HOME » NEWS » National-international » MAMATA BANERJEE ON WHEELCHAIR LEADS 8 KM PADYATRA IN NANDIGRAMA MAK

West Bengal Assembly Election2021: ಕಾವೇರುತ್ತಿದೆ ನಂದಿಗ್ರಾಮದ ಅಖಾಡ: ವೀಲ್​ಚೇರ್​ನಲ್ಲೇ ಮಮತಾ ಬ್ಯಾನರ್ಜಿ​ ಪ್ರಚಾರ

ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್ ಇಂದು ನಂದಿಗ್ರಾಮದಲ್ಲಿ 8 ಕಿ.ಮೀ ರೋಡ್ ಶೋ ನಡೆಸಿದೆ. ದೇಶದಲ್ಲಿ ಹೋಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಟಿಎಂಸಿ ಸಾರ್ವಜನಿಕ ಸಭೆ ಆಯೋಜಿಸಿದೆ. ಗುರುವಾರ (ಏಪ್ರಿಲ್ 1) ನಂದಿಗ್ರಾಮದಲ್ಲಿ ಮತದಾನ ನಡೆಯಲಿದೆ.

news18-kannada
Updated:March 29, 2021, 3:04 PM IST
West Bengal Assembly Election2021: ಕಾವೇರುತ್ತಿದೆ ನಂದಿಗ್ರಾಮದ ಅಖಾಡ: ವೀಲ್​ಚೇರ್​ನಲ್ಲೇ ಮಮತಾ ಬ್ಯಾನರ್ಜಿ​ ಪ್ರಚಾರ
ವೀಲ್​ಚೇರ್​ನಲ್ಲೇ ಕುಳಿತು ಪ್ರಚಾರ ನಡೆಸುತ್ತಿರುವ ಮಮತಾ ಬ್ಯಾನರ್ಜಿ.
  • Share this:
ಕೋಲ್ಕತ್ತಾ (ಮಾರ್ಚ್​ 29); ಚುನಾವಣಾ ಆಯೋಗ ಪಶ್ಚಿಮ ಬಂಗಾಳಕ್ಕೆ 8 ಹಂತದಲ್ಲಿ ಚುನಾವಣೆ ಘೋಷಿಸಿದ್ದು, ಈಗಾಗಲೇ ಮೊದಲ ಹಂತದ ಚುನಾವಣೆ ಮುಕ್ತಾಯವಾಗಿದೆ. ಅಲ್ಲದೆ, ಪಶ್ಚಿಮ ಬಂಗಾಳದಲ್ಲಿ ಇದೀಗ ಆಡಿಯೋ ಲೀಕ್​ ಪ್ರಕರಣ ದೊಡ್ಡ ಮಟ್ಟದ ಸದ್ದು ಮಾಡುತ್ತಿದ್ದು, ಚುನಾವಣಾ ಆಯೋಗವೇ ಬಿಜೆಪಿ ಜೊತೆಗೆ ಶಾಮೀಲಾಗಿದೆಯೇ? ಎಂಬ ಪ್ರಶ್ನೆಯೂ ಹುಟ್ಟಿದೆ. ಹೀಗಾಗಿ ಎರಡನೇ ಹಂತದ ಚುನಾವಣಾ ಪ್ರಚಾರ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಬಿಜೆಪಿ-ಟಿಎಂಸಿ ಸೇರಿದಂತೆ ಎಲ್ಲಾ ಪಕ್ಷಗಳೂ ಚುನಾವಣಾ ಪ್ರಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಭಾನುವಾರ ಅಮಿತ್​ ಶಾ ಪಶ್ಚಿಮ ಬಂಗಾಳದಲ್ಲಿ ರ್ಯಾಲಿ ನಡೆಸುವ ಮೂಲಕ ಗಮನ ಸೆಳೆದಿದ್ದರು. ಆದರೆ, ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ದಾಳಿಗೊಳಗಾಗಿದ್ದಸಿಎಂ ಮಮತಾ ಬ್ಯಾನರ್ಜಿ ಇಂದು ವೀಲ್​ಚೇರ್​ನಲ್ಲಿಯೇ ಕುಳಿತು ನಂದಿಗ್ರಾಮದಲ್ಲಿ 8 ಕಿಮೀ ಚುನಾವಣಾ ರ್ಯಾಲಿ ನಡೆಸುವ ಮೂಲಕ ತಮ್ಮ ಎದುರಾಳಿ ಸುವೆಂದು ಅಧಿಕಾರಿ ಮತ್ತು ಬಿಜೆಪಿ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ.

ತೀವ್ರ ಕುತೂಹಲ ಕೆರಳಿಸಿರುವ ನಂದಿಗ್ರಾಮದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇದೆ. ಈ ತಿಂಗಳ ಆರಂಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವಾಗ ಹಲ್ಲೆಗೊಳಗಾಗಿದ್ದರು. ಈ ಸುದ್ದಿ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಪರಿಣಾಮ ಚುನಾವಣಾ ಆಯೋಗ ಸಹ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿತ್ತು. ಇದೀಗ ನಂದಿಗ್ರಾಮಕ್ಕೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಇದೇ ಕಾರಣಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ ಪ್ರಸ್ತುತ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ ಎನ್ನಲಾಗುತ್ತಿದೆ.

ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್ ಇಂದು ನಂದಿಗ್ರಾಮದಲ್ಲಿ 8 ಕಿ.ಮೀ ರೋಡ್ ಶೋ ನಡೆಸಿದೆ. ದೇಶದಲ್ಲಿ ಹೋಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಟಿಎಂಸಿ ಸಾರ್ವಜನಿಕ ಸಭೆ ಆಯೋಜಿಸಿದೆ. ಗುರುವಾರ (ಏಪ್ರಿಲ್ 1) ನಂದಿಗ್ರಾಮದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Sharad Pawar – ಶರದ್ ಪವಾರ್​ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು; ಶಸ್ತ್ರಚಿಕಿತ್ಸೆಗೆ ತಯಾರಿ

ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿರುವ ಸುವೇಂದು ಅಧಿಕಾರಿ ನಡುವೆ ತೀವ್ರ ಪೈಪೋಟಿ ಇದೆ.
ರಾಜ್ಯದಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯು ಆಡಳಿತ ಪಕ್ಷ ಟಿಎಂಸಿ ವಿರುದ್ಧ ಹಲವು ದೋಷಾರೋಪಣೆಗಳನ್ನು ಮಾಡಿದೆ. ನಂದಿಗ್ರಾಮದಲ್ಲಿ ಹಲ್ಲೆ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯ ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದ ಪೊಲೀಸ್ ಅಧಿಕಾರಿಯನ್ನು ಚುನಾವಣಾ ಆಯೋಗ ಅಮಾನತುಗೊಳಿಸಿತ್ತು.
Youtube Video
ಮೊದಲ ಹಂತದ ಮತದಾನ ಮುಗಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ 30 ರಲ್ಲಿ 26 ಸ್ಥಾನಗಳನ್ನು ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ. ಜೊತೆಗೆ 200 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿ ಬಹುಮತ ಪಡೆಯುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳ ಎಂಟು ಹಂತಗಳಲ್ಲಿ ಮಾರ್ಚ್ 27 ರಿಂದ 8 ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಎರಡನೇ ಹಂತದ ಮತದಾನ ಏಪ್ರಿಲ್ 1 ರಂದು ನಡೆಯಲಿದೆ. ಮೇ 2 ರಂದು ಫಲಿತಾಂಶ ಹೊರಬೀಳಲಿದೆ.
Published by: MAshok Kumar
First published: March 29, 2021, 3:04 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories