ಇಂದೋರ್: ದೇಶವೇ ಬೆಚ್ಚಿ ಬೀಳುವಂತಹ ಭೀಕರ ದುರ್ಘಟನೆಯೊಂದು ಮಧ್ಯಪ್ರದೇಶದಲ್ಲಿ ಜರುಗಿದೆ. 100 ಅಡಿ ಎತ್ತರವಿದ್ದ ಸೇತುವೆಯ ಮೇಲಿಂದ ಬಸ್ ಒಂದು (MP Bus Accident) ನರ್ಮದಾ ನದಿಗೆ ಬಿದ್ದಿದೆ. ಈ ಭೀಕರ ದುರ್ಘಟನೆಯಲ್ಲಿ ಕನಿಷ್ಠ 12 ಬಸ್ ಸವಾರರು ಮೃತಪಟ್ಟಿದ್ದಾರೆ ಎಂದು ಮಧ್ಯಪ್ರದೇಶ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ. ಮಹಾರಾಷ್ಟ್ರದ ಧಾರ್ ಜಿಲ್ಲೆಯ ಖಲ್ಘಾಟ್ ಸಂಜಯ್ ಸೇತುವೆಯ ಮೇಲೆ ಸೋಮವಾರ ಪ್ರಯಾಣಿಸುತ್ತಿದ್ದ ಮಹಾರಾಷ್ಟ್ರ ರೋಡ್ವೇಸ್ ಬಸ್ 100 ಅಡಿ ಎತ್ತರದಿಂದ ನರ್ಮದಾ ನದಿಗೆ (Narmada River) ಬಿದ್ದು ಬಿದ್ದು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಬಸ್ ಪ್ರಯಾಣಿಕರ ಪೈಕಿ 15 ಮಂದಿಯನ್ನು ರಕ್ಷಿಸಲಾಗಿದೆ ಎಂದು ಸಹ ವರದಿಯಾಗಿದೆ.
12 people dead, 15 rescued after a Maharashtra Roadways bus going from Indore to Pune falls off Khalghat Sanjay Setu in Dhar district, says Madhya Pradesh minister Narottam Mishra. pic.twitter.com/h4FuW2B3Ch
— ANI MP/CG/Rajasthan (@ANI_MP_CG_RJ) July 18, 2022
ನರ್ಮದಾ ನದಿಯ ಆಳದಲ್ಲಿ ಸಂಪೂರ್ಣವಾಗಿ ಮುಳುಗಿರುವ ಬಸ್ನಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ನಮಗೆ ಸ್ಪಷ್ಟವಾಗಿಲ್ಲ. ಇನ್ನಷ್ಟು ಪ್ರಯಾಣಿಕರು ಬದುಕುಳಿದಿರುವ ಸಾಧ್ಯತೆಯಿದೆ ಎಂದು ಮಧ್ಯಪ್ರದೇಶ ಸಚಿವ ನರೋತ್ತಮ್ ಮಿಶ್ರಾ ಅವರು ಹೇಳಿದ್ದಾರೆ. ಬಸ್ ಇಂದೋರ್ನಿಂದ ಪುಣೆಗೆ ತೆರಳುತ್ತಿದ್ದಾಗ ತಡೆಗೋಡೆ ಮುರಿದು ನದಿಗೆ ಬಿದ್ದಿದ್ದು, ವಾಹನವನ್ನು ನೀರಿನಿಂದ ಹೊರಗೆ ಎಳೆಯಲು ಭಾರೀ ಯಂತ್ರೋಪಕರಣಗಳನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಎಸ್ಡಿಆರ್ಎಫ್ ತಂಡದಿಂದ ಕಾರ್ಯಾಚರಣೆ
ಮಧ್ಯಪ್ರದೇಶ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎಸ್ಡಿಆರ್ಎಫ್) ತಂಡವು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುವಲ್ಲಿ ಸ್ಥಳೀಯ ಮೀನುಗಾರರೊಂದಿಗೆ ಸಮನ್ವಯ ಸಾಧಿಸುತ್ತಿದೆ. ಇಂದೋರ್ ಮತ್ತು ಧಾರ್ನ ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯವನ್ನು ಪರಿಶೀಲಿಸಲು ಸ್ಥಳಕ್ಕೆ ಧಾವಿಸಿದ್ದಾರೆ.
ಇದನ್ನೂ ಓದಿ: Presidential Election: ರಾಷ್ಟ್ರಪತಿ ಚುನಾವಣೆಗೆ ಮತದಾನ; ಮೋದಿ, ಬಸವರಾಜ ಬೊಮ್ಮಾಯಿ ಸೇರಿ ಪ್ರಮುಖರಿಂದ ವೋಟಿಂಗ್
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ ತಕ್ಷಣದ ನೆರವು ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಮೂಲಕ ನರ್ಮದಾ ನದಿಗೆ ಉರುಳಿದ ಬಸ್ ಅಪಘಾತದ ನಂತರ ವಿವಿಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮಧ್ಯ ಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಧಾವಿಸಿದೆ.
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ವಿವಿಧ ಸೂಚನೆ
ಅಪಘಾತದ ಸ್ಥಳದಲ್ಲಿ ಜಿಲ್ಲಾಡಳಿತ ತಂಡವು ಹಾಜರಾಗಿದೆ. ಅಲ್ಲದೇ ಅಪಘಾತದ ಸ್ಥಳದಿಂದ ಬಸ್ಅನ್ನು ತೆಗೆಯಲಾಗಿದೆ. ಖಾರ್ಗೋನೆ, ಧಾರ್ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿದೆ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಹಿಂದಿಯಲ್ಲಿ ಸರಣಿ ಟ್ವೀಟ್ಗಳ ಮೂಲಕ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Lottery Scam: ಲಾಟರಿ ಫಲಿತಾಂಶವೇ ನಕಲಿ! ಮಹಾ ಮೋಸದ ಜಾಲ ಬಯಲು!
ಮಧ್ಯಪ್ರದೇಶದಲ್ಲೂ ನೆರೆಯ ಭೀತಿ, ತತ್ತರ
ತನ್ನ ಪಕ್ಕದ ರಾಜ್ಯ ಮಹಾರಾಷ್ಟ್ರದಂತೆ ಮಧ್ಯಪ್ರದೇಶವೂ ಸಹ ಭಾರಿ ಮಳೆಯಿಂದ ತತ್ತರಿಸಿದೆ. ಕಳೆದ ವಾರ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನರ್ಮದಾಪುರಂ ವಿಭಾಗದಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯೊಂದಿಗೆ ರೆಡ್ ಅಲರ್ಟ್ ಘೋಷಣೆ ಮಾಡಿತ್ತು ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ