HOME » NEWS » National-international » MAHARASHTRA GIRLS STRIPPED AND FORCED TO DANCE BY COPS AT HOSTEL IN JALGAON PROBE ORDERED MAK

Crime News: ಹಾಸ್ಟೆಲ್ ಯುವತಿಯರನ್ನು ಬೆತ್ತಲಾಗಿಸಿ ನೃತ್ಯ ಮಾಡಿಸಿದ ಪೊಲೀಸರು: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

ಇದು ಅತ್ಯಂತ ದುರದೃಷ್ಟಕರ ಘಟನೆ. ಇದರ ಬಗ್ಗೆ ತನಿಖೆ ನಡೆಸಲು ನಾಲ್ಕು ಸದಸ್ಯರ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಕೋರಲಾಗಿದೆ. ವರದಿಯ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ತಿಳಿಸಿದ್ದಾರೆ.

news18-kannada
Updated:March 3, 2021, 7:33 PM IST
Crime News: ಹಾಸ್ಟೆಲ್ ಯುವತಿಯರನ್ನು ಬೆತ್ತಲಾಗಿಸಿ ನೃತ್ಯ ಮಾಡಿಸಿದ ಪೊಲೀಸರು: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ
ಸಾಂದರ್ಭಿಕ ಚಿತ್ರ.
  • Share this:
ಮುಂಬೈ (ಮಾರ್ಚ್​ 03); ಮಹಾರಾಷ್ಟ್ರದ ಜಲ್ಗಾಂವ್​ನ‌ ಹಾಸ್ಟೆಲ್‌ನಲ್ಲಿ ಪೊಲೀಸರು ಯುವತಿಯರನ್ನು ಬೆತ್ತಲಾಗಿಸಿ ಬಲವಂತದಿಂದ ನೃತ್ಯ ಮಾಡುವಂತೆ ಒತ್ತಾಯಿಸಿರುವ ಘಟನೆ ಇದೀಗ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ರಕ್ಷಕರೇ ಭಕ್ಷಕರಂತಾದ ಮಾಹಾರಾಷ್ಟ್ರ ಪೊಲೀಸ್​ ಇಲಾಖೆಯ ಮೇಲೆ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಮಹಾರಾಷ್ಟ್ರ ಗೃಹಮಂತ್ರಿ ಅನಿಲ್ ದೇಶ್ಮುಖ್ ಆದೇಶಿಸಿದ್ದಾರೆ. ಅಲ್ಲದೆ, ಪ್ರಕರಣದ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನೂ ನೇಮಕ ಮಾಡಿದೆ ಎಂಬ ಮಾಹಿತಿಗಳು ಇದೀಗ ಲಭ್ಯವಾಗುತ್ತಿದೆ.

ರಾಷ್ಟ್ರೀಯ ಮಾಧ್ಯಮಗಳಲ್ಲಿ ಭಿತ್ತರವಾಗಿರುವ ವರದಿ ಮತ್ತು ಜಲ್ಗಾಂವ್‌ ಹಾಸ್ಟೆಲ್‌ನ ಯುವತಿಯರು ದೂರಿದಂತೆ,    ಪೊಲೀಸರು ತನಿಖೆಯ ನೆಪದಲ್ಲಿ ಜಲ್ಗಾಂವ್​ನ ಮಹಿಳಾ ಹಾಸ್ಟೆಲ್​ಗೆ ಪ್ರವೇಶಿಸಿದ್ದಾರೆ. ಅಲ್ಲದೆ, ಹಾಸ್ಟೆಲ್‌ನ ಕೆಲವು ಹುಡುಗಿಯರನ್ನು ಬಲವಂತವಾಗಿ ಬೆತ್ತಲಾಗಿಸಿ ಡಾನ್ಸ್​ ಮಾಡಲು ಒತ್ತಾಯಿಸಿದ್ದಾರೆ. ಈ ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದರೂ ಸಹ ಮಹಾರಾಷ್ಟ್ರದ ಶಿವಸೇನೆ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ.

ಇದನ್ನೂ ಓದಿ: Ramesh Jarkiholi Case: ಕುಟುಂಬದ ರಾಜಕೀಯ ಮಹತ್ವಾಕಾಂಕ್ಷೆಗೆ ದೊಡ್ಡ ಪೆಟ್ಟು ಕೊಟ್ಟ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ!

ಆದರೆ, ಇಂದು ವಿರೋಧ ಪಕ್ಷವಾದ ಬಿಜೆಪಿ ಈ ವಿಷಯವನ್ನು ಕೈಗೆತ್ತಿಕೊಂಡು ಸರ್ಕಾರವನ್ನು ಪ್ರಶ್ನೆ ಮಾಡಿತ್ತು. ಬಿಜೆಪಿ ಮುಖಂಡ ಸುಧೀರ್ ಮುಂಗಂತಿವಾರ್ ಮಹಾರಾಷ್ಟ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು, ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದರು. ಪರಿಣಾಮ ನಂತರ ಗೃಹ ಸಚಿವ ಸನಿಲ್ ದೇಶ್ಮುಖ್​ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪ್ರಕರಣವನ್ನು ತನಿಖೆಗೆ ಒಳಪಡಿಸುವುದಾಗಿ ತಿಳಿಸಿದ್ದಾರೆ.
Youtube Video

ಘಟನೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್, "ಇದು ಅತ್ಯಂತ ದುರದೃಷ್ಟಕರ ಘಟನೆ. ಇದರ ಬಗ್ಗೆ ತನಿಖೆ ನಡೆಸಲು ನಾಲ್ಕು ಸದಸ್ಯರ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಕೋರಲಾಗಿದೆ. ವರದಿಯ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದ್ದಾರೆ. ಆದರೆ ಇದು ಸರ್ಕಾರದ ವೈಫಲ್ಯ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
Published by: MAshok Kumar
First published: March 3, 2021, 7:33 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories