ಹಿಂಸಾಚಾರ ಪ್ರತಿಭಟನೆ ಮುನ್ನಡೆಸುವವರು ನಾಯಕರೇ ಅಲ್ಲ; ವಿರೋಧ ಪಕ್ಷಗಳ ವಿರುದ್ಧ ಸೇನಾ ಮುಖ್ಯಸ್ಥರ ಹೇಳಿಕೆ

ಭಾರತೀಯ ಸೇನೆಯ ಮುಖ್ಯಸ್ಥರಾಗಿರುವ ಬಿಪಿನ್ ರಾವತ್ ಡಿಸೆಂಬರ್ 31ರಂದು ತಮ್ಮ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಈ ನಡುವೆ ರಾವತ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪರ ಹಾಗೂ ವಿರುದ್ಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

HR Ramesh | news18-kannada
Updated:December 26, 2019, 2:53 PM IST
ಹಿಂಸಾಚಾರ ಪ್ರತಿಭಟನೆ ಮುನ್ನಡೆಸುವವರು ನಾಯಕರೇ ಅಲ್ಲ; ವಿರೋಧ ಪಕ್ಷಗಳ ವಿರುದ್ಧ ಸೇನಾ ಮುಖ್ಯಸ್ಥರ ಹೇಳಿಕೆ
ಬಿಪಿನ್​ ರಾವತ್​
  • Share this:
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಗಳು ಹಾಗೂ ಹಿಂಸಾಚಾರ ನಡೆದಿದೆ. ಏತನ್ಮಧ್ಯೆ, ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಹಿಂಸಾತ್ಮಕ ಪ್ರತಿಭಟನೆಯಲ್ಲಿ ಜನರನ್ನು ಮುನ್ನಡೆಸುವವರು ನಾಯಕರಲ್ಲ ಎಂದು ಟೀಕಿಸಿದ್ದಾರೆ.

ದೆಹಲಿ, ಉತ್ತರಪ್ರದೇಶ ಸೇರಿದಂತೆ ದೇಶದ ಹಲವೆಡೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಉತ್ತರ ಪ್ರದೇಶ ಹಾಗೂ ಮಂಗಳೂರಿನಲ್ಲಿ ಹಿಂಸಾಚಾರ ನಡೆದಿತ್ತು. ಈ ಹಿಂಸಾಚಾರಕ್ಕೆ ಬಿಪಿನ್ ರಾವತ್ ವಿರೋಧ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾವತ್, ಪ್ರತಿಭಟನೆ ಕುರಿತು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಯಕತ್ವ ಮುನ್ನಡೆಸುವವರ ಕೈಯಲ್ಲಿ ಎಲ್ಲವೂ ಇದೆ. ನಾಯಕತ್ವ ನೋಡುವಾಗ ಸರಳವಾಗಿ ಕಂಡರೂ ಅದು ಸಂಕೀರ್ಣವಾಗಿದೆ. ನಾಯಕತ್ವವನ್ನು ಜನರು ಅನುಸರಿಸುತ್ತಾರೆ ಎಂದು ಹೇಳುವ ಮೂಲಕ ವಿರೋಧ ಪಕ್ಷಗಳ ವಿರುದ್ಧ ಅಸಮಾಧಾನ ಹೊರಹಾಕಿದರು.

ಇದನ್ನು ಓದಿ: ‘ಭಾರತದ ಪ್ರತಿಯೊಬ್ಬ ನಾಗರಿಕನೂ ಹಿಂದುವೇ‘: ಆರ್​ಎಸ್​ಎಸ್​​ ಮುಖ್ಯಸ್ಥ ಮೋಹನ್​ ಭಾಗವತ್​​

ಭಾರತೀಯ ಸೇನೆಯ ಮುಖ್ಯಸ್ಥರಾಗಿರುವ ಬಿಪಿನ್ ರಾವತ್ ಡಿಸೆಂಬರ್ 31ರಂದು ತಮ್ಮ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಈ ನಡುವೆ ರಾವತ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪರ ಹಾಗೂ ವಿರುದ್ಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
Published by: HR Ramesh
First published: December 26, 2019, 2:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading