ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಮಕರ ಜ್ಯೋತಿ ದರ್ಶನ: ಭದ್ರತಾ ಕ್ರಮವಾಗಿ 10 ಸಾವಿರ ಪೊಲೀಸರ ನಿಯೋಜನೆ


Updated:January 14, 2018, 12:36 PM IST
ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಮಕರ ಜ್ಯೋತಿ ದರ್ಶನ: ಭದ್ರತಾ ಕ್ರಮವಾಗಿ 10 ಸಾವಿರ ಪೊಲೀಸರ ನಿಯೋಜನೆ

Updated: January 14, 2018, 12:36 PM IST
-ನ್ಯೂಸ್ 18 ಕನ್ನಡ

ತಿರುವನಂತಪುರಂ(ಜ.14): ಕೇರಳದ ಸುಪ್ರಸಿದ್ದ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಇಂದು ಮಕರ ಜ್ಯೋತಿ ದರ್ಶನವಾಗಲಿದೆ. ಸಂಜೆ 6.30ಕ್ಕೆ ಮಕರ ಜ್ಯೋತಿ ಕಾಣಲಿದ್ದು, ಈಗಾಗಲೇ ಸಾವಿರಾರು ಅಯಪ್ಪ ಸ್ವಾಮಿ ಮಾಲೆ ಧರಿಸಿರುವ ಭಕ್ತರು ಜ್ಯೋತಿ ದರ್ಶನಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.

ಮಕರ ಜ್ಯೋತಿ ದರ್ಶನ ಹಿನ್ನಲೆಯಲ್ಲಿ ಅಯ್ಯಪ್ಪಸ್ವಾಮಿಗೆ ಇವತ್ತು ಚಿನ್ನದ ಒಡವೆಗಳ ಅಲಂಕಾರವೂ ನಡೆಯಲಿದೆ. ಆದರೆ ನಾಲ್ಕು ದಿನಗಳ ಹಿಂದಷ್ಟೇ ಇಲ್ಲಿ ನಾಲ್ಕು ಸಜೀವ ಗುಂಡುಗಳು ಪತ್ತೆಯಾಗಿದ್ದವು. ಇದು ಜನರಲ್ಲಿರುವ ಆತಂಕಕ್ಕೆ ಕಾರಣವಾಗಿತ್ತು. ಈ ಕಾರಣದಿಂದಾಗಿ ಕೇರಳ ಸರ್ಕಾರ ಇಲ್ಲಿ ಬಿಗಿ ಭದ್ರತೆ ಕೈಗೊಂಡಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಿರಲು ಮುಂಜಾಗೃತಾ ಕ್ರಮವಾಗಿಗಿ 10 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿ ಹದ್ದಿನ ಕಣ್ಣಿಟ್ಟಿದೆ.
First published:January 14, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ