HOME » NEWS » National-international » MALLIKARJUNA KHARGE CONGRESS CANDIDATE TO RAJYA SABHA ELECTION FROM KARNATAKA RH

ರಾಜ್ಯಸಭೆ ಚುನಾವಣೆ; ಕಾಂಗ್ರೆಸ್​ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಜೆಡಿಎಸ್‌ನ ಕುಪೇಂದ್ರ ರೆಡ್ಡಿ,ಕಾಂಗ್ರೆಸ್​‌ನ ಬಿ.ಕೆ. ಹರಿಪ್ರಸಾದ್, ಪ್ರೊ.ರಾಜೀವ್‌ಗೌಡ, ಬಿಜೆಪಿಯ ಪ್ರಭಾಕರ್ ಅವರ ರಾಜ್ಯಸಭೆ ಅವಧಿ ಜೂನ್ 25ಕ್ಕೆ ಕೊನೆಗೊಳ್ಳಲಿದೆ. ಈ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.

news18-kannada
Updated:June 5, 2020, 2:40 PM IST
ರಾಜ್ಯಸಭೆ ಚುನಾವಣೆ; ಕಾಂಗ್ರೆಸ್​ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ
ಮಲ್ಲಿಕಾರ್ಜುನ ಖರ್ಗೆ
  • Share this:
ಬೆಂಗಳೂರು: ರಾಜ್ಯದಿಂದ ಇದೇ ತಿಂಗಳು ಖಾಲಿಯಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.

ರಾಜ್ಯಸಭೆ ಸ್ಥಾನಕ್ಕಾಗಿ ಕಾಂಗ್ರೆಸ್​ನಲ್ಲಿ ಹಲವು ಮುಖಂಡರ ನಡುವೆ ಪೈಪೋಟಿ ನಡೆದಿತ್ತು. ಇದೀಗ ಪಕ್ಷದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ.

ಖರ್ಗೆ ಅವರು ಅಭ್ಯರ್ಥಿಯಾಗಲು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಒಪ್ಪಿ, ಅನುಮತಿ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೆಡಿಎಸ್‌ನ ಕುಪೇಂದ್ರ ರೆಡ್ಡಿ,ಕಾಂಗ್ರೆಸ್​‌ನ ಬಿ.ಕೆ. ಹರಿಪ್ರಸಾದ್, ಪ್ರೊ.ರಾಜೀವ್‌ಗೌಡ, ಬಿಜೆಪಿಯ ಪ್ರಭಾಕರ್ ಅವರ ರಾಜ್ಯಸಭೆ ಅವಧಿ ಜೂನ್ 25ಕ್ಕೆ ಕೊನೆಗೊಳ್ಳಲಿದೆ. ಈ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.

ಕಾಂಗ್ರೆಸ್​ನಿಂದ ತುಮಕೂರಿನ ಮುದ್ದಹನುಮೇಗೌಡ ಅವರು ಪ್ರಬಲ ಆಕಾಂಕ್ಷಿಯಾಗಿದ್ದರು. ಖರ್ಗೆ ಹೆಸರನ್ನು ಹೈಕಮಾಂಡ್​ಗೆ ಸಿದ್ದರಾಮಯ್ಯ ಅವರು ಕೂಡ ಶಿಫಾರಸ್ಸು ಮಾಡಿದ್ದರು.

ಇದನ್ನು ಓದಿ: ಜೂ.19ಕ್ಕೆ ರಾಜ್ಯಸಭೆ ಚುನಾವಣೆ; ಖರ್ಗೆ ಪರ ಸಿದ್ದರಾಮಯ್ಯ ಬ್ಯಾಟಿಂಗ್, ಮೇಲ್ಮನೆಗೆ ಹೋಗಲು ಒಪ್ಪದ ದೇವೇಗೌಡರು
Youtube Video
First published: June 5, 2020, 2:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories