ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಿವೀಸ್ ಕಾಂಗ್ರೆಸ್ ಶಾಸಕರನ್ನು ಹೈಜಾಕ್ ಮಾಡುತ್ತಿದ್ದಾರೆ; ಅಶೋಕ್ ಚವ್ಹಾನ್ ಆರೋಪ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಕುಂದಿಸಲು ಮುಂದಾಗಿರುವ ಬಿಜೆಪಿ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರನ್ನು ವ್ಯಯಕ್ತಿಕವಾಗಿ ಭೇಟಿ ಮಾಡಿ ಬಿಜೆಪಿ ಸೇರ್ಪಡೆಯಾಗುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಶೋಕ್ ಚವ್ಹಾನ್ ಆರೋಪಿಸಿದ್ದಾರೆ.

MAshok Kumar | news18
Updated:June 8, 2019, 2:05 PM IST
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಿವೀಸ್ ಕಾಂಗ್ರೆಸ್ ಶಾಸಕರನ್ನು ಹೈಜಾಕ್ ಮಾಡುತ್ತಿದ್ದಾರೆ; ಅಶೋಕ್ ಚವ್ಹಾನ್ ಆರೋಪ
ಕಾಂಗ್ರೆಸ್ ನಾಯಕ ಅಶೋಕ್ ಚವ್ಹಾನ್.
MAshok Kumar | news18
Updated: June 8, 2019, 2:05 PM IST
ಮುಂಬೈ (ಜೂನ್​.08); ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ವ್ಯಯಕ್ತಿಕವಾಗಿ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರನ್ನು ಭೇಟಿ ಮಾಡುತ್ತಿದ್ದು, ಎಲ್ಲರನ್ನೂ ಬಿಜೆಪಿ ಸೇರ್ಪಡೆಯಾಗುವಂತೆ ಒತ್ತಾಯಿಸುತ್ತಿದ್ದಾರೆ. ಈ ಮೂಲಕ ವಿರೋಧ ಪಕ್ಷದ ಶಾಸಕರನ್ನು ಹೈಜಾಕ್ ಮಾಡುತ್ತಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾನ್ ಆರೋಪಿಸಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಎರಡು ದಿನಗಳ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ನಡೆಸಿದ ನಂತರ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಕುಂದಿಸಲು ಮುಂದಾಗಿರುವ ಬಿಜೆಪಿ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರನ್ನು ವ್ಯಯಕ್ತಿಕವಾಗಿ ಭೇಟಿ ಮಾಡಿ ಬಿಜೆಪಿ ಸೇರ್ಪಡೆಯಾಗುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ಯಾರೂ ಬಿಜೆಪಿಗೆ ಸೇರ್ಪಡೆಯಾಗುವ ಮನಸ್ಥಿತಿಯಲ್ಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ಪ್ರತಿಪಕ್ಷ ನಾಯಕನೇ ಬಿಜೆಪಿ ತೆಕ್ಕೆಗೆ; ನಾವಿಕನಿಲ್ಲದ ದೋಣಿಯಂತಾದ ಕೈ ಪಾಳಯ

ಇತ್ತೀಚೆಗೆ ಕಾಂಗ್ರೆಸ್​ ಪಕ್ಷದ ಹಿರಿಯ ಮುಖಂಡ ಹಾಗೂ ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಅವರು, “ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲನುಭವಿಸಿದ ತಕ್ಷಣ ಅದೇ ರೀತಿಯ ಫಲಿತಾಂಶ ವಿಧಾನಸಭೆ ಚುನಾವಣೆಯಲ್ಲೂ ಪ್ರತಿಫಲನವಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ.

ಇಲ್ಲಿನ ಜನ ರಾಜ್ಯ ಸರ್ಕಾರದ ಕೆಟ್ಟ ಆಡಳಿತದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಇದನ್ನು ಪೂರಕವಾಗಿ ಬೆಳೆಸಿಕೊಂಡು ಮತ್ತೆ ಪಕ್ಷವನ್ನು ಕಟ್ಟುವ ಅವಕಾಶ ಇತ್ತು. ಆದರೆ ರಾಧಾಕೃಷ್ಣ ಪಾಟೀಲ್ ಅವಸರದ ನಿರ್ಣಯ ತೆಗೆದುಕೊಂಡು ಪಕ್ಷವನ್ನೇ ತ್ಯಜಿಸಿದ್ದಾರೆ” ಎಂದರು.

ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕರಾಗಿದ್ದ ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಮಗ ಸುಜಯ್ ವಿಖೆ ಪಾಟೀಲ್ ಅಹಮದ್ ನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪರಿಣಾಮ ರಾಧಾಕೃಷ್ಣ ಪಾಟೀಲ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.
Loading...

ಇದನ್ನೂ ಓದಿ : ಕರ್ನಾಟಕ ಬಳಿಕ ರಾಜಸ್ಥಾನ ಕಾಂಗ್ರೆಸ್​ನಲ್ಲೂ ಭಿನ್ನಮತ; ಮಗನ ಸೋಲಿನ ಹೊಣೆ ಸಚಿನ್ ಪೈಲಟ್​ ಹೊರಬೇಕು ಎಂದ ಸಿಎಂ ಗೆಹ್ಲೋಟ್​

First published:June 8, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...