LPG Gas Price Hike: ಗ್ರಾಹಕರಿಗೆ ಶಾಕಿಂಗ್ ನ್ಯೂಸ್; ಮತ್ತೆ ಎಲ್​​ಪಿಜಿ ಸಿಲಿಂಡರ್ ಬೆಲೆ ಏರಿಕೆ

ಜನವರಿ 1ರಿಂದ ಸೆಪ್ಟೆಂಬರ್​​​ 1ರ ನಡುವೆ ಎಲ್​ಪಿಜಿ ಸಿಲಿಂಡರ್​​ ಬೆಲೆ ಬರೋಬ್ಬರಿ 190 ರೂ. ಹೆಚ್ಚಾಗಿದೆ. ಸದ್ಯದ ಗ್ಯಾಸ್ ಸಿಲಿಂಡರ್​​ ಬೆಲೆಗೆ ಹೋಲಿಸಿದರೆ, ಎಲೆಕ್ಟ್ರಿಕ್​ ಒಲೆ ಕಡಿಮೆ ಬೆಲೆಗೆ ಸಿಗುತ್ತಿದೆ. 

ಎಲ್​ಪಿಜಿ ಗ್ಯಾಸ್.

ಎಲ್​ಪಿಜಿ ಗ್ಯಾಸ್.

  • Share this:
ನವದೆಹಲಿ(ಸೆ.1): ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನ್ಕಕೇರುತ್ತಲೇ ಇದೆ. ಗೃಹೋಪಯೋಗಿ ವಸ್ತುಗಳು, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಮೊದಲೆಲ್ಲಾ ಪೆಟ್ರೋಲ್​-ಡೀಸೆಲ್
(Petrol-Diesel Price)ಹಾಗೂ ಅಡುಗೆ ಎಣ್ಣೆ ಬೆಲೆ(Cooking Oil Price) ಏರಿಕೆ ಮಾಡಿದ್ದ ಸರ್ಕಾರ, ಬಳಿಕ ದಿನಬಳಕೆಯ ಗ್ಯಾಸ್​ ಸಿಲಿಂಡರ್​ ಬೆಲೆಯನ್ನು ಏರಿಸಿತ್ತು. ಸದ್ಯ ಕಳೆದ 2 ತಿಂಗಳಿನಿಂದ ಪೆಟ್ರೋಲ್​-ಡೀಸೆಲ್​ ಬೆಲೆ ಹೆಚ್ಚಳವಾಗಿಲ್ಲ. ಅಡುಗೆ ಎಣ್ಣೆಯ ಬೆಲೆಯೂ ಸಹ ಸ್ಥಿರತೆ ಕಾಯ್ದುಕೊಂಡಿದೆ. ಆದರೆ ಈಗ ಪ್ರತಿದಿನ ಬಳಸುವ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​(LPG Price Hike) ಬೆಲೆಯನ್ನು ಏರಿಸುವ ಮೂಲಕ ಗ್ರಾಹಕರಿಗೆ ಮತ್ತೆ ಬರೆ ಹಾಕಿದೆ.


ಸೆಪ್ಟೆಂಬರ್ 1ರಂದು ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಿಸಲಾಗಿದೆ. ಆಗಸ್ಟ್​ 17ರಂದು ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗೆ 25 ರೂಪಾಯಿ ಹೆಚ್ಚಿಸಲಾಗಿತ್ತು. 15 ದಿನಗಳ ಅಂತರದಲ್ಲಿ 2 ಬಾರಿ ಗ್ಯಾಸ್​ ಸಿಲಿಂಡರ್ ಬೆಲೆ ಏರಿಕೆಯಾಗಿದೆ.

ಪೆಟ್ರೋಲಿಯಂ ಕಂಪನಿಗಳು ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯನ್ನು ಈ ತಿಂಗಳು  25 ರೂ. ಹೆಚ್ಚಿಸಿವೆ. ಈಗ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆ.ಜಿ ಸಿಲಿಂಡರ್​ ಬೆಲೆ 884.50 ರೂ.ಆಗಿದೆ. ಕಳೆದ ತಿಂಗಳು ಅಂದರೆ ಆಗಸ್ಟ್​​ನಲ್ಲೂ ಗ್ಯಾಸ್​ ಸಿಲಿಂಡರ್​ಗೆ 25 ರೂಪಾಯಿ ಹೆಚ್ಚಿಸಲಾಗಿತ್ತು. ಆಗ 859.50 ರೂ.ಗೆ ಏರಿಕೆಯಾಗಿತ್ತು. ಪರಿಷ್ಕೃತ ದರಗಳು ಸೆಪ್ಟೆಂಬರ್​ 1ರಿಂದಲೇ ಜಾರಿಯಾಗಿವೆ. ಇದರ ಜೊತೆಗೆ 19 ಕೆಜಿಯ ಕಮರ್ಷಿಯಲ್​​ ಸಿಲಿಂಡರ್​ ಬೆಲೆಯೂ 75 ರೂಪಾಯಿ ಹೆಚ್ಚಾಗಿದೆ.

ಇದನ್ನೂ ಓದಿ:Gold Price Today: ಇಂದು ಮತ್ತೆ ಇಳಿಕೆಯಾದ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ಗೊತ್ತಾ ರೇಟ್?

ದೇಶದ ಬಹುತೇಕ ನಗರಗಳಲ್ಲಿ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆ ಏರಿಕೆಯಾಗಿದೆ. ಇತ್ತೀಚೆಗೆ ಜುಲೈ 1ರಂದು ಎಲ್​ಪಿಜಿ ಸಿಲಿಂಡರ್​ ಬೆಲೆ 25.50 ರೂಪಾಯಿ ಏರಿಕೆಯಾಗಿತ್ತು. ತೈಲ ಕಂಪನಿಗಳು ಸತತ ಮೂರನೇ ತಿಂಗಳೂ ಸಹ ಗೃಹೋಪಯೋಗಿ ಗ್ಯಾಸ್​ ಬೆಲೆಯನ್ನು ಹೆಚ್ಚಿಸಿವೆ. ಜೂನ್​ 1ರಂದು ಎಲ್​ಪಿಜಿ ಸಿಲಿಂಡರ್ ಬೆಲೆ 809 ರೂ. ಇತ್ತು. ಜುಲೈ 1ರಂದು 834 ರೂ.ಗೆ ಏರಿಸಲಾಯಿತು. ತೈಲ ಕಂಪನಿಗಳು ಪ್ರತೀ ತಿಂಗಳ ಮೊದಲನೇ ದಿನವೇ ಎಲ್​ಪಿಜಿ ಸಿಲಿಂಡರ್​​ಗಳ ಬೆಲೆಯನ್ನು ಬದಲಾಯಿಸುತ್ತವೆ.

ಜನವರಿ 1ರಿಂದ ಸೆಪ್ಟೆಂಬರ್​​​ 1ರ ನಡುವೆ ಎಲ್​ಪಿಜಿ ಸಿಲಿಂಡರ್​​ ಬೆಲೆ ಬರೋಬ್ಬರಿ 190 ರೂ. ಹೆಚ್ಚಾಗಿದೆ. ಸದ್ಯದ ಗ್ಯಾಸ್ ಸಿಲಿಂಡರ್​​ ಬೆಲೆಗೆ ಹೋಲಿಸಿದರೆ, ಎಲೆಕ್ಟ್ರಿಕ್​ ಒಲೆ ಕಡಿಮೆ ಬೆಲೆಗೆ ಸಿಗುತ್ತಿದೆ.

ಈ ವರ್ಷ ಮೊದಲ ಬಾರಿಗೆ ಫೆಬ್ರವರಿ 4ರಂದು ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗೆ 25 ರೂಪಾಯಿ ಏರಿಸಲಾಗಿತ್ತು. ಬಳಿಕ ಫೆಬ್ರವರಿ 15ರಂದು 50 ರೂಪಾಯಿ ಏರಿಕೆ ಮಾಡಲಾಗಿತ್ತು. ಫೆಬ್ರವರಿ 25 ಮತ್ತು ಮಾರ್ಚ್​ 1ರಂದು ಮತ್ತೆ 25 ರೂ. ಹೆಚ್ಚಿಸಲಾಗಿತ್ತು. ಇದರೊಂದಿಗೆ ಫೆಬ್ರವರಿ ತಿಂಗಳೊಂದರಲ್ಲೇ 3 ಬಾರಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಬೆಲೆ ಏರಿಸಲಾಗಿತ್ತು.

ಇದನ್ನೂ ಓದಿ:Karnataka Weather Today: ಸೆ.5ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

ಪ್ರತಿ ಗ್ಯಾಸ್​ ಸಿಲಿಂಡರ್​ಗೆ 125 ರೂಪಾಯಿ ಏರಿಕೆಯಾದ ಬಳಿಕ, ಏಪ್ರಿಲ್​ 1ರಂದು ಪ್ರತೀ ಸಿಲಿಂಡರ್​​ಗೆ 10 ರೂಪಾಯಿ ಕಡಿತ ಮಾಡಲಾಗಿತ್ತು. ಜುಲೈ, ಆಗಸ್ಟ್​ ಮತ್ತು ಸೆಪ್ಟೆಂಬರ್ ಹೀಗೆ ಸತತ 3 ತಿಂಗಳೂ ಸಹ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಬೆಲೆಯನ್ನು ತಲಾ 25 ರೂಪಾಯಿ ಹೆಚ್ಚಿಸಲಾಗಿದೆ ಒಟ್ಟು ತಿಂಗಳಲ್ಲಿ 75 ರೂಪಾಯಿ ಏರಿಕೆ ಕಂಡಿದೆ.

ವಿವಿಧ ನಗರಗಳಲ್ಲಿ ಪರಿಷ್ಕೃತ ಎಲ್​ಪಿಜಿ ಸಿಲಿಂಡರ್ ಬೆಲೆ ಹೀಗಿದೆ:

  • ದೆಹಲಿ-884.50 ರೂ.

  • ಮುಂಬೈ-884.5 ರೂ.

  • ಕೊಲ್ಕತ್ತಾ-911 ರೂ.

  • ಚೆನ್ನೈ-900 ರೂ.




ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:Latha CG
First published: