೆಪಿ ಸರ್ಕಾರದ ವರ್ತನೆ ಮೊದಲಿಗಿಂತಲೂ ಅನುಮಾನಾಸ್ಪದವಾಗಿದೆ. ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ಸತ್ಯ ಏನು ಎಂಬುದು ಎಲ್ಲರಿಗೂ ತಿಳಿದಿದೆ. ಸರ್ಕಾರದ ಲಕ್ಷಗಟ್ಟಲೆ ಪ್ರಯತ್ನಗಳ ನಂತರವೂ ರೈತರ ನ್ಯಾಯದ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
  Published by:MAshok Kumar
  First published: