ನವದೆಹಲಿ(ಡಿ. 15): ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ (Union Minister Ajay Mishra) ಅವರ ಪುತ್ರ ಆಶೀಶ್ ಮಿಶ್ರಾನೇ ಹತ್ಯಾಕಾಂಡಕ್ಕೆ ಕಾರಣ ಎನ್ನಲಾಗುತ್ತಿರುವ ಉತ್ತರ ಪ್ರದೇಶದ (Uttar Pradesh) ಲಖಿಂಪುರ ಖೇರಿ ಪ್ರಕರಣದ (Lakhimpur Kheri Violence) ಬಗ್ಗೆ ಲೋಕಸಭೆಯಲ್ಲಿ ಚರ್ಚೆ ಮಾಡಲು ಅವಕಾಶ ನೀಡಬೇಕೆಂಬ ಕಾಂಗ್ರೆಸ್ (Congress) ಮನವಿಯನ್ನು ಕೇಂದ್ರ ಸರ್ಕಾರ (Union Government) ಪುರಸ್ಕರಿಸದ ಹಿನ್ನೆಲೆಯಲ್ಲಿ ಬುಧವಾರ ಲೋಕಸಭೆಯಲ್ಲಿ ಭಾರೀ ಗದ್ದಲವಾಗಿ ಸದನವನ್ನು ಮುಂದೂಡಲಾಗಿದೆ.
ರಾಹುಲ್ ಗಾಂಧಿ ಆರೋಪ
ಲಖಿಂಪುರ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡಕ್ಕೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಮತ್ತು ಅವರ ಪುತ್ರ ಆಶೀಶ್ ಮಿಶ್ರಾ ಅವರೇ ಕಾರಣ. ಆಶಿಶ್ ಮಿಶ್ರಾ ಕಾರು ಹರಿಸಿದ ಪರಿಣಾಮದಿಂದಾಗಿಯೇ ರೈತರ ಸಾವು ಸಂಭವಿಸಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ (Congress Leader Rahul Gandhi) ಅವರು ಆರೋಪ ಮಾಡಿದ್ದರಲ್ಲದೆ. ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಕೈಬಿಡಬೇಕೆಂದು ಕೂಡ ಆಗ್ರಹಿಸಿದ್ದರು. ಘಟನೆಯಲ್ಲಿ ಕೇಂದ್ರ ಸಚಿವರ ಪಾತ್ರ ಇರುವ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ವಿಷಯ ಚರ್ಚೆ ಆಗಬೇಕು ಎಂದು ಸ್ಪೀಕರ್ ಓಂ ಬಿರ್ಲಾ (Lokasabha Speaker Om Birla) ಅವರಿಗೆ ಮನವಿಯನ್ನೂ ಮಾಡಿದ್ದರು.
ಇದನ್ನೂ ಓದಿ: Petrol-Diesel Tax: ಕಳೆದ 3 ವರ್ಷಗಳಲ್ಲಿ ಪೆಟ್ರೋಲ್ & ಡೀಸೆಲ್ ಮೇಲಿನ ತೆರಿಗೆಯಿಂದ 8.02 ಲಕ್ಷ ಕೋಟಿ ರೂ. ಸಂಗ್ರಹ
ರೈತರ ಹತ್ಯಾಕಾಂಡದ ಬಗ್ಗೆ ಚರ್ಚಿಸಲು ಅವಕಾಶ ಕೊಡದ ಸರ್ಕಾರ
ರಾಹುಲ್ ಗಾಂಧಿ ಅವರು ಮಾತ್ರವಲ್ಲ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ (Adhir Ranjan Chowdhari) ಹಾಗೂ ಸಂಸದ ಕೆ. ಸುರೇಶ್ ಕೂಡ ಸ್ಪೀಕರ್ ಗೆ ಮನವಿ ಮಾಡಿದ್ದರು. ಹೀಗೆ ಪ್ರತಿಪಕ್ಷ ಪರಿಪರಿಯಾಗಿ ಬೇಡಿಕೊಂಡರೂ ಕೇಂದ ಸರ್ಕಾರ ಮಾತ್ರ ರೈತರ ಹತ್ಯಾಕಾಂಡದ ಬಗ್ಗೆ ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ. ಇದರಿಂದ ಕೆರಳಿದ ಪ್ರತಿಪಕ್ಷಗಳು ಪ್ರತಿಭಟನೆಗೆ ಮುಂದಾದವು. ಆಗ ಸದನವನ್ನು ಮುಂದೂಡಲಾಯಿತು.
ಸರ್ಕಾರದ ನಡೆ ಖಂಡಿಸಿದ ರಾಹುಲ್ ಗಾಂಧಿ
ಲೋಕಸಭೆಯಲ್ಲಿ ಲಖೀಂಪುರ್ ಖೇರಿ ರೈತರ ಹತ್ಯಾಕಾಂಡದ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡದ ಕೇಂದ್ರ ಸರ್ಕಾರದ ಕ್ರಮವನ್ನು ಕಟುವಾಗಿ ಖಂಡಿಸಿರುವ ರಾಹುಲ್ ಗಾಂಧಿ ಅವರು 'ಲಖೀಂಪುರ ಖೇರಿ ಪ್ರಕರಣದ ಬಗ್ಗೆ ಮಾತನಾಡಲು ನಮಗೆ ಅವಕಾಶ ನೀಡುತ್ತಿಲ್ಲ. ನಾವು ಚರ್ಚೆಗೆ ಒತ್ತಾಯಿಸಿದ್ದೇವೆ' ಎಂದು ಟ್ವೀಟ್ ಮಾಡಿದ್ದಾರೆ.
ಪ್ರಿಯಾಂಕಾ ಗಾಂಧಿಯನ್ನು ಗೃಹಬಂಧನದಲ್ಲಿರಿಸಿದ್ದ ಯುಪಿ ಪೊಲೀಸರು
ಘಟನೆ ಆದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಸಹೋದರಿ ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Uttar Pradesh In charge and AICC General Secretary Priyanka Gandhi) ಅವರು ಲಖೀಂಪುರ್ ಖೇರಿಗೆ ಭೇಟಿ ನೀಡಿ ರೈತ ಕುಟುಂಬಗಳನ್ನು ಸಂತೈಸಲು ಮುಂದಾಗಿದ್ದರು. ಆದರೆ ಉತ್ತರ ಪ್ರದೇಶ ಪೊಲೀಸರು (Uttar Pradesh Police) ಪ್ರಿಯಾಂಕಾ ಗಾಂಧಿ ಅವರನ್ನು ಗೃಹ ಬಂಧನದಲ್ಲಿ (Home Arrest) ಇರಿಸಿದ್ದರು. ಅಲ್ಲದೆ ರಾಹುಲ್ ಗಾಂಧಿ ಅವರು ಲಖೀಂಪುರ್ ಖೇರಿಗೆ ಹೋಗುವುದನ್ನು ತಡೆದಿದ್ದರು. ಈಗ ಲೋಕಸಭೆಯಲ್ಲಿ ಕೂಡ ಚರ್ಚೆಗೆ ಅವಕಾಶ ಸಿಗದಂತಾಗಿದೆ.
ಇದನ್ನೂ ಓದಿ: Omicron ಇತರೆ ರೂಪಾಂತರಗಳಿಗಿಂತ ವೇಗವಾಗಿ ಹರಡುತ್ತೆ, ಕಡೆಗಣಿಸಬೇಡಿ: WHO ಎಚ್ಚರಿಕೆ
ರಾಜ್ಯಸಭೆಯಲ್ಲಿ ವಿಪ್
ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲೂ ಕಾಂಗ್ರೆಸ್ ಚರ್ಚೆಗೆ ಅವಕಾಶ ಕೇಳಿ ಈ ಸಂದರ್ಭದಲ್ಲಿ ತಪ್ಪದೆ ಹಾಜರಾಗಿರಬೇಕೆಂದು ತನ್ನ ಸದಸ್ಯರಿಗೆ ಕಾಂಗ್ರೆಸ್ ಪಕ್ಷ ವಿಪ್ (VIP) ಜಾರಿ ಮಾಡಿತ್ತು. 'ಕಾಂಗ್ರೆಸ್ ಪಕ್ಷದ ಎಲ್ಲ ರಾಜ್ಯಸಭಾ ಸದಸ್ಯರು ಸದನದಲ್ಲಿ ತಪ್ಪದೆ ಹಾಜರಿರಬೇಕು. ಯಾವುದೇ ಕಾರಣಕ್ಕೂ ಗೈರು ಹಾಜರಾಗದೆ ಪಕ್ಷದ ನಿಲುವಿಗೆ ಬೆಂಬಲ ಸೂಚಿಸಬೇಕು' ಎಂದು ರಾಜ್ಯಸಭೆಯ ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಜೈರಾಮ್ ರಮೇಶ್ ಸದಸ್ಯರಿಗೆ ತಿಳಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ