Mann Ki Baat: ಕೃಷಿ ಕಾಯ್ದೆಯಿಂದ ರೈತರಿಗೆ ಹೊಸ ಆಯ್ಕೆಗಳು ತೆರೆದಿವೆ; ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್​

Mann Ki Baat Highlights: ಕೃಷಿ ಕಾಯ್ದೆಯಿಂದ ಕೃಷಿ ಕ್ಷೇತ್ರ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳ ಅವಕಾಶಗಳು ಹೆಚ್ಚಾಗಲಿವೆ. ರೈತರ ಅಭಿವೃದ್ಧಿ ಮತ್ತು ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡೇ ಈ ಕಾಯ್ದೆ ಜಾರಿಗೊಳಿಸಲಾಗಿದೆ ಎಂದು ಮನ್ ಕಿ ಬಾತ್​ನಲ್ಲಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

ನರೇಂದ್ರ ಮೋದಿ

ನರೇಂದ್ರ ಮೋದಿ

 • Share this:
  ನವದೆಹಲಿ (ನ. 29): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ರೈತರಿಗೆ ಹಲವು ಅವಕಾಶಗಳನ್ನು ತೆರೆದಿಟ್ಟಿದೆ. ಹೊಸ ಕಾಯ್ದೆಯಿಂದ ಕೃಷಿ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ರೈತ ಸಮುದಾಯಕ್ಕೆ ಅವಕಾಶಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಕೇಂದ್ರ ಸರ್ಕಾರದ ಅನೇಕ ಕೃಷಿ ಸಂಬಂಧಿತ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಬಗ್ಗೆ ಇಂದಿನ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

  ಕೃಷಿ ಕಾಯ್ದೆಯ ಮೂಲಕ ಕೃಷಿ ಕ್ಷೇತ್ರ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳ ಅವಕಾಶಗಳು ಹೆಚ್ಚಾಗಲಿವೆ. ಇದರಿಂದ ರೈತರಿಗೆ ಹೊಸ ಆಯ್ಕೆಗಳ ಬಾಗಿಲುಗಳು ತೆರೆಯಲಿವೆ. ರೈತರ ಅಭಿವೃದ್ಧಿ ಮತ್ತು ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡೇ ಈ ಕಾಯ್ದೆ ಜಾರಿಗೊಳಿಸಲಾಗಿದೆ ಎಂದು ಮೋದಿ ತಿಳಿಸಿದ್ದಾರೆ.  ಮನ್ ಕಿ ಬಾತ್​ನಲ್ಲಿ ಭಾರತದ ಧಾರ್ಮಿಕ ಹಿನ್ನೆಲೆಯ ಬಗ್ಗೆಯೂ ಪ್ರಸ್ತಾಪಿಸಿರುವ ಪ್ರಧಾನಿ ಮೋದಿ, ಭಾರತದ ಸಂಸ್ಕೃತಿ ಹಾಗೂ ಧರ್ಮಗ್ರಂಥಗಳು ಜಗತ್ತನ್ನೇ ಆಕರ್ಷಿಸುತ್ತಿವೆ. ನಮ್ಮ ಸಂಸ್ಕೃತಿಯ ಬಗ್ಗೆ ಅಧ್ಯಯನ ಮಾಡಲು ಅನೇಕ ವಿದೇಶಿಗರು ನಮ್ಮ ದೇಶಕ್ಕೆ ಬರುತ್ತಲೇ ಇದ್ದಾರೆ. ನ್ಯೂಜಿಲೆಂಡ್​ನ ನೂತನ ಸಂಸದರು ಸಂಸ್ಕೃತ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ನಾನು ಅಭಿನಂದನೆಗಳನ್ನು ತಿಳಿಸುತ್ತಿದ್ದೇನೆ. ಹಲವು ದೇಶಗಳು ನಮ್ಮ ಸಂಸ್ಕೃತಿಯನ್ನು ಅಧ್ಯಯನ ಮಾಡಿ, ಅಳವಡಿಸಿಕೊಳ್ಳಲು ಮುಂದಾಗಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ.  ಸುಮಾರು 1 ಶತಮಾನದ ಹಿಂದೆ ಭಾರತದಿಂದ ಕಳುವಾಗಿ ಕೆನಡಾಗೆ ಹೋಗಿದ್ದ ಅನ್ನಪೂರ್ಣ ದೇವಿ ವಿಗ್ರಹವನ್ನು ಭಾರತಕ್ಕೆ ವಾಪಾಸ್ ತರಲಾಗುತ್ತಿದೆ. ಈ ವಿಗ್ರಹವನ್ನು ವಾರಾಣಸಿಯ ದೇವಾಲಯದಿಂದ ಕದಿಯಲಾಗಿತ್ತು ಎಂದು ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ.
  Published by:Sushma Chakre
  First published: