ಮಾದರಿ ನೀತಿ ಸಂಹಿತೆಯನ್ನು ಮೋದಿ ಸಂಹಿತೆ ಎಂದು ಮರುಣಾಮಕರಣಗೊಳಿಸಿ; ಚುನಾವಣಾ ಆಯೋಗಕ್ಕೆ ಮಮತಾ ಚಾಟಿ

ಬಿಜೆಪಿ ತನ್ನ ಎಲ್ಲ ಶಕ್ತಿಯನ್ನು ಬಳಸಿಕೊಳ್ಳಬಹುದು. ಆದರೆ ಈ ಜಗತ್ತಿನಲ್ಲಿ ಯಾವುದೇ ಶಕ್ತಿಯೂ ನಾನು ನನ್ನ ಜನರೊಂದಿಗೆ ಇರುವುದನ್ನು ಮತ್ತು ಅವರ ನೋವನ್ನು ಹಂಚಿಕೊಳ್ಳುವುದನ್ನು ತಡೆಯಲಾಗದು ಎಂದು ಮಮತಾ ಬ್ಯಾನರ್ಜಿ ಆಕ್ರೋಶ ಹೊರಹಾಕಿದ್ದಾರೆ.

ಮಮತಾ ಬ್ಯಾನರ್ಜಿ.

ಮಮತಾ ಬ್ಯಾನರ್ಜಿ.

 • Share this:
  ಕೋಲ್ಕತ್ತಾ (ಏಪ್ರಿಲ್ 11); ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಶನಿವಾರ ನಾಲ್ಕನೇ ಹಂತದ ಮತದಾನದಲ್ಲಿ ನಡೆದ ಹಿಂಸಾಚಾರದ ಬಳಿಕ ಕೂಚ್ ಬೆಹಾರ್‌ಗೆ ರಾಜಕೀಯ ಮುಖಂಡರ ಭೇಟಿಯನ್ನು ಚುನಾವಣಾ ಆಯೋಗ ನಿರ್ಬಂಧಿಸಿದೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, "ಚುನಾವಣಾ ಆಯೋಗ ಮಾದಿರಿ ನೀತಿ ಸಂಹಿತೆಯನ್ನು ಮೋದಿ ನೀತಿ ಸಂಹಿತೆ ಎಂದು ಬದಲಾಯಿಸಲಿ" ಎಂದು ಕಿಡಿಕಾರಿದ್ದಾರೆ. ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್‌ನ ಸಿತಾಲ್ಕುಚಿ ಕ್ಷೇತ್ರದ ಮತಗಟ್ಟೆ ಬಳಿ ನಡೆದ ಗಲಭೆಯಲ್ಲಿ ನಾಲ್ವರು ಮೃತಪಟ್ಟಿದ್ದರು. ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಟಿಎಂಸಿ ಆರೋಪಿಸಿತ್ತು.

  "ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆ (ಎಂಸಿಸಿ)ಯನ್ನು ಮೋದಿ ನೀತಿ ಸಂಹಿತೆ ಎಂದು ಮರುನಾಮಕರಣ ಮಾಡಬೇಕು" ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಟ್ವೀಟ್ ಮಾಡಿದ್ದಾರೆ.  ಮುಂದುವರಿದು, "ಬಿಜೆಪಿ ತನ್ನ ಎಲ್ಲ ಶಕ್ತಿಯನ್ನು ಬಳಸಿಕೊಳ್ಳಬಹುದು. ಆದರೆ ಈ ಜಗತ್ತಿನಲ್ಲಿ ಯಾವುದೇ ಶಕ್ತಿಯೂ ನಾನು ನನ್ನ ಜನರೊಂದಿಗೆ ಇರುವುದನ್ನು ಮತ್ತು ಅವರ ನೋವನ್ನು ಹಂಚಿಕೊಳ್ಳುವುದನ್ನು ತಡೆಯಲಾಗದು" ಎಂದಿದ್ದಾರೆ.

  "ಕೂಚ್ ಬೆಹಾರ್‌ನಲ್ಲಿರುವ ನನ್ನ ಸಹೋದರ ಸಹೋದರಿಯರನ್ನು 3 ದಿನಗಳವರೆಗೆ ಭೇಟಿ ಮಾಡುವುದನ್ನು ಅವರು ನಿರ್ಬಂಧಿಸಬಹುದು ಆದರೆ 4 ನೇ ದಿನ ನಾನು ಅಲ್ಲಿರುತ್ತೇನೆ" ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

  ಕೂಚ್ ಬೆಹಾರ್‌ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಕಾರಣ 72 ಗಂಟೆಗಳ ಕಾಲ ಯಾವುದೇ ಪಕ್ಷದ ರಾಜಕಾರಣಿಗಳು ಜಿಲ್ಲೆಗೆ ಪ್ರವೇಶಿಸದಂತೆ ಚುನಾವಣಾ ಆಯೋಗವು ನಿರ್ಬಂಧಿಸಿದೆ.

  ಇದನ್ನೂ ಓದಿ: West Bengal Election 2021: ಟಿಎಂಸಿ ಸಮೀಕ್ಷೆ ಪ್ರಕಾರವೂ ಬಿಜೆಪಿಗೇ ಗೆಲುವು; ಬಿರುಗಾಳಿ ಎಬ್ಬಿಸಿದ ಪ್ರಶಾಂತ್ ಕಿಶೋರ್ ಆಡಿಯೋ!

  ಕೂಚ್ ಬೆಹಾರ್‌ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗವು, ಮತದಾನ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಕೇಂದ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳಲು ಉದ್ವಿಗ್ನ ಗುಂಪು ಪ್ರಯತ್ನಿಸಿದ್ದರಿಂದ ಗುಂಡು ಹಾರಿಸಲಾಯಿತು. ಮತದಾನ ಕೇಂದ್ರದಲ್ಲಿ ಸಾಲುಗಟ್ಟಿ ನಿಂತಿದ್ದ ಮತದಾರರ ಪ್ರಾಣವನ್ನು ಉಳಿಸಲು ಸಿಐಎಸ್ಎಫ್ ಸಿಬ್ಬಂದಿ ಗುಂಡು ಹಾರಿಸುವುದು ಸಂಪೂರ್ಣವಾಗಿ ಅಗತ್ಯವಾಗಿತ್ತು ಸಮೀಕ್ಷಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

  ಮಾರ್ಚ್ 28 ಮತ್ತು ಏಪ್ರಿಲ್ 7 ರಂದು ನಡೆದ ಚುನಾವಣಾ ಪ್ರಚಾರ ರ್‍ಯಾಲಿಗಳಲ್ಲಿ ಕೇಂದ್ರದ ಪಡೆಗಳ ವಿರುದ್ದ ಮಮತಾ ಬ್ಯಾನರ್ಜಿ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಏಪ್ರಿಲ್ 10 ರೊಳಗೆ ಉತ್ತರಿಸುವಂತೆ ಚುನಾವಣಾ ಆಯೋಗ ಬ್ಯಾನರ್ಜಿಗೆ ನೋಟಿಸ್ ನೀಡಿದೆ. ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ.8 ರಂದು ಫಲಿತಾಂಶ ಹೊರಬೀಳಲಿದೆ.
  Published by:MAshok Kumar
  First published: