ಮಹಾರಾಷ್ಟ್ರ; ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಬಾಲಕರೂ ಸೇರಿ 33 ಜನರ ಬಂಧನ!

ಕಳೆದ ಜನವರಿಯಲ್ಲಿ ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರವನ್ನು ವಿಡಿಯೊ ಮಾಡಿಕೊಂಡಿದ್ದಾನೆ. ಇದೆ ವಿಡಿಯೊವನ್ನು ಇಟ್ಟುಕೊಂಡು ಬಾಲಕಿಯನ್ನು ಬ್ಲಾಕ್ ಮೇಲೆ ಮಾಡುವ ಮೂಲಕ ಯುವಕನ ಗೆಳೆಯರು ಮತ್ತು ಇತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಮುಂಬೈ (ಸೆಪ್ಟೆಂಬರ್​ 24); ಮಹಾರಾಷ್ಟ್ರದ (Maharashtra) ಮುಂಬೈನಲ್ಲಿ (Mumbai) 15 ವರ್ಷದ ಬಾಲಕಿ ಮೇಲೆ ಒಂಬತ್ತು ತಿಂಗಳ ಅವಧಿಯಲ್ಲಿ, ಇಬ್ಬರು ಅಪ್ರಾಪ್ತರು ಸೇರಿದಂತೆ 33 ಜನರು ಸಾಮೂಹಿಕ ಅತ್ಯಾಚಾರ (Rape Case) ನಡೆಸಿದ್ದಾರೆ ಎಂಬ ಭಯಾನಕ, ಅಮಾನವೀಯ ಘಟನೆಯ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಅಲ್ಲದೆ, ಎಲ್ಲಾ ಆರೋಪಿಗಳನ್ನೂ ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ಜನವರಿಯಲ್ಲಿ ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರವನ್ನು ವಿಡಿಯೊ ಮಾಡಿಕೊಂಡಿ ದ್ದಾನೆ. ಇದೆ ವಿಡಿಯೊವನ್ನು ಇಟ್ಟುಕೊಂಡು ಬಾಲಕಿಯನ್ನು ಬ್ಲಾಕ್ ಮೇಲೆ ಮಾಡುವ ಮೂಲಕ ಯುವಕನ ಗೆಳೆಯರು ಮತ್ತು ಇತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ಬಾಲಕಿಯ ದೂರಿನ ನಂತರ, 24 ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ದತ್ತಾತ್ರಯ್ ಕರಾಳೆ ಹೇಳಿದ್ದಾರೆ. ಬಂಧಿತ ಆರೋಪಿಗಳು ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  "ಜನವರಿಯಲ್ಲಿ ಬಾಲಕಿಯ ಪ್ರೇಮಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಘಟನೆಯನ್ನು ವಿಡಿಯೊ ಮಾಡಿಕೊಂಡ ಬಳಿಕ ಇದೆಲ್ಲಾ ಆರಂಭವಾಗಿದೆ. ಆ ವಿಡಿಯೊ ಬಳಸಿಕೊಂಡು ಆತ ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದ. ನಂತರ, ಆತನ ಸ್ನೇಹಿತರು ಮತ್ತು ಪರಿಚಯಸ್ಥರು ಜಿಲ್ಲೆಯ ಡೊಂಬಿವಿಲಿ, ಬದ್ಲಾಪುರ, ಮುರ್ಬಾದ್ ಮತ್ತು ರಬಾಲೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕನಿಷ್ಠ ನಾಲ್ಕರಿಂದ ಐದು ಬಾರಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ" ಎಂದು ಹೆಚ್ಚುವರಿ ಪೊಲೀಸ್ ಆಯುಕ್ತರು (ಪೂರ್ವ ವಿಭಾ‌ಗ) ದತ್ತಾತ್ರಯ್ ಕರಾಳೆ ಹೇಳಿದ್ದಾರೆ.

  ಇದನ್ನೂ ಓದಿ: PM Cares ಭಾರತ ಸರ್ಕಾರದ ನಿಧಿಯಲ್ಲ, RTI ಅಡಿಯಲ್ಲಿ ತರಲು ಸಾಧ್ಯವೇ ಇಲ್ಲ; ಕೇಂದ್ರ ಸರ್ಕಾರ

  ಭಾರತೀಯ ದಂಡ ಸಂಹಿತೆಯ ಅತ್ಯಾಚಾರ, ಪುನರಾವರ್ತಿತ ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ಮತ್ತು "ಹದಿನಾರು ವರ್ಷದೊಳಗಿನ ಮಹಿಳೆಯ ಮೇಲೆ ಅತ್ಯಾಚಾರ" ವಿಬಾಗಗಳ ಅಡಿಯಲ್ಲಿ ಮತ್ತು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪೊಲೀಸರು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿ ಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊ ಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿ ಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: