Lakhimpur Violence: ಲಖೀಮ್​ಪುರ್ ಹಿಂಸಾಚಾರ; ರೈತರ ಸಾವು, 13 ಜನರ ವಿರುದ್ಧ ಕೇಸ್..ಇಲ್ಲಿವರಗೆ ಆಗಿದ್ದೇನು?

ಈ ವೇಳೆ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಆಗಮಿಸಿದ್ದ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನೂ ಬಂಧಿಸಿ ಸೀತಾಪುರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ ಎಂದು ಹೇಳುವ ವಿಡಿಯೋವನ್ನು ಕಾಂಗ್ರೆಸ್ ಟ್ವೀಟ್ ಮಾಡಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದೆ.

ಪ್ರಿಯಾಂಕ ಗಾಂಧಿಯನ್ನು ಬಂಧಿಸುತ್ತಿರುವ ದೃಶ್ಯ.

ಪ್ರಿಯಾಂಕ ಗಾಂಧಿಯನ್ನು ಬಂಧಿಸುತ್ತಿರುವ ದೃಶ್ಯ.

 • Share this:
  ಉತ್ತರ ಪ್ರದೇಶ (ಅಕ್ಟೋಬರ್​ 04); ಲಖೀಮ್​ಪುರ್​ ಹಿಂಸಾಚಾರದಲ್ಲಿ ಈವರೆಗೆ ಸುಮಾರು 8 ಜನ ರೈತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮೃತ ರೈತರ ಕುಟುಂಬಗಳಿಗೆ ಸಾಂತ್ವನ ಹೇಳುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ರೈತರ ಮನೆಗಳಿಗೆ ಇಂದು ಮುಂಜಾನೆ ಭೇಟಿ ನೀಡಿದ್ದರು. ಆದರೆ, ಈ ವೇಳೆ ಉತ್ತರಪ್ರದೇಶ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗನ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಅಲ್ಲದೆ, ಈ ಘಟನೆಯ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದ ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರ ಮನೆಯ ಎದುರು ಬಿಗಿ ಪೊಲೀಸ್ ಬಂದೋಬಸ್ತ್​ ನೀಡಲಾಗಿದೆ ಎಂದು ವರದಿಯಾಗಿದೆ.

  ಕೇಂದ್ರ ಸಚಿವ ಅಜಯ್​ ಮಿಶ್ರಾ ಮತ್ತು ಡಿಸಿಎಂ ಕೇಶವ ಪ್ರಸಾದ್​ ಮೌರ್ಯ ನಿನ್ನೆ ಉತ್ತರ ಪ್ರದೇಶದ ಲಖೀಮ್​ಪುರ್​ಗೆ ಆಗಮಿಸಿದ್ದರು. ಆದರೆ, ಅವರ ಈ ಭೇಟಿಯನ್ನು ತಡೆಯುವ ಸಲುವಾಗಿ ರೈತ ಪ್ರತಿಭಟನಾಕಾರರು ಹೆಲಿಪ್ಯಾಡ್​ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಅಜಯ್ ಮಿಶ್ರಾ ಸೇರಿದಂತೆ ಇನ್ನಿತರರು ರಸ್ತೆ ಮಾರ್ಗವಾಗಿಯೇ ಲಖಿಮಪುರಕ್ಕೆ ತೆರಳಿದ್ದರು. ಕಾರ್ಯಕ್ರಮದ ನಂತರ ಹಿಂದಿರುಗುತ್ತಿದ್ದ ವೇಳೆ ರೈತರ ಗುಂಪು ಕಪ್ಪು ಬಾವುಟ ಪ್ರದರ್ಶಿಸಿ ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಸಚಿವರ ಪುತ್ರ ರೈತರ ಮೇಲೆ ಕಾರ್ ಚಲಾಯಿಸಿದ್ದಾರೆ. ಈ ಘಟನೆಯಲ್ಲಿ ಅನೇಕ ರೈತರು ಮೃತಪಟ್ಟಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಹಿಂಸಾಚಾರದಲ್ಲಿ ಪೊಲೀಸರು ಸಹ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಈ ಘಟನೆ ನಂತರ ಲಖೀಮ್​ಪುರ್​ನಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ.

  ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಕಾರ, ಮೃತಪಟ್ಟ ನಾಲ್ವರು ರೈತರನ್ನು ಸುಖ್ವಿಂದರ್ ಸಿಂಗ್ (20), ಸತ್ನಾಮ್ ಸಿಂಗ್ (20), ಹರಿ ಸಿಂಗ್ (35) ಮತ್ತು ಸುಬ್ಬ ಸಿಂಗ್ (65) ಎಂದು ಗುರುತಿಸಲಾಗಿದೆ. ಈ ಘಟನೆ ನಂತರ ಲಖೀಮ್​ಪುರ್​ನಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದ್ದು, ರೈತರು ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

  ಈ ವೇಳೆ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಆಗಮಿಸಿದ್ದ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನೂ ಬಂಧಿಸಿ ಸೀತಾಪುರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ ಎಂದು ಹೇಳುವ ವಿಡಿಯೋವನ್ನು ಕಾಂಗ್ರೆಸ್ ಟ್ವೀಟ್ ಮಾಡಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದೆ.  ಕಾಂಗ್ರೆಸ್​ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ "ನೀವು ಕೊಂದ ಜನರಿಗಿಂತ ನಾನು ಮುಖ್ಯನಲ್ಲ. ನೀವು ಸರ್ಕಾರವನ್ನು ರಕ್ಷಿಸುತ್ತಿದ್ದೀರಿ. ನೀವು ನನಗೆ ಕಾನೂನು ವಾರಂಟ್ ನೀಡಿ, ಇಲ್ಲದಿದ್ದರೆ ನಾನು ಇಲ್ಲಿಂದ ಕದಲುವುದಿಲ್ಲ" ಎಂದು ಹೇಳೀರುವ ಧ್ವನಿ ಕೇಳಿಸುತ್ತಿದೆ. ಆದರೂ, ಯಾವುದೇ ವಾರೆಂಟ್ ಇಲ್ಲದೆ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

  ಬಂಧನದ ಸಂದರ್ಭದಲ್ಲಿ ಪ್ರಿಯಾಂಕ ಗಾಂಧಿಯನ್ನು ಒತ್ತಾಯಪೂರ್ವಕವಾಗಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಿಯಾಂಕ ಗಾಂಧಿ ಪಕ್ಕದಲ್ಲಿ ನಿಂತಿರುವ ಕಾಂಗ್ರೆಸ್ ನಾಯಕ ದೀಪೇಂದರ್ ಹೂಡಾ, ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಕೈ ಎತ್ತುವುದು ಹೇಗೆ ಎಂದು ಪೊಲೀಸರನ್ನು ಪ್ರಶ್ನಿಸಿದ್ದಾರೆ. ಮಹಿಳೆಯರ ಮೇಲೆ ನೀವು ಹೇಗೆ ಕೈ ಮಾಡುತ್ತೀರಿ, ವಾರೆಂಡ್ ನೀಡಿ ನನ್ನನ್ನು ಬಂಧಿಸಿ ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ. ಆದರೆ, ಇದ್ಯಾವುದಕ್ಕೂ ಕಿವಿಗೊಡದ ಪೊಲೀಸರು ಪ್ರಿಯಾಂಕ ಅವರನ್ನು ಒತ್ತಾಯಪೂರ್ವಕವಾಗಿ ಬಂಧಿಸಿದ್ದಾರೆ. ಅವರನ್ನು ಬಂಧಿಸುವ ಸಂದರ್ಭದಲ್ಲೂ ನೂಕುನುಗ್ಗಲಾಗಿದೆ. ಆಕೆಯನ್ನು ಎಳೆದಾಡಲಾಗಿದೆ ಎನ್ನಲಾಗಿದೆ. ಆದರೆ, ಈ ಘಟನೆಯಲ್ಲಿ ನಿಜವಾಗಿಯೂ ಏನಾಯಿತು? ಕಾಂಗ್ರೆಸ್ ನಾಯಕಿಗೆ ಪೆಟ್ಟಾಯಿತೇ? ಎಂಬ ಕುರಿತು ಸ್ಪಷ್ಟವಾಗಿಲ್ಲ.

  ಇದನ್ನೂ ಓದಿ: Lakhimpur Violence- ನನ್ನ ಮಗ ವಾಹನ ಚಲಾಯಿಸುತ್ತಿರಲಿಲ್ಲ, ಇದೆಲ್ಲಾ ಷಡ್ಯಂತ್ರ: ಕೇಂದ್ರ ಸಚಿವ ಅಜಯ್ ಮಿಶ್ರಾ

  ಆದರೆ, ಪೊಲೀಸರು ಪ್ರಿಯಾಂಕ ಗಾಂಧಿ ಮೇಲೆ ಹಲ್ಲೆ ನಡೆಸಿದ್ದಾರೆ ಈ ಬಗ್ಗೆ ನಾನು ಸಾಕ್ಷಿ ಹೇಳಲಿದ್ದೇನೆ. ನಾನು ಅದನ್ನು ನೋಡಿದ್ದೇನೆ" ಎಂದು ಕಾಂಗ್ರೆಸ್​ ನಾಯಕ ದೀಪೇಂದರ್ ಹೂಡಾ ಹೇಳಿಕೆ ನೀಡಿರುವುದು ರಾಷ್ಟ್ರ ರಾಜಕಾರಣದಲ್ಲಿ ತಲ್ಲಣಕ್ಕೆ ಕಾರಣವಾಗಿದೆ.
  Published by:MAshok Kumar
  First published: