ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ (Lakhimpur Kheri Violence) ಪ್ರಕರಣದ (Case) ಪ್ರಮುಖ ಆರೋಪಿ (Accused) ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಉತ್ತರ ಪ್ರದೇಶ ಸರ್ಕಾರದಿಂದ ಪ್ರತಿಕ್ರಿಯೆ ಏನು ಎಂದು ಕೇಳಿದೆ. ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಗಿದ್ದಾರೆ. ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಆರೋಪಿ ಆಶಿಶ್ ಮಿಶ್ರಾ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಮುಕುಲ್ ರೋಹ್ತಾಹಿ ಮತ್ತು ರಂಜಿತ್ ಕುಮಾರ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್ ಜಾರಿ
ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂ.ಎಂ. ಸುಂದರೇಶ್ ಅವರ ಪೀಠ, ಆರೋಪಿ ಆಶಿಶ್ ಮಿಶ್ರಾ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ವೇಳೆ ಉತ್ತರ ಪ್ರದೇಶ ಸರಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದರು
ಆರೋಪಿ ಆಶಿಶ್ ಮಿಶ್ರಾ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ. ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ಅಕ್ಟೋಬರ್ 3, 2021 ರಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ರೈತರ ಪ್ರತಿಭಟನೆ ನಡೆದಿತ್ತು. ಈ ವೇಳೆ ನಡೆದಿದ್ದ ಹಿಂಸಾಚಾರದಲ್ಲಿ ಎಂಟು ಜನರು ಮೃತಪಟ್ಟಿದ್ದರು.
ಇದನ್ನೂ ಓದಿ: ಕಾರು ಪ್ರಯಾಣಿಕರೇ ಎಚ್ಚೆತ್ತುಕೊಳ್ಳಿ! ಸೈರಸ್ ಮಿಸ್ತ್ರಿ ಸಾವಿಗೆ ಸೀಟ್ ಬೆಲ್ಟ್ ಕಾರಣ
ಜುಲೈ 26 ರಂದು ಆರೋಪಿ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ವಜಾ ಮಾಡಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂ.ಎಂ.ಸುಂದರೇಶ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ನಾವು ನೋಟಿಸ್ ನೀಡುತ್ತಿದ್ದೇವೆ ಎಂದು ಪೀಠ ಹೇಳಿದೆ.
ಸೆಪ್ಟೆಂಬರ್ 26ರಂದು ಮುಂದಿನ ವಿಚಾರಣೆಗೆ ದಿನಾಂಕ ನಿಗದಿ
ಅರ್ಜಿ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಸೆಪ್ಟೆಂಬರ್ 26ರಂದು ಮುಂದಿನ ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ. ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್ ಐಆರ್ ನ ಪ್ರಕಾರ, ಎಸ್ ಯುವಿಯಿಂದ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ಆಶಿಶ್ ಮಿಶ್ರಾ ಆ ಎಸ್ ಯುವಿಯಲ್ಲಿದ್ದರು.
ಘಟನೆಯ ನಂತರ ಸಿಟ್ಟಿಗೆದ್ದಿದ್ದ ರೈತರು, ವಾಹನದ ಚಾಲಕ ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಥಳಿಸಿದ್ದರು. ಆ ಹಿಂಸಾಚಾರದಲ್ಲಿ ಒಬ್ಬ ಪತ್ರಕರ್ತರೂ ಮೃತಪಟ್ಟಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ವೇಳೆ, ಆರೋಪಿ ಮಿಶ್ರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಘಟನೆಯನ್ನು ಉಲ್ಲೇಖಿಸಿದ್ದಾರೆ.
ಈ ಬಗ್ಗೆ ದಾಖಲಾದ ವಿವಿಧ ಎಫ್‌ಐಆರ್‌ಗಳಲ್ಲಿ ಆರೋಪಿ ವಾಹನದಲ್ಲಿ ಕುಳಿತಿದ್ದಾರೆ. ಆದರೆ ಅವರು ಚಾಲನೆ ಮಾಡಲಿಲ್ಲ. ಕಾರಿನ ಚಾಲಕನನ್ನು ವಾಹನದಿಂದ ಹೊರ ತೆಗೆದು ಆತನನ್ನು ಮತ್ತು ಇತರ ಇಬ್ಬರನ್ನು ಹೊಡೆದು ಸಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನಾನು (ಮಿಶ್ರಾ) ಕಾರಿನಲ್ಲಿದ್ದೆ. ಮತ್ತು ಗಾಳಿಯಲ್ಲಿ ಗುಂಡು ಹಾರಿಸಿ ಓಡಿಹೋದೆ ಎಂದು ವರದಿ ಸಲ್ಲಿಸಿದ ವ್ಯಕ್ತಿ, ಅಂತಿಮವಾಗಿ ಅವರು ಪ್ರತ್ಯಕ್ಷದರ್ಶಿಯಲ್ಲ ಎಂದು ರೋಹಟಗಿ ಹೇಳಿದ್ದಾರೆ. ಈ ಪ್ರಕರಣದಲ್ಲಿ ಮಿಶ್ರಾ ಅವರಿಗೆ ಈ ಹಿಂದೆ ಜಾಮೀನು ನೀಡಲಾಗಿತ್ತು. ಏಕೆಂದರೆ ಅವರ ವಿರುದ್ಧ ಯಾವುದೇ ನೇರ ಆಪಾದನೆ ಇರಲಿಲ್ಲ.
ಇದನ್ನೂ ಓದಿ: ಚೀನಾ ನಾಗರಿಕರ ಸ್ಥಿತಿ ನರಕ; ಕಂಡು ಕೇಳರಿಯದ ಭೂಕಂಪ
ದೂರುದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮಿಶ್ರಾ ಅವರಿಗೆ ನೀಡಿದ್ದ ಜಾಮೀನು ರದ್ದುಗೊಳಿಸಲಾಗಿದೆ. ಈ ವರ್ಷ ಏಪ್ರಿಲ್ 18 ರಂದು ಸುಪ್ರೀಂ ಕೋರ್ಟ್ ಮಿಶ್ರಾ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿತ್ತು ಮತ್ತು ಒಂದು ವಾರದೊಳಗೆ ಶರಣಾಗುವಂತೆ ಸೂಚಿಸಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ