Raksha Ramaiah: ಯುವ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕ

ಪಕ್ಷ ನೀಡಿರುವ ಜವಾಬ್ದಾರಿಯನ್ನು ವಿನಮ್ರವಾಗಿ ಸ್ವೀಕರಿಸಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದು ರಕ್ಷಾ ರಾಮಯ್ಯ ಹೇಳಿದ್ದಾರೆ.

ರಕ್ಷಾ ರಾಮಯ್ಯ

ರಕ್ಷಾ ರಾಮಯ್ಯ

  • Share this:
ಬೆಂಗಳೂರು (ಜೂ.3): ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ. ಎಸ್ ರಕ್ಷಾ ರಾಮಯ್ಯರನ್ನು (Raksha Ramaiah) ಯುವ ಕಾಂಗ್ರೆಸ್​​ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ (National Youth Congress General Secretary) ನೇಮಿಸಲಾಗಿದೆ. ಯುವ ಕಾಂಗ್ರೆಸ್ ನಾಯಕರಾಗಿ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ನೇಮಕ ಮಾಡಲಾಗಿದೆ. ತಮ್ಮ ಈ ನೇಮಕಕ್ಕೆ ಸಂತಸ ವ್ಯಕ್ತಪಡಿಸಿರುವ ರಕ್ಷಾ ರಾಮಯ್ಯ, 'ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಡ್ತಿ ನೀಡಿರುವುದಕ್ಕೆ ಸಂತಸವಾಗುತ್ತಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕಾತಿ (Recruitment) ಮಾಡಲಾಗಿದೆ' ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ (B.V Srinivas) ಹೇಳಿದ್ದಾರೆಂದು ಅವರು ತಿಳಿಸಿದ್ದಾರೆ.

ಎಂ. ಎಸ್ ರಕ್ಷಾ ರಾಮಯ್ಯಗೆ ಪಟ್ಟ

'ಪಕ್ಷ ಸಂಘಟನೆಗಾಗಿ ನೀವು ನಿಮ್ಮ ಪೂರ್ಣ ಸಮಯ ಮತ್ತು ಶಕ್ತಿಯನ್ನು ವಿನಿಯೋಗಿಸುತ್ತೀರಿ. ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಕ್ರಿಯಾಶೀಲ ನಾಯಕತ್ವದಲ್ಲಿ ನೀವು ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೀರಿ ಎಂಬ ವಿಶ್ವಾಸವಿದೆ' ಎಂದು ಬಿ ವಿ ಶ್ರೀನಿವಾಸ್‌ ಅವರು ರಕ್ಷಾ ರಾಮಯ್ಯ ಅವರಿಗೆ ಹೇಳಿದ್ದಾರೆ.

ಪಕ್ಷದ ಬಲವರ್ಧನೆಗೆ ಶಕ್ತಿ ಮೀರಿ ಕೆಲಸ

'ಪಕ್ಷ ನೀಡಿರುವ ಜವಾಬ್ದಾರಿಯನ್ನು ವಿನಮ್ರವಾಗಿ ಸ್ವೀಕರಿಸಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಕಳೆದ ಒಂದು ವರ್ಷ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಇದರ ಯಶಸ್ಸಿನ ಆಧಾರದ ಮೇಲೆಯೇ ತಮ್ಮನ್ನು ಈ ಜವಾಬ್ದಾರಿಯುತ ಸ್ಥಾನಕ್ಕೆ ನಿಯೋಜಿಸಲಾಗಿದೆ. ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ' ಎಂದು ರಕ್ಷಾ ರಾಮಯ್ಯ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Mohan Bhagwat: ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕೋ ಅಗತ್ಯ ಇಲ್ಲ ಎಂದ ಮೋಹನ್ ಭಾಗವತ್!

ನಿರಂತರ ಶ್ರಮವಹಿಸುತ್ತೇನೆ

ಇತ್ತೀಚೆಗೆ ಉದಯಪುರದಲ್ಲಿ ಜರುಗಿದ ಕಾಂಗ್ರೆಸ್ ಚಿಂತನ ಸಮಾವೇಶದಲ್ಲಿ ಕೈಗೊಂಡ ನಿರ್ಣಗಳ ಅನುಷ್ಠಾನಕ್ಕೆ ಶ್ರಮಿಸುತ್ತೇನೆ. ರಾಷ್ಟ್ರ್ರಮಟ್ಟದಲ್ಲಿ ಯುವ ಕಾಂಗ್ರೆಸ್ ಮತ್ತು ಯುವ ಸಮೂಹದ ಧ್ವನಿಯಾಗಿ ಕೆಲಸ ಮಾಡುತ್ತೇನೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ನಿರಂತರ ಶ್ರಮವಹಿಸುತ್ತೇನೆ ಎಂದು ರಕ್ಷಾ ರಾಮಯ್ಯ ತಿಳಿಸಿದ್ದಾರೆ.

ಇಡಿಯಿಂದ ರಾಹುಲ್ ಗಾಂಧಿಗೆ ಮತ್ತೊಂದು ಸಮನ್ಸ್!

ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೆ ಈಡು ಮಾಡುತ್ತಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಾಹುಲ್‌ ಗಾಂಧಿಗೆ (Rahul Gandhi) ಮತ್ತೊಂದು ಸಮನ್ಸ್ (Summons) ಜಾರಿ ಮಾಡಿದೆ.  ಮೊನ್ನೆ ಅಂದರೆ ಜೂನ್ 1ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ  ಅವರಿಗೆ ಜೂನ್ 8ರಂದು ಅವರ ಪುತ್ರ ಸಂಸದ ರಾಹುಲ್ ಗಾಂಧಿ (Rahul Gandhi) ಅವರಿಗೆ ಜೂನ್ 8ಕ್ಕೂ ಮೊದಲೇ ಫೆಡರಲ್ ಏಜೆನ್ಸಿಯ ಮುಂದೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿತ್ತು.‌ ಆದರೀಗ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಸಮನ್ಸ್ ನೀಡಿ ಜೂನ್ 13ರಂದು ದೆಹಲಿಯ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ಕಾಂಗ್ರೆಸ್ ಪಕ್ಷ, ವಿಶೇಷವಾಗಿ ಅದರ ಅಧ್ಯಕ್ಷೆಯಾದ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಯಂಗ್ ಇಂಡಿಯನ್ ಸಂಸ್ಥೆಯಲ್ಲಿ ಪಾಲುದಾರರಾಗಿದ್ದಾರೆ. ಯಂಗ್ ಇಂಡಿಯನ್ ಸಂಸ್ಥೆಯು ಹಣಕಾಸು ಅಕ್ರಮಗಳನ್ನು ನಡೆಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲಾಗಿದೆ‌.

ಇದನ್ನೂ ಓದಿ: Resort Politics: ರೆಸಾರ್ಟ್ ರಾಜಕಾರಣ ಶುರು! ಒಟ್ಟಾಗಿ ಬಸ್ ಹತ್ತಿ​ ಎಲ್ಲಿಗೋ ಶಿಫ್ಟ್ ಆಗಿದ್ದಾರೆ ಕಾಂಗ್ರೆಸ್ ಶಾಸಕರು

ರಾಹುಲ್ ಗಾಂಧಿಗೆ ಮತ್ತೊಂದು ಸಮನ್ಸ್

ಇದೇ ಹಿನ್ನೆಲೆಯಲ್ಲಿ ಜೂನ್ 1ರಂದು ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಆದರೀಗ ರಾಹುಲ್ ಗಾಂಧಿ ಅವರಿಗೆ ಜುಲೈ 13ರಂದು ವಿಚಾರಣೆಗೆ ಬರುವಂತೆ ಹೊಸ ಸಮನ್ಸ್ ನೀಡಿರುವುದು ಕುತೂಹಲ ಮೂಡಿಸಿದೆ.
Published by:Pavana HS
First published: