ಡಬಲ್ ಡೆಕ್ಕರ್ ಬಸ್ಸಿಗೆ ಅತೀ ವೇಗವಾಗಿ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 18 ಮಂದಿ ಸ್ಥಳದಲ್ಲೇ ದುರಂತ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರಾಬಂಕಿ ಸಮೀಪದ ಲಕ್ನೋ-ಅಯೋಧ್ಯಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಮ್ ಸನೇಹಿ ಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ 1.30ರಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಸುಮಾರು 19ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಸದ್ಯದ ಘಟನೆ ಬಗ್ಗೆ ಯುಪಿ ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಶೀಘ್ರವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಲಕ್ನೋ ಎಡಿಜಿ ಸತ್ಯ ನಾರಾಯಣ್ ಸಾಬಟ್ ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ದುರಂತದಲ್ಲಿ 18 ಮಂದಿ ಸಾವನ್ನಪ್ಪಿರುವ ವಿಷಯವನ್ನು ಖಚಿತಪಡಿಸಿದ್ದಾರೆ. ಬರಾಬಂಕಿ ಜಿಲ್ಲೆಯ ರಾಮ್ ಸನೇಹಿ ಘಾಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಈ ದುರಂತ ಅಪಘಾತ ಸಂಭವಿಸಿದ್ದು, 18 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಬಸ್ಸಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.
ಇದನ್ನೂ ಓದಿ:Karnataka Weather Updates: ರಾಜ್ಯದಲ್ಲಿ ತಗ್ಗಿದ ವರುಣನ ಅಬ್ಬರ; ಇಂದು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ
ಸಾವನ್ನಪ್ಪಿದವರಲ್ಲಿ ಬಹುತೇಕರು ಬಿಹಾರದ ಸಿತಾಮರ್ಹಿ ಮತ್ತು ಸಹರ್ಸ ಸೇರಿದಂತೆ ಅನೇಕ ಜಿಲ್ಲೆಯವರಾಗಿದ್ದಾರೆ. ಇವರು ಪಂಜಾಬ್ ಮತ್ತು ಹರಿಯಾಣದಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ನಿನ್ನೆ ಮರಳಿ ತಮ್ಮ ರಾಜ್ಯಕ್ಕೆ ತೆರಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಬರಾಬಂಕಿ ಘಟನೆ ಬಗ್ಗೆ ಎಡಿಜಿ ಸತ್ಯ ನಾರಾಯನ್ ಸಾಬಟ್ ವಿವರವಾಗಿ ಹೇಳಿದರು. ಬಸ್ನ ಚಕ್ರಕ್ಕೆ ಅಳವಡಿಸಿರುವ ಕಬ್ಬಿಣದ ರಾಡ್ (ಆಕ್ಸಲ್ ಶಾಫ್ಟ್) ಮುರಿದಿದೆ ಎಂದು ಬಸ್ ಚಾಲಕ ಹೇಳಿದ ಕೂಡಲೇ ಅನೇಕ ಪ್ರಯಾಣಿಕರು ಬಸ್ಸಿನಿಂದ ಹೊರಬಂದರು. ಇದೇ ವೇಳೆ, ಹಿಂದಿನಿಂದ ಅತೀ ವೇಗವಾಗಿ ಬರುತ್ತಿದ್ದ ಟ್ರಕ್ ಡಬಲ್ ಟ್ರಕ್ ಬಸ್ಸಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಅನೇಕ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:Gold Price Today: ಆಭರಣ ಪ್ರಿಯರಿಗೆ ಸಿಹಿಸುದ್ದಿ; ಮತ್ತೆ ಇಳಿಕೆಯಾದ ಚಿನ್ನದ ಬೆಲೆ
ಆಸ್ಪತ್ರೆಗೆ ಸಾಗಿರುವಾಗ ಇಬ್ಬರು ಪ್ರಯಾಣಿಕರು ಕೊನೆಯುಸಿರೆಳೆದರು. ಮತ್ತೊಬ್ಬ ಪ್ರಯಾಣಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಾಗ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನ ಅಡಿಯಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಹೊರತೆಗೆಯಲಾಗುತ್ತಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸದ್ಯದ ಮಾಹಿತಿ ಪ್ರಕಾರ 18 ಮಂದಿ ದುರಂತದಲ್ಲಿ ಮೃತಪಟ್ಟಿದ್ದಾರೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ