PM Narendra Modi ಜೊತೆಗಿನ ಇಂದಿನ ಸಭೆಯಲ್ಲಿ ಭಾಗವಹಿಸದಿರಲು Mamata Banerjee ನಿರ್ಧಾರ

Mamata to Skip PMs Conference: ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸಲು ಆಗಸ್ಟ್‌ನಲ್ಲಿ ಒಂದು ವಾರದ ಕಾರ್ಯಕ್ರಮವನ್ನು ಸಹ ನಡೆಸಲಾಗುತ್ತದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎಲ್ಲ ಮಹತ್ವದ ಸ್ಥಳಗಳನ್ನು ಮೀಸಲಿಡುವ ಮತ್ತು ಪ್ರವಾಸೋದ್ಯಮ ಸರ್ಕ್ಯೂಟ್ ನಿರ್ಮಿಸುವ ಯೋಜನೆಗೆ ಚಾಲನೆ ನೀಡುವಂತೆ ಸಿಎಂ ಅವರು ರಾಜ್ಯ ಅಧಿಕಾರಿಗಳಿಗೆ ಸೂಚಿಸಿದರು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
75 ನೇ ಸ್ವಾತಂತ್ರ್ಯದ (Independence Day) ಅಂಗವಾಗಿ ಮುಂದಿನ ವರ್ಷ ಆಗಸ್ಟ್ 15 ರಂದು ದಾರ್ಶನಿಕ ಮತ್ತು ಕ್ರಾಂತಿಕಾರಿ ನಾಯಕ ರಿಷಿ ಅರಬಿಂದೋ (Rishi Aurobindo) ಅವರ ಜನ್ಮದಿನವನ್ನು (Birthday)  ಯಾವ ರಿತಿ ಆಚರಣೆ ಮಾಡಬೇಕು ಎನ್ನುವ ಕುರಿತು ಚರ್ಚಿಸಲು ಡಿಸೆಂಬರ್ 24 ರಂದು ಕೇಂದ್ರವು ಕರೆದಿರುವ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Bengal CM Mamata Banerjee) ಗುರುವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೊಂದಿಗಿನ ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಮಾತನಾಡಲು ಬ್ಯಾನರ್ಜಿಗೆ ಅವಕಾಶ ನೀಡದ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಸರ್ಕಾರಿ ಅಧಿಕಾರಿಗಳು, ಶಿಕ್ಷಣ ತಜ್ಞರು ಮತ್ತು ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ, ಸ್ವಾತಂತ್ರ್ಯ ದಿನಾಚರಣೆಯ ಕುರಿತು ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮಾತನಾಡಲು ಅವಕಾಶ ನೀಡಿದರೆ ಅವರಿಗೆ ಸಲಹೆ ನೀಡುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೇ, ಎಲ್ಲದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ. ನಾವು ಈಗಾಗಲೇ ರಿಷಿ ಅರಬಿಂದೋ ಕುರಿತು ಹಲವಾರು ಕಾರ್ಯಕ್ರಮಗಳನ್ನು ಪಟ್ಟಿ ಮಾಡಿರುವುದರಿಂದ ನಾಳೆಯ ಸಭೆಗೆ ಹಾಜರಾಗಲು ನನಗೆ ಸಾಧ್ಯವಾಗುವುದಿಲ್ಲ. ನಾನು ಸಭೆಗೆ ಹಾಜರಾಗುವುದಿಲ್ಲ ಎಂದು ತಿಳಿಸಲು ದಯವಿಟ್ಟು ಪತ್ರ ಬರೆಯಿರಿ, ಎಂದು ಅವರ ಮುಖ್ಯ ಕಾರ್ಯದರ್ಶಿ ಎಚ್‌ಕೆ ದ್ವಿವೇದಿಗೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಸಭೆಯಲ್ಲಿ ಉಪಸ್ಥಿತರಿದ್ದ ಖ್ಯಾತ ಚಿತ್ರಕಲಾವಿದ ಜೋಗೆನ್ ಚೌಧರಿ ಅವರು "ಮುಖ್ಯಮಂತ್ರಿಯನ್ನು ನಡೆಸಿಕೊಂಡಿರುವ ನಡೆಯ ವಿರುದ್ಧ ಪ್ರತಿಭಟಿಸಿದ್ದರು, ಅಲ್ಲದೇ ಇದು ಸ್ವಾತಂತ್ರ್ಯ ಚಳವಳಿಗೆ ಮಹತ್ವದ ಕೊಡುಗೆ ನೀಡಿದ ಬಂಗಾಳಕ್ಕೆ ಅವಮಾನವಾಗಿದೆ ಎಂದು ಆರೋಪ ಮಾಡಿದ್ದರೆ. ಹಾಗೆಯೇ ಕವಿ ಜಾಯ್ ಗೋಸ್ವಾಮಿ ಇದೇ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Omicron ಪ್ರಕರಣಗಳ ಹೆಚ್ಚಳ ಹಿನ್ನೆಲೆ - ಯುಪಿ ಚುನಾವಣೆ ಮುಂದೂಡುವಂತೆ ಪ್ರಧಾನಿ ಹಾಗೂ ಚುನಾವಣಾ ಆಯೋಗಕ್ಕೆ ಅಲಹಾಬಾದ್ ಕೋರ್ಟ್ ಒತ್ತಾಯ

ಹಲವಾರು ಹಂತಗಳಲ್ಲಿ ಇತಿಹಾಸವನ್ನು ತಿರುಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಸಿಎಂ, "ಯುವ ಪೀಳಿಗೆಯು ಸತ್ಯಗಳನ್ನು ತಿಳಿದುಕೊಳ್ಳಬೇಕು, ತಿರುಚಿದ ಸಂಗತಿಗಳಲ್ಲ" ಎಂದು ಹೇಳಿದ್ದಾರೆ. ಯಾವುದೇ ಸಿದ್ಧಾಂತವಾಗಿದ್ದರೂ, ಇತಿಹಾಸವನ್ನು ಅವನ ಅಥವಾ ಅವಳ ಯೋಚನೆಗೆ ತಕ್ಕಂತೆ ಬದಲಾವಣೆಗಳನ್ನು ಮಾಡಲಾಗುವುದಿಲ್ಲ ಎಂದು" ಎಂದು ಬ್ಯಾನರ್ಜಿ ಪರೋಕ್ಷವಾಗಿ ಪ್ರಧಾನಿಗೆ ಟಾಂಗ್ ನೀಡಿದ್ದಾರೆ.

ನಮ್ಮ ರಾಜ್ಯದ ಸ್ವಾತಂತ್ರ್ಯ ಹೋರಾಟದ ಎಲ್ಲಾ ಪ್ರಮುಖ ಘಟನೆಗಳನ್ನು ವಿವರಿಸುವ ಪ್ರತ್ಯೇಕ ಅಧ್ಯಾಯವನ್ನು ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಬೇಕು ಎಂದು ಹೇಳಿದ ಅವರು, ಶಿಕ್ಷಣ ಸಚಿವ ಬ್ರತ್ಯಾ ಬಸು ಅವರಲ್ಲಿ ಈ ವಿಷಯವನ್ನು ಪರಿಶೀಲಿಸುವಂತೆ ಕೇಳಿಕೊಂಡಿದ್ದಾರೆ. ಮುಂದಿನ ತಿಂಗಳು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆ ಮತ್ತು ಮಹಾತ್ಮ ಗಾಂಧಿಯವರ ಪುಣ್ಯತಿಥಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಟಿಎಂಸಿ ಪಕ್ಷದ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.

ರಾಜ್ಯ ಪತ್ರಾಗಾರದಲ್ಲಿ, ಪೊಲೀಸ್ ಕಡತಗಳಲ್ಲಿ ಮತ್ತು ಇತರ ಕಡೆಗಳಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಎಲ್ಲಾ ದಾಖಲೆಗಳು ಮತ್ತು ಮಾಹಿತಿಯನ್ನು ಸಾರ್ವಜನಿಕ ಜ್ಞಾನಕ್ಕಾಗಿ ಡಿಜಿಟಲೀಕರಣಗೊಳಿಸಲಾಗುವುದು ಎಂದು ಅವರು ಹೇಳಿದ್ದು, ಇದು ನೇತಾಜಿ ಕುರಿತ ದಾಖಲೆಗಳನ್ನೂ ಒಳಗೊಂಡಿರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಸೋಂಕು ಪರೀಕ್ಷೆ- ಪತ್ತೆಗೆ ಒತ್ತು, ಲಸಿಕೆಗೆ ವೇಗ ನೀಡುವಂತೆ ಪ್ರಧಾನಿ ಸೂಚನೆ

ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸಲು ಆಗಸ್ಟ್‌ನಲ್ಲಿ ಒಂದು ವಾರದ ಕಾರ್ಯಕ್ರಮವನ್ನು ಸಹ ನಡೆಸಲಾಗುತ್ತದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎಲ್ಲ ಮಹತ್ವದ ಸ್ಥಳಗಳನ್ನು ಮೀಸಲಿಡುವ ಮತ್ತು ಪ್ರವಾಸೋದ್ಯಮ ಸರ್ಕ್ಯೂಟ್ ನಿರ್ಮಿಸುವ ಯೋಜನೆಗೆ ಚಾಲನೆ ನೀಡುವಂತೆ ಸಿಎಂ ಅವರು ರಾಜ್ಯ ಅಧಿಕಾರಿಗಳಿಗೆ ಸೂಚಿಸಿದರು, ನಾವೆಲ್ಲರೂ ಭಾರತದ ಮಹಾನ್ ಪುತ್ರರು ಮತ್ತು ಪುತ್ರಿಯರಿಗೆ ಋಣಿಯಾಗಿರುವುದರಿಂದ ಹಣದ ಸಮಸ್ಯೆಯಾಗುವುದಿಲ್ಲ ಎಂದು ಭರವಸೆ ನೀಡಿದರು.
Published by:Sandhya M
First published: