ಅಮೇಥಿಯಲ್ಲಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ

Lok Sabha Elections 2019 | 2004 ರಿಂದ ಅಮೇಠಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗಿರುವ ರಾಹುಲ್ ಗಾಂಧಿ ಮೊದಲೆರಡು ಚುನಾವಣೆಯಲ್ಲಿ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಆದರೆ, 2014ರಲ್ಲಿ ಬಿಜೆಪಿ ಮಹಿಳಾ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಕಡಿಮೆ ಮತಗಳ ಅಂತರದಲ್ಲಿ ಪ್ರಾಯಾಸದ ಗೆಲುವು ಸಾಧಿಸಿದ್ದರು.

MAshok Kumar | news18
Updated:April 10, 2019, 3:25 PM IST
ಅಮೇಥಿಯಲ್ಲಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ
ತೆರೆದ ವಾಹನದಲ್ಲಿ ರೋಡ್ ಶೋ ನಡೆಸುತ್ತಿರುವ ರಾಹುಲ್ ಗಾಂಧಿ.
MAshok Kumar | news18
Updated: April 10, 2019, 3:25 PM IST
ಲಕ್ನೋ(ಏ.10): ಲೋಕಸಭಾ ಚುನಾವಣೆಗೆ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಲಿರುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಇಂದು ತಮ್ಮ ಕ್ಷೇತ್ರದಲ್ಲಿ ಅದ್ದೂರಿ ರೋಡ್ ಶೋ ನಡೆಸುವ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ.

ಅಮೇಥಿ ಕ್ಷೇತ್ರದ ಮುನ್ಶಿಗನ್ ನಿಂದ ಬೆಳಗ್ಗೆ 12 ಗಂಟೆ ಸುಮಾರಿಗೆ ರೋಡ್​ ಶೋ ಆರಂಭಿಸಿದ್ದ ರಾಹುಲ್ ಗಾಂಧಿ ದರ್ಪಿಪುರ್, ಗೌರಿಗಂಜ್ ಮಾರ್ಗವಾಗಿ ಸುಮಾರು 3 ಕಿಮೀ ರೋಡ್ ಶೋ ನಡೆಸಿದ ನಂತರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸುತ್ತಿದ್ದು ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜನ ಸಾಮಾನ್ಯರು ಈ ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ ಸಾವಿರಾರು ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಕೈನಲ್ಲಿ ಕಾಂಗ್ರೆಸ್ ಬಾವುಟವನ್ನು ಹಿಡಿದಿದ್ದ ಪಕ್ಷದ ಪರ ಘೋಷಣೆ ಕೂಗುವ ಮೂಲಕ ರಾಹುಲ್ ಗಾಂಧಿಗೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ಭರ್ಜರಿ ರೋಡ್ ಶೋಗೆ ಭಾಗಿಯಾಗುವ ಮೂಲಕ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ರಾಹುಲ್​ಗೆ ಸಾಥ್ ನೀಡಿದರು.

ಇದನ್ನೂ ಓದಿ : ಕರ್ನಾಟಕ, ಮಧ್ಯಪ್ರದೇಶ ಬೆನ್ನಲ್ಲೇ ಆಂಧ್ರಕ್ಕೂ ಐಟಿ ಬಿಸಿ; ಟಿಡಿಪಿ ಅಭ್ಯರ್ಥಿ ಮನೆ ಮೇಲೆ ದಾಳಿ; ಕೇಂದ್ರದ ವಿರುದ್ಧ ಸಿಎಂ ನಾಯ್ಡು ಕಿಡಿ!

ರಾಹುಲ್ v/s ಸ್ಮೃತಿ ಇರಾನಿ : ಕಾಂಗ್ರೆಸ್ ಭದ್ರಕೋಟೆ ಎಂದೇ ಹೆಸರಾಗಿರುವ ಅಮೇಥಿಯಲ್ಲಿ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ನಾಲ್ಕು ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅವರ ಮರಣದ ನಂತರ 1999ರಲ್ಲಿ ಮೊದಲ ಬಾರಿಗೆ ಸೋನಿಯಾ ಗಾಂಧಿ ಈ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ, 2004ರ ಚುನಾವಣೆಯಲ್ಲಿ ಮಗ ರಾಹುಲ್ ಗಾಂಧಿಗಾಗಿ ಸೋನಿಯಾ ಈ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು.
Loading...

ಇದನ್ನೂ ಓದಿ : ನಾಳೆ ಮೊದಲ ಹಂತದ ಲೋಕಸಭಾ ಚುನಾವಣೆ; ಆಂಧ್ರದಲ್ಲಿ ಅಗ್ನಿಪರೀಕ್ಷೆಗೊಳಗಾಗಲಿರುವ ಚಂದ್ರಬಾಬು

2004 ರಿಂದ ಅಮೇಥಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗಿರುವ ರಾಹುಲ್ ಗಾಂಧಿ ಮೊದಲೆರಡು ಚುನಾವಣೆಯಲ್ಲಿ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಆದರೆ, 2014ರಲ್ಲಿ ಬಿಜೆಪಿ ಮಹಿಳಾ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಕಡಿಮೆ ಮತಗಳ ಅಂತರದಲ್ಲಿ ಪ್ರಾಯಾಸದ ಗೆಲುವು ಸಾಧಿಸಿದ್ದರು.

ಈ ಬಾರಿಯ ಚುನಾವಣೆಯಲ್ಲೂ ಸಚಿವೆ ಸ್ಮೃತಿ ಇರಾನಿ ಅಮೇಥಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ರಾಹುಲ್​ಗೆ ಕಠಿಣ ಪೈಪೋಟಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದೆ ಕಾರಣಕ್ಕಾಗಿಯೇ ರಾಹುಲ್ ಗಾಂಧಿ ಎರಡನೇ ಕ್ಷೇತ್ರವಾಗಿ ಕೇರಳದ ವಯನಾಡಿನಿಂದಲೂ ಸ್ಪರ್ಧಿಸುತ್ತಿರುವುದು ಗಮನಾರ್ಹ.

ಅಮೇಠಿ ಕ್ಷೇತ್ರಕ್ಕೆ ಮೇ. 6 ರಂದು 5ನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

First published:April 10, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626