Mahant Narendra Giri Suicide: ಬೆದರಿಕೆಯಿಂದ ಸಾವಿಗೆ ಶರಣಾಗುತ್ತಿದ್ದೇನೆ; ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಹಂತ್ ನರೇಂದ್ರ ಗಿರಿ

ಮಹಂತ್ ನರೇಂದ್ರ ಗಿರಿ ಆತ್ಮಹತ್ಯೆ ಪ್ರಕರಣ ಪಕ್ಷಪಾತವಿಲ್ಲದ ಮತ್ತು ಪಾರದರ್ಶಕ ತನಿಖೆ ನಡೆಯುತ್ತಿದೆ ಮತ್ತು ರಾಜ್ಯ ಪೊಲೀಸರು ಪ್ರಕರಣವನ್ನು ನಿಭಾಯಿಸಲು ಸಮರ್ಥರಾಗಿದ್ದಾರೆ ಎಂದು ಅಧಿಕಾರಿ ಹೇಳಿದರು. ಆತ್ಮಹತ್ಯೆ ಪತ್ರದ ಸತ್ಯಾಸತ್ಯತೆಯ ಬಗ್ಗೆ, ವಿಧಿವಿಜ್ಞಾನ ತಜ್ಞರು ಪರಿಶೀಲಿಸುತ್ತಿದ್ದಾರೆ ಎಂದು ಕುಮಾರ್ ತಿಳಿಸಿದರು.

ಮಹಂತ್ ನರೇಂದ್ರ ಗಿರಿ

ಮಹಂತ್ ನರೇಂದ್ರ ಗಿರಿ

 • Share this:
  ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ, (khil Bharatiya Akhada Parishad president Mahant Narendra Giri) ಸೋಮವಾರ ಉತ್ತರಪ್ರದೇಶದ ಪ್ರಯಾಗರಾಜ್‌ನ ಬಘಂಬರಿ ಮಠದ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರು ಸಾವಿಗೂ ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಸಿಕ್ಕಿದ್ದು, ಇವರ ಶಿಷ್ಯ ಆನಂದ್ ಗಿರಿ ಮತ್ತು ಇತರರ ಹೆಸರನ್ನು ಹೆಸರನ್ನು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಆನಂದ್ ಗಿರಿ ಹಾಗೂ ಇತರರ ಬೆದರಿಕೆ ಹಾಗೂ ಒತ್ತಡದಿಂದ ಆತ್ಮಕತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರದಲ್ಲಿ ಬರೆದಿದ್ದಾರೆ.

  "ನನ್ನ ಸಾವಿಗೆ ಕಾರಣವಾಗಿರುವ ಪತ್ರದಲ್ಲಿ ಉಲ್ಲೇಖಿಸಿರುವ ಜನರನ್ನು ಬಂಧಿಸುವಂತೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಾನು ಪ್ರಯಾಗರಾಜ್ ಪೋಲಿಸ್ ಮತ್ತು ಸ್ಥಳೀಯ ಆಡಳಿತಕ್ಕೆ ಮನವಿ ಮಾಡುತ್ತೇನೆ" ಎಂದು  ಮಹಂತ್ ನರೇಂದ್ರ ಗಿರಿ ಅವರು ಡೆತ್ ನೋಟ್​ನಲ್ಲಿ ಬರೆದಿದ್ದಾರೆ.

  ಏತನ್ಮಧ್ಯೆ, ಉತ್ತರ ಪ್ರದೇಶ ಪೊಲೀಸರು ಮಹಂತ್ ನರೇಂದ್ರ ಗಿರಿ 'ಆತ್ಮಹತ್ಯೆ' ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಸಾವಿನ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನೂ ರಚಿಸಲಾಗಿದೆ. ಮಹಂತ್ ಗಿರಿ ಅಖಿಲ ಭಾರತೀಯ ಅಖಾಡ ಪರಿಷತ್ತಿನ ಅಧ್ಯಕ್ಷರಾಗಿದ್ದರು. ಅನೇಕ ಸಂತರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಮತ್ತು ಸಾವಿನ ಪತ್ರದ ಬಗ್ಗೆ ಕೂಲಂಕಷ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

  ಉತ್ತರ ಪ್ರದೇಶ ಪೊಲೀಸರು ಹರಿದ್ವಾರದಿಂದ ನರೇಂದ್ರ ಗಿರಿಯ ಶಿಷ್ಯ ಆನಂದ ಗಿರಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಆನಂದ್ ಗಿರಿಯನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ ಮತ್ತು ಆತನ ವಿರುದ್ಧ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

  ಭಾರತದ ಅತಿದೊಡ್ಡ ದಾರ್ಶನಿಕರ ಸಂಘಟನೆಯ ಅಧ್ಯಕ್ಷರಾದ ಮಹಂತ್ ನರೇಂದ್ರ ಗಿರಿ ಅವರು ಸೋಮವಾರ ಅಲಹಾಬಾದ್‌ನ ಬಘಂಬರಿ ಮಠದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಅವರು ಏಳು- ಎಂಟು ಪುಟಗಳ ಆತ್ಮಹತ್ಯಾ  ಪತ್ರ ಬರೆದಿರುವುದು ಪತ್ತೆಯಾಗಿದೆ. ಆ ಪತ್ರದಲ್ಲಿ ತಾನು ಮಾನಸಿಕವಾಗಿ ತೊಂದರೆಗೀಗೆ ಈಡಾಗಿದ್ದೇನೆ ಮತ್ತು ತನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ ಎಂದು ಬರೆದಿದ್ದಾರೆ. ಆತ್ಮಹತ್ಯೆ ಪತ್ರದಲ್ಲಿ, ಮೂರು ಜನರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದರ ಆಧಾರದ ಮೇಲೆ ಆನಂದ್ ಗಿರಿಯನ್ನು ಬಂಧಿಸಿ, ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಡಿಜಿ ತಿಳಿಸಿದ್ದಾರೆ. "ಹೆಚ್ಚಿನ ತನಿಖೆಗಾಗಿ ಆತನನ್ನು ಅಲಹಾಬಾದ್‌ಗೆ ಕರೆತರಲಾಗುತ್ತಿದೆ ಮತ್ತು ಪ್ರಕರಣ ಸಂಬಂಧ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ." ಎಂದು ಅವರು ಹೇಳಿದರು.

  ಮಹಂತ್ ನರೇಂದ್ರ ಗಿರಿ ಆತ್ಮಹತ್ಯೆ ಪ್ರಕರಣ ಪಕ್ಷಪಾತವಿಲ್ಲದ ಮತ್ತು ಪಾರದರ್ಶಕ ತನಿಖೆ ನಡೆಯುತ್ತಿದೆ ಮತ್ತು ರಾಜ್ಯ ಪೊಲೀಸರು ಪ್ರಕರಣವನ್ನು ನಿಭಾಯಿಸಲು ಸಮರ್ಥರಾಗಿದ್ದಾರೆ ಎಂದು ಅಧಿಕಾರಿ ಹೇಳಿದರು. ಆತ್ಮಹತ್ಯೆ ಪತ್ರದ ಸತ್ಯಾಸತ್ಯತೆಯ ಬಗ್ಗೆ, ವಿಧಿವಿಜ್ಞಾನ ತಜ್ಞರು ಪರಿಶೀಲಿಸುತ್ತಿದ್ದಾರೆ ಎಂದು ಕುಮಾರ್ ತಿಳಿಸಿದರು.

  ಇದನ್ನು ಓದಿ: Siddaramaiah: ಸರ್ಕಾರದ ಗಮನಕ್ಕೆ ತಾರದೇ ಡಿಸಿ ದೇಗುಲ ಒಡೆಯುತ್ತಾರಾ?; ಧಾರ್ಮಿಕ ಕಟ್ಟಡ ಸಂರಕ್ಷಣಾ ವಿಧೇಯಕ ಚರ್ಚೆ ವೇಳೆ ಸಿದ್ದರಾಮಯ್ಯ ಪ್ರಶ್ನೆ

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಗುಂಪುಗೂಡುವುದನ್ನು ಆದಷ್ಟು ನಿಯಂತ್ರಿಸಬೇಕಿದೆ. ಸರ್ಕಾರ ಕಾಲಕಾಲಕ್ಕೆ ಹೊರಡಿಸುತ್ತಿರುವ ಕೊರೋನಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕಿದೆ.
  Published by:HR Ramesh
  First published: