ಎನ್​ಕೌಂಟರ್​​ ಬಳಿಕ ಐವರು ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು

ವಿಶೇಷ ಸೆಲ್ ಪೊಲೀಸರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಳಿಕ ಪೊಲೀಸರು ಉಗ್ರರನ್ನು ಬಂಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಬಂಧಿತ ಉಗ್ರರಿಂದ ಮದ್ದು-ಗುಂಡು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ನವದೆಹಲಿ(ಡಿ.07): ಇಂದು ಬೆಳಗ್ಗೆ ದೆಹಲಿ ಪೊಲೀಸರು 5 ಮಂದಿ ಭಯೋತ್ಪಾದಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೆಹಲಿಯ ಶಕರ್​ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ದೆಹಲಿ ಪೊಲೀಸರ ವಿಶೇಷ ಸೆಲ್​​ ಈ ಕಾರ್ಯಾಚರಣೆ ನಡೆಸಿದೆ. ವರದಿಗಳ ಪ್ರಕಾರ, ಪೊಲೀಸರು ಬಂಧಿತ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಐವರು ಭಯೋತ್ಪಾದಕರಲ್ಲಿ ಮೂವರು ಜಮ್ಮು ಮತ್ತು ಕಾಶ್ಮೀರದವರಾಗಿದ್ದು, ಇನ್ನಿಬ್ಬರು ಪಂಜಾಬ್​ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ.

  Bharat Bandh: ಭಾರತ್ ಬಂದ್ ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

  ವಿಶೇಷ ಸೆಲ್ ಪೊಲೀಸರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಳಿಕ ಪೊಲೀಸರು ಉಗ್ರರನ್ನು ಬಂಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಬಂಧಿತ ಉಗ್ರರಿಂದ ಮದ್ದು-ಗುಂಡು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

  ರಾಷ್ಟ್ರ ರಾಜಧಾನಿಯ ಖಾನ್ ಮಾರ್ಕೆಟ್​ ಪ್ರದೇಶದಲ್ಲಿ ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಸುಮಾರು 20 ದಿನಗಳ ಬಳಿಕ ಈ ಘಟನೆ ಸಂಭವಿಸಿದೆ. ಪೊಲೀಸರು ಎರಡು ಪ್ಯಾರಾ-ಆಟೋಮೆಟಿಕ್ ಪಿಸ್ತೂಲ್​ಗಳನ್ನು ವಶಪಡಿಸಿಕೊಂಡಿದ್ದು, 10 ಜೀವಂತ ಕಾಟ್ರಿಜ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.
  Published by:Latha CG
  First published: