Lakhimpur Kheri Violence| ಲಖೀಂಪುರ್ ಖೇರಿ ಹಿಂಸಾಚಾರ; ಪ್ರಕರಣ ತನಿಖೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿ ರಚನೆ!
ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರಿಗೆ ಪತ್ರ ಬರೆದಿದ್ದ ಉತ್ತರ ಪ್ರದೇಶದ ವಕೀಲರು, ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದರು.
ಲಖ್ನೋ (ಅಕ್ಟೋಬರ್ 07); ಲಖಿಂಪುರ್ ಖೇರಿ (Lkhimpur Kheri) ಜಿಲ್ಲೆಯಲ್ಲಿ ನಡೆದ ಹತ್ಯಾಕಾಂಡದಲ್ಲಿ ರೈತರು, ಪತ್ರಕರ್ತ ಸೇರಿದಂತೆ 9 ಜನರು ಸಾವನಪ್ಪಿದ ಪ್ರಕರಣವನ್ನು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯು ತನಿಖೆ ನಡೆಸಲಿದೆ ಮತ್ತು ಎರಡು ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ. ಅಲಹಾಬಾದ್ ಹೈಕೋರ್ಟ್ (Alahabad high Court) ನಿವೃತ್ತ ನ್ಯಾಯಾಧೀಶ ಪ್ರದೀಪ್ ಕುಮಾರ್ ಶ್ರೀವಾಸ್ತವ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ತನಿಖೆ ನಡೆಸಲಿದೆ ಎಂದು ಉತ್ತರ ಪ್ರದೇಶ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದಾರೆ. ಎರಡು ತಿಂಗಳ ಅವಧಿಯಲ್ಲಿ ತನಿಖೆಯನ್ನು ಪೂರ್ಣಗೊಳಿಸಿ ವರದಿ ನೀಡುವಂತೆ ಆಯೋಗಕ್ಕೆ ತಿಳಿಸಲಾಗಿದೆ.
ಸಾರ್ವಜನಿಕ ಮಹತ್ವಕ್ಕಾಗಿ ತನಿಖೆ ಅಗತ್ಯವಿದೆ ಎಂದು ಹೇಳಿ ಏಕಸದಸ್ಯ ತನಿಖಾ ಆಯೋಗವನ್ನು ರಚಿಸುವಂತೆ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಹೀಗಾಗಿ ಯುಪಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಕುಮಾರ್ ಅವಸ್ಥಿ ಅಧಿಸೂಚನೆ ಹೊರಡಿಸಿದ್ದಾರೆ.
ಘಟನೆಗೆ ಸಂಬಂಧಪಟ್ಟಂತೆ ಸ್ವಯಂಪ್ರೇರಿತವಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠವು ಇಂದು ಪ್ರಕರಣದ ವಿಚಾರಣೆ ನಡೆಸಲಿದೆ.
ಹೆಚ್ಚುತ್ತಿರುವ ಆಕ್ರೋಶ, ಉತ್ತರ ಪ್ರದೇಶ ಪೊಲೀಸರ ತನಿಖೆಯ ನಿರ್ವಹಣೆ, ಮಾಧ್ಯಮ ವರದಿಗಳು ಮತ್ತು ರಾಜ್ಯದ ಇಬ್ಬರು ವಕೀಲರು ಮುಖ್ಯ ನ್ಯಾಯಮೂರ್ತಿಗೆ ಬರೆದ ಪತ್ರ ಎಲ್ಲವನ್ನು ಗಮನಿಸಿ ಪ್ರಕರಣವನ್ನು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರಿಗೆ ಪತ್ರ ಬರೆದಿದ್ದ ಉತ್ತರ ಪ್ರದೇಶದ ವಕೀಲರು, ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಘಟನೆಯಲ್ಲಿ ಭಾಗಿಯಾದ ಸಚಿವರ ವಿರುದ್ಧ ಎಫ್ಐಆರ್ ಮತ್ತು ಶಿಕ್ಷೆ ನೀಡುವಂತೆ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರಿಗೆ ಅರ್ಜಿ ಸಲ್ಲಿಸಿದ್ದರು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ