ಮಹಾರಾಷ್ಟ್ರ ಗವರ್ನರ್​​ ಬಿಜೆಪಿ ಅಪ್ಪಣೆಯಂತೆ ನಡೆಯುತ್ತಿದ್ದಾರೆ: ಶಿವಸೇನೆ ಮುಖ್ಯಸ್ಥ ಉದ್ಧವ್​​ ಠಾಕ್ರೆ

ಸರ್ಕಾರ ರಚನೆಗೆ ಬೆಂಬಲ ಪತ್ರದೊಂದಿಗೆ ಹಕ್ಕುಮಂಡನೆ ಮಾಡಲು ಎನ್​ಸಿಪಿಗೆ ಇವತ್ತು ರಾತ್ರಿಯವರೆಗೂ ನೀಡಲಾದ ಗಡುವು ಇನ್ನೂ ಅಂತ್ಯವಾಗುವ ಮುನ್ನವೇ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಲು ಹೇಗೆ ಸಾಧ್ಯ ಎಂದು ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ಪ್ರಶ್ನಿಸಿದ್ದಾರೆ.

news18-kannada
Updated:November 12, 2019, 8:25 PM IST
ಮಹಾರಾಷ್ಟ್ರ ಗವರ್ನರ್​​ ಬಿಜೆಪಿ ಅಪ್ಪಣೆಯಂತೆ ನಡೆಯುತ್ತಿದ್ದಾರೆ: ಶಿವಸೇನೆ ಮುಖ್ಯಸ್ಥ ಉದ್ಧವ್​​ ಠಾಕ್ರೆ
ಸಿಎಂ ಉದ್ಧವ್ ಠಾಕ್ರೆ
  • Share this:
ನವದೆಹಲಿ(ನ.12): ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಭಾರತೀಯ ಜನತಾ ಪಕ್ಷದ ಅಪ್ಪಣೆಯಂತೆ ನಡೆಯುತ್ತಿದ್ದಾರೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್​​ ಠಾಕ್ರೆ ಕಿಡಿಕಾರಿದ್ದಾರೆ. ಸರ್ಕಾರ ರಚನೆಗೆ ಶಿವಸೇನೆಗೆ ಅವಕಾಶ ಮಾಡಿಕೊಡದೆ, ರಾಜ್ಯಪಾಲ ಕೊಶ್ಯಾರಿ ಏಕಾಏಕಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದಾರೆ. ಈ ಮೂಲಕ ಬಿಜೆಪಿ ಸರ್ಕಾರ ರಚನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದಾರೆ ಎಂದು ಉದ್ಧವ್​​ ಠಾಕ್ರೆ ಆರೋಪಿಸಿದರು.

ಸರ್ಕಾರ ರಚಿಸುವಂತೆ ಮೊದಲು ಬಿಜೆಪಿಗೆ ನಂತರ ಶಿವಸೇನಾಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್​​ ಸಿಂಗ್​ ಕೊಶ್ಯಾರಿ ಆಹ್ವಾನಿ ನೀಡಿದ್ದರು. ಆದರೆ, ಉಭಯ ಪಕ್ಷಗಳು ರಾಜ್ಯಪಾಲರು ನೀಡಿದ ಗಡುವಿನೊಳಗೆ ಸರ್ಕಾರ ರಚಿಸಲು ವಿಫಲವಾದವು. ಹಾಗಾಗಿ ಮತ್ತೆ ನಿನ್ನೆ ಸರ್ಕಾರ ರಚನೆಗೆ ಎನ್​ಸಿಪಿಗೆ ಆಹ್ವಾನ ನೀಡಿದ್ದರು. ಅಲ್ಲದೇ ಎನ್​​ಸಿಪಿಗೆ ಸರ್ಕಾರ ರಚಿಸಲು ಇಂದು ರಾತ್ರಿ 8:30ರವರೆಗೂ ಗಡುವು ನೀಡಿದ್ದರು. ಈ ಮಧ್ಯೆಯೀಗ ರಾಜ್ಯಪಾಲರು ಏಕಾಏಕಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿರುವುದು ಈಗ ರಾಜಕೀಯ ವಲದಲ್ಲಿ ತೀವ್ರ ಅಚ್ಚರಿ ಮೂಡಿಸಿದೆ. ರಾಜ್ಯಪಾಲರ ಶಿಫಾರಸು ಕಳುಹಿಸಿದ ಬಳಿಕ ಕೇಂದ್ರ ಸಂಪುಟವು ಸಭೆ ನಡೆಸಿ ಒಪ್ಪಿಗೆ ಸೂಚಿಸಿತು. ಈ ಶಿಫಾರಸಿಗೆ ರಾಷ್ಟ್ರಪತಿಯವರೂ ಅಂಕಿತ ಹಾಕಿದ್ದಾರೆ.

ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ ರಾಜ್ಯಪಾಲರ ಕ್ರಮಕ್ಕೆ ಎನ್​ಸಿಪಿ, ಕಾಂಗ್ರೆಸ್​ ಮತ್ತು ಶಿವಸೇನೆಯಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ನಡುವೆಯೇ ಶಿವಸೇನೆ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದು, ಎನ್​ಸಿಪಿ ಪಕ್ಷಕ್ಕೆ ನೀಡಿರುವ ಗಡುವು ಅಂತ್ಯವಾಗುವ ಮುನ್ನ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಮಾಡಿರುವುದನ್ನು ಪ್ರಶ್ನಿಸಿದೆ. ಎನ್​ಸಿಪಿಗೆ ಬಹುಮತ ಸಾಬೀತುಪಡಿಸಲು ಇನ್ನಷ್ಟು ಸಮಯ ನೀಡದೇ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ್ದನ್ನು ಶಿವಸೇನೆ ಪ್ರಶ್ನಿಸಿ, ತುರ್ತು ಅರ್ಜಿ ವಿಚಾರಣೆ ಮಾಡುವಂತೆ ಮನವಿ ಮಾಡಿದೆ. ಕಾಂಗ್ರೆಸ್​ ಹಿರಿಯ ಮುಖಂಡ ಮತ್ತು ಹಿರಿಯ ನ್ಯಾಯವಾದಿ ಕಪಿಲ್​ ಸಿಬಲ್​ ಶಿವಸೇನೆ ಪರ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಎನ್​ಸಿಪಿಗೆ ನೀಡಿದ್ದ ಗಡುವು ಮುಗಿಯುವ ಮುನ್ನವೇ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದೇಕೆ? ಗೃಹ ಸಚಿವಾಲಯ ಹೇಳುವುದೇನು?

ಯಾವುದೇ ಪಕ್ಷದಿಂದಲೂ ಸರ್ಕಾರ ರಚಿಸುವ ಪ್ರಯತ್ನ ಕಂಡುಬರದ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ್ದಾರೆನ್ನಲಾಗಿದೆ. ರಾಜ್ಯಪಾಲರ ಶಿಫಾರಸು ಪತ್ರ ಕೇಂದ್ರ ಸರ್ಕಾರವನ್ನು ತಲುಪಿದ್ದು, ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದೆ. ಈ ಮೂಲಕ ಬಿಜೆಪಿ, ಶಿವಸೇನೆ, ಕಾಂಗ್ರೆಸ್​ ಮತ್ತು ಎನ್​ಸಿಪಿ ನಡುವಿನ ಹಗ್ಗಜಗ್ಗಾಟಕ್ಕೆ ರಾಷ್ಟ್ರಪತಿ ಅಂಕುಶದ ಅಂತ್ಯ ಸಿಗಲಿದೆಯಾ? ಸಿಕ್ಕಿದ್ದೇ ಆದಲ್ಲಿ ಮುಂದಿನ ಬೆಳವಣಿಗೆಯ ಬಗ್ಗೆ ಇನ್ನೂ ಹೆಚ್ಚು ಕುತೂಹಲ ಮನೆ ಮಾಡುವಂತಾಗಿದೆ.

ಸರ್ಕಾರ ರಚನೆಗೆ ಬೆಂಬಲ ಪತ್ರದೊಂದಿಗೆ ಹಕ್ಕುಮಂಡನೆ ಮಾಡಲು ಎನ್​ಸಿಪಿಗೆ ಇವತ್ತು ರಾತ್ರಿಯವರೆಗೂ ನೀಡಲಾದ ಗಡುವು ಇನ್ನೂ ಅಂತ್ಯವಾಗುವ ಮುನ್ನವೇ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಲು ಹೇಗೆ ಸಾಧ್ಯ ಎಂದು ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ; ಪಕ್ಷಗಳ ಮುಂದಿರುವ ಆಯ್ಕೆ ಮತ್ತು ಪರಿಣಾಮವೇನು?ಮಾರ್ಕ್ಸ್​ವಾದಿ ಕಮ್ಯೂನಿಸ್ಟ್ ಪಕ್ಷ ಸಿಪಿಐಎಂ ಮುಖಂಡ ಸೀತಾರಾಮ್ ಯಚೂರಿ ಅವರು ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿದ್ದಾರೆ. ಕರ್ನಾಟಕದ ಮಾಜಿ ಸಿಎಂ ಎಸ್.ಆರ್. ಬೊಮ್ಮಾಯಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಾಡಿರುವ ಆದೇಶವನ್ನು ಅವರು ಉಲ್ಲೇಖಿಸಿದ್ದಾರೆ. "ಒಂದು ಸರ್ಕಾರದ ಬಲವನ್ನು ರಾಜ್ಯಪಾಲರೇ ಆಗಲೀ ರಾಷ್ಟ್ರಪತಿಯೇ ಆಗಲೀ ವೈಯಕ್ತಿಕ ದೃಷ್ಟಿಯಲ್ಲಿ ನೋಡಲು ಸಾಧ್ಯವಿಲ್ಲ..." ಎಂದು ಬರೆದಿರುವುದನ್ನು ಯಚೂರಿ ಎತ್ತಿ ತೋರಿಸಿ ಟ್ವೀಟ್ ಮಾಡಿದ್ದಾರೆ. ಇನ್ನು, ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಕೂಡ ಮಹಾರಾಷ್ಟ್ರ ರಾಜ್ಯಪಾಲರ ಕ್ರಮವನ್ನು ಅಸಂವಿಧಾನಿಕ ಎಂದು ಟೀಕಿಸಿದ್ಧಾರೆ.
------------
First published: November 12, 2019, 8:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading