HOME » NEWS » National-international » LPG CYLINDER PRICE PRICE OF COOKING GAS CYLINDER INCREASED AGAIN BY RS 25 TO RS 826 LG

LPG Cylinder Price: ಜನಸಾಮಾನ್ಯರಿಗೆ ಶಾಕ್; ಗ್ಯಾಸ್​ ಸಿಲಿಂಡರ್​ ಬೆಲೆ ಮತ್ತೆ 25 ರೂ.ಏರಿಕೆ

ಫೆಬ್ರವರಿ ತಿಂಗಳಿನಿಂದ ಈವರೆಗೆ ಒಟ್ಟು 4 ಬಾರಿ ಗ್ಯಾಸ್​ ಬೆಲೆ ಹೆಚ್ಚಾಗಿದೆ. ಕಳೆದ ವಾರವೂ ಗ್ಯಾಸ್​ ಸಿಲಿಂಡರ್​ ಬೆಲೆಯು 25 ರೂಪಾಯಿ ಹೆಚ್ಚಾಗಿತ್ತು. ಆ ಮೂಲಕ 776 ಇದ್ದ ಗ್ಯಾಸ್ ಸಿಲಿಂಡರ್ ಬೆಲೆ 801 ರೂಪಾಯಿಗೆ ಏರಿಕೆಯಾಗಿತ್ತು. ಈ ಮೊದಲು 50 ರೂಪಾಯಿ ಹೆಚ್ಚಾಗಿತ್ತು.

news18-kannada
Updated:March 1, 2021, 11:06 AM IST
LPG Cylinder Price: ಜನಸಾಮಾನ್ಯರಿಗೆ ಶಾಕ್; ಗ್ಯಾಸ್​ ಸಿಲಿಂಡರ್​ ಬೆಲೆ ಮತ್ತೆ 25 ರೂ.ಏರಿಕೆ
ಎಲ್​ಪಿಜಿ ಗ್ಯಾಸ್.
  • Share this:
ನವದೆಹಲಿ(ಮಾ.01): ಬೆಲೆ ಏರಿಕೆ ದರದಿಂದ ಈಗಾಗಲೇ ತತ್ತರಿಸುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಪೆಟ್ರೋಲ್, ಡೀಸೆಲ್​ ಬೆಲೆ ಜೊತೆಗೆ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗಿ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದಂತಾಗಿದೆ. ಇಷ್ಟು ಮಾತ್ರವಲ್ಲದೇ, ಫೆಬ್ರವರಿ ತಿಂಗಳಿನಿಂದ ಅಡುಗೆ ಅನಿಲ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಜೊತಗೆ ಗ್ಯಾಸ್ ಸಿಲಿಂಡರ್ ಬೆಲೆಯೂ ಸಹ ಹೆಚ್ಚಾಗುತ್ತಿರುವುದು ಜನಸಾಮಾನ್ಯರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಇಂದು ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಬೆಲೆಯು 25 ರೂಪಾಯಿ ಹೆಚ್ಚಾಗಿದೆ. ಆ ಮೂಲಕ ಗ್ಯಾಸ್ ಸಿಲಿಂಡರ್ ಬೆಲೆ 826 ರೂಪಾಯಿಗೆ ಏರಿಕೆಯಾಗಿದೆ. ಈ ಗ್ಯಾಸ್ ದರ ಏರಿಕೆಯಿಂದಾಗಿ ಜನಸಾಮಾನ್ಯರು ಪರಿತಪಿಸುವಂತಾಗಿದೆ.

ಫೆಬ್ರವರಿ ತಿಂಗಳಿನಿಂದ ಈವರೆಗೆ ಒಟ್ಟು 4 ಬಾರಿ ಗ್ಯಾಸ್​ ಬೆಲೆ ಹೆಚ್ಚಾಗಿದೆ. ಕಳೆದ ವಾರವೂ ಗ್ಯಾಸ್​ ಸಿಲಿಂಡರ್​ ಬೆಲೆಯು 25 ರೂಪಾಯಿ ಹೆಚ್ಚಾಗಿತ್ತು. ಆ ಮೂಲಕ 776 ಇದ್ದ ಗ್ಯಾಸ್ ಸಿಲಿಂಡರ್ ಬೆಲೆ 801 ರೂಪಾಯಿಗೆ ಏರಿಕೆಯಾಗಿತ್ತು. ಈ ಮೊದಲು 50 ರೂಪಾಯಿ ಹೆಚ್ಚಾಗಿತ್ತು.

ಪ್ರೀತಿಸಿದ ಹುಡುಗಿ ಕೈಕೊಟ್ಟ ಕಾರಣಕ್ಕೆ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ...!

ಕಳೆದ 5 ದಿನಗಳಲ್ಲಿ 2 ಬಾರಿ ಗ್ಯಾಸ್​ ಸಿಲಿಂಡರ್ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಹಾಕಿದೆ.

ಈ ಮಾರಕ ಕೊರೋನಾ ಕೇಕೆ ಹಾಕುತ್ತಿರುವ ಸಂದರ್ಭದಲ್ಲೇ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪೆಟ್ರೋಲ್​-ಡೀಸೆಲ್​ ಬೆಲೆ, ಧಾನ್ಯಗಳ ಬೆಲೆ, ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆ ಹಾಗೂ ಅಡುಗೆ ಎಣ್ಣೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದು ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದ್ದು, ಜೇಬು ಸುಡುತ್ತಿದೆ.

ಇನ್ನು, ಗ್ಯಾಸ್​ ಸಿಲಿಂಡರ್ ದರ ಏರಿಕೆಯಾದ ಹಿನ್ನೆಲೆ, ಆಟೋ ಚಾಲಕರು ತತ್ತರಿಸಿ ಹೋಗಿದ್ದಾರೆ. ಗ್ಯಾಸ್ ಸಿಲಿಂಡರ್​ ಬೆಲೆ ಹೆಚ್ಚಾಗಿಸುವುದರಿಂದ ಪ್ರಯಾಣ ದರ ಏರಿಕೆ ಮಾಡುವಂತೆ ಆಟೋ ಚಾಲಕರು ಹೇಳುತ್ತಿದ್ದಾರೆ. ಕನಿಷ್ಠ ದರವನ್ನು 36 ರೂ.ಗೆ ಏರಿಸಬೇಕೆಂದು ಆಟೋ ಚಾಲಕರು ಆಗ್ರಹಿಸುತ್ತಿದ್ದಾರೆ.
Published by: Latha CG
First published: March 1, 2021, 10:56 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories