Lok Sabha Elections 2019; ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ; ಮಾಯಾವತಿ ಆರೋಪ

ಕಳೆದ ವರ್ಷ ಜುಲೈ ತಿಂಗಳಲ್ಲಿ ಸಂಸತ್ ಅಧಿವೇಶನದ ವೇಳೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಆಸನದ ಬಳಿ ತೆರಳಿ ಅವರನ್ನು ತಬ್ಬಿಕೊಂಡಿದ್ದರು. ಈ ಪ್ರಸಂಗ ಅಂದು ಇಡೀ ರಾಷ್ಟ್ರ ಮಟ್ಟದ ರಾಜಕೀಯ ವಲಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಆದರೆ, ಒಂದು ವರ್ಷದ ನಂತರವೂ ಈ ಪ್ರಸಂಗ ಉತ್ತರಪ್ರದೇಶ ರಾಜಕೀಯದಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿರುವುದು ವಿಶೇಷ.

news18
Updated:May 2, 2019, 4:03 PM IST
Lok Sabha Elections 2019; ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ; ಮಾಯಾವತಿ ಆರೋಪ
ಮಾಯಾವತಿ
  • News18
  • Last Updated: May 2, 2019, 4:03 PM IST
  • Share this:
ಉತ್ತರಪ್ರದೇಶ (ಮೇ.2) : ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಉತ್ತರಪ್ರದೇಶದಲ್ಲಿ ಮಹಘಟಬಂಧನ್ ಸೋಲಿಗೆ ಒಟ್ಟಿಗೆ ಕೆಲಸ ಮಾಡುತ್ತಿವೆ ಎಂದು ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಆರೋಪಿಸಿದ್ದಾರೆ.

ಗುರುವಾರ ಉತ್ತರಪ್ರದೇಶದ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಹರಿಹಾಯ್ದ ಮಾಯಾವತಿ, “ಬಿಜೆಪಿ ಹಾಗೂ ಕಾಂಗ್ರೆಸ್ ಒಂದೇ ಬಟ್ಟೆಯನ್ನು ಹರಿದು ಒಲಿದುಕೊಂಡಿರುವ ಪಕ್ಷಗಳು. ಸಂಸತ್​ನಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯನ್ನು ಹೇಗೆ ತಬ್ಬಿಕೊಂಡಿದ್ದರು ಎಂಬುದನ್ನು ಇಡೀ ರಾಷ್ಟ್ರವೇ ನೋಡಿದೆ. ಹೀಗಾಗಿ ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್​ಗೂ ಮತ ನೀಡಬೇಡಿ” ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಜಾತಿ ರಾಜಕಾರಣ ಬೇಡ ಎಂದ ಮೋದಿ; ನೀವು ಮಾಡಿದ್ದೇ ಜಾತಿ ರಾಜಕಾರಣ ಎಂದ ಮಾಯಾವತಿ

“ಉತ್ತರಪ್ರದೇಶದಲ್ಲಿ ಎಸ್​ಪಿ-ಬಿಎಸ್​ಪಿ ಪಕ್ಷಗಳ ಮಹಾಘಟಬಂಧನ್ ಸೋಲಿಗೆ ಈ ಎರಡೂ ಪಕ್ಷಗಳು ಕೆಲಸ ಮಾಡುತ್ತಿವೆ. ಆದರೆ, ಏನೆ ಕಸರತ್ತು ನಡೆಸಿದರೂ ಈ ಬಾರಿ ಉತ್ತರಪ್ರದೇಶದಲ್ಲಿ ಮಹಾಘಟಬಂಧನ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಏಕೆಂದರೆ ಇಲ್ಲಿನ ಜನರ ಭಾವನೆಗಳು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ವಿರುದ್ಧವಾಗಿದೆ” ಎಂದು ಅವರು ಕಿಡಿಕಾರಿದ್ದಾರೆ.

ಕಳೆದ ವರ್ಷ ಜುಲೈ ತಿಂಗಳಲ್ಲಿ ಸಂಸತ್ ಅಧಿವೇಶನದ ವೇಳೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಆಸನದ ಬಳಿ ತೆರಳಿ ಅವರನ್ನು ತಬ್ಬಿಕೊಂಡಿದ್ದರು. ಈ ಪ್ರಸಂಗ ಅಂದು ಇಡೀ ರಾಷ್ಟ್ರ ಮಟ್ಟದ ರಾಜಕೀಯ ವಲಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಆದರೆ, ಒಂದು ವರ್ಷದ ನಂತರವೂ ಈ ಪ್ರಸಂಗ ಉತ್ತರಪ್ರದೇಶ ರಾಜಕೀಯದಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿರುವುದು ವಿಶೇಷ.

First published: May 2, 2019, 2:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading