ಮತ ಎಣಿಕೆ ಕೇಂದ್ರದಲ್ಲಿ ಫಲಿತಾಂಶದ ವಿವರ ಪಡೆಯುತ್ತಿದ್ದ ಕಾಂಗ್ರೆಸ್ ಮುಖಂಡ ಹೃದಯಾಘಾತದಿಂದ ಸಾವು

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಭೋಪಾಲ್​ ಕ್ಷೇತ್ರದಿಂದ ಸೋತಿದೆ. ಈ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸ್ಪರ್ಧೆ ಮಾಡಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಸಾಧ್ವಿ ಪ್ರಗ್ಯ ಸ್ಪರ್ಧೆ ಮಾಡಿದ್ದರು. ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ದಿಗ್ವಿಜಯ್ ಸಿಂಗ್ ಹೀನಾಯವಾಗಿ ಸೋತಿದ್ದಾರೆ.

HR Ramesh | news18
Updated:May 23, 2019, 3:36 PM IST
ಮತ ಎಣಿಕೆ ಕೇಂದ್ರದಲ್ಲಿ ಫಲಿತಾಂಶದ ವಿವರ ಪಡೆಯುತ್ತಿದ್ದ ಕಾಂಗ್ರೆಸ್ ಮುಖಂಡ ಹೃದಯಾಘಾತದಿಂದ ಸಾವು
ರತನ್ ಸಿಂಗ್ ಠಾಕೂರ್
HR Ramesh | news18
Updated: May 23, 2019, 3:36 PM IST
ಭೋಪಾಲ್: ಲೋಕಸಭೆ ಚುನಾವಣೆ ಮತ ಎಣಿಕೆ ಕೇಂದ್ರದಲ್ಲಿ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಕಾಂಗ್ರೆಸ್ ಮುಖ್ಯಸ್ಥರು ಅಸುನೀಗಿದ ಹೃದಯ ವಿದ್ರಾವಕ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ರತನ್​ ಸಿಂಗ್ ಠಾಕೂರ್ ಮೃತಪಟ್ಟ ಕಾಂಗ್ರೆಸ್​ ಮುಖಂಡ. ಮತ ಎಣಿಕೆ ಕೇಂದ್ರದಲ್ಲಿ ಫಲಿತಾಂಶ ಮಾಹಿತಿ ಕಲೆ ಹಾಕುತ್ತಿದ್ದಾಗ ಠಾಕೂರ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣವೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆಸ್ಪತ್ರೆಯಲ್ಲಿ ಅವರು ಮೃತಪಟ್ಟರು.

ಇದನ್ನು ಓದಿ: LoKSabha Election Result 2019: ಅಸ್ತಿತ್ವಕ್ಕೆ ಬಂದ ಒಂದೇ ವರ್ಷದಲ್ಲಿ ಐಸಿಯುಗೆ ಬಂದ ಮೈತ್ರಿ ಸರಕಾರ; ಗೌಡರ ಸೋಲು ಮೈತ್ರಿಗೆ ತಂದಿತು ಆಪತ್ತು

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಭೋಪಾಲ್​ ಕ್ಷೇತ್ರದಿಂದ ಸೋತಿದೆ. ಈ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸ್ಪರ್ಧೆ ಮಾಡಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಸಾಧ್ವಿ ಪ್ರಗ್ಯ ಸ್ಪರ್ಧೆ ಮಾಡಿದ್ದರು. ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ದಿಗ್ವಿಜಯ್ ಸಿಂಗ್ ಹೀನಾಯವಾಗಿ ಸೋತಿದ್ದಾರೆ. ಮಧ್ಯಪ್ರದೇಶದ 29 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 28ರಲ್ಲಿ ಮುನ್ನಡೆ ಸಾಧಿಸಿದ್ದು, ಗೆಲುವು ಬಹುತೇಕ ಖಚಿತವಾಗಿದೆ.

First published:May 23, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...