KS Eshwarappa ರಾಜೀನಾಮೆಗೆ ಒತ್ತಾಯಿಸಿ Amit Shah ಮನೆಗೆ ಕಾಂಗ್ರೆಸ್​ ಮುತ್ತಿಗೆ ಯತ್ನ

ನವದೆಹಲಿಯಲ್ಲಿ ಅಮಿತ್​ ಶಾ (Amit Shah) ನಿವಾಸದ ಎದುರು ಯುವ ಕಾಂಗ್ರೆಸ್​ ಪ್ರತಿಭಟನೆ ನಡೆಸಿದ್ದು, ಕೇಂದ್ರ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕುವ ಯತ್ನ ನಡೆಸಿದರು.

ಕಾಂಗ್ರೆಸ್​ ಪ್ರತಿಭಟನೆ

ಕಾಂಗ್ರೆಸ್​ ಪ್ರತಿಭಟನೆ

 • Share this:
  ಸಂತೋಷ್​ ಸಾವಿನ ಪ್ರಕರಣ ಇದೀಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ (KS Eshwarapp) ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಕಾಂಗ್ರೆಸ್ (Congress) ಆಗ್ರಹಿಸಿದೆ. ಸಂತೋಷ್​ ಆತ್ಮಹತ್ಯೆ ಮಾಡಿಕೊಂಡು 24 ಗಂಟೆ ಕಳೆದರೂ ಸಚಿವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ಆಕ್ರೋಶ ವ್ಯಕ್ತಪಡಿಸಿದೆ. ಇನ್ನು ಸಚಿವ ಈಶ್ವರಪ್ಪ ಅವರಿಂದ ಕೂಡಲೇ ರಾಜೀನಾಮೆ ಪಡೆಯಬೇಕು ಇಲ್ಲ ಸಚಿವ ಸ್ಥಾನದಿಂದ ಅವರನ್ನು ವಜಾ ಮಾಡಿ ಬಂಧಿಸಬೇಕು ಎಂದು ಆಗ್ರಹಿಸಿ ಇಂದು ನವದೆಹಲಿಯಲ್ಲಿ ಅಮಿತ್​ ಶಾ (Amit Shah) ನಿವಾಸದ ಎದುರು ಯುವ ಕಾಂಗ್ರೆಸ್​ ಪ್ರತಿಭಟನೆ ನಡೆಸಿದ್ದು, ಕೇಂದ್ರ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕುವ ಯತ್ನ ನಡೆಸಿದರು.

  ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್​ ಬಿವಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಕಾರ್ಯಕರ್ತನೇ ಶೇ 40 ರಷ್ಟು ಕಮಿಷನ್​ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ, ಪಕ್ಷ ಇದುವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ತಮ್ಮದು ಭ್ರಷ್ಟಾಚಾರ ರಹಿತ ಸರ್ಕಾರ ಎನ್ನುತ್ತಾರೆ. ಇದೀಗ ಸಚಿವರ ಮೇಲೆ 40 ಪರ್ಸೆಂಟ್​​ ಕಮಿಷನ್​ ಆರೋಪ ಕೇಳಿ ಬಂದಿದೆ. ಸಚಿವರನ್ನು ಈ ಕೂಡಲೇ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.  ಇನ್ನು ಕಾಂಗ್ರೆಸ್​ ನಾಯಕರ ಪ್ರತಿಭಟನೆ ತೀವ್ರಗೊಂಡ ಹಿನ್ನಲೆ ಪೊಲೀಸರು ಕೈ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಇನ್ನು ಗೃಹ ಸಚಿವ ಅಮಿತ್​ ಶಾ ಮನೆ ಮುಂದೆ ಮಾತ್ರವಲ್ಲದೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಎಲ್​ ಸಂತೋಷ್​ ಮನೆ ಮುಂದೆ ಕೂಡ ಕಾಂಗ್ರೆಸ್​​ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

  ಇದನ್ನು ಓದಿ: KS Eshwarappa ಬಂಧನಕ್ಕೆ ಆಗ್ರಹಿಸಿ ಸಿಎಂ ಕಚೇರಿಗೆ ಮುತ್ತಿಗೆ; AAP ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

  ಪ್ರಧಾನಿಗಳೇ ಉತ್ತರಿಸಬೇಕು
  ಬಿಜೆಪಿ ಕಾರ್ಯಕರ್ತನೇ ಸಚಿವರ ಮೇಲೆ 40 ಪರ್ಸೆಂಟ್​ ಕಮಿಷನ್​ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡತ್​ನೋಟ್​ನಲ್ಲಿ ನ್ಯಾಯಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಇದುವರೆಗೂ ಪ್ರಧಾನಿ ಮತ್ತು ಮುಖ್ಯಮಂತ್ರಿಗಳಿಂದ ಯಾವುದೇ ಉತ್ತರ ಸಿಕ್ಕಿಲ್ಲ. ಪ್ರಧಾನಿ ಮತ್ತು ಮುಖ್ಯಮಂತ್ರಿಗಳು ಇದರಲ್ಲಿ ಭಾಗಿದಾರರು ಎಂದು ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ನಿನ್ನೆ ಟ್ವೀಟ್​ ಮೂಲಕ ತಿಳಿಸಿದ್ದರು

  ರಾಜ್ಯಪಾಲರಿಗೆ ಕಾಂಗ್ರೆಸ್​ ಮನವಿ

  ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಕಾಂಗ್ರೆಸ್ ನಿಯೋಗ ಕೆ ಎಸ್ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಮನವಿ ಸಲ್ಲಿಸಿದೆ.

  ಇದನ್ನು ಓದಿ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ; KS Eshwarappa

  ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾವು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯಕ್ಕೆ ಇದೊಂದು ಕಪ್ಪು ಚುಕ್ಕೆ. ಗುತ್ತಿಗೆದಾರರು ಸಚಿವರ ಮೇಲೆ ಧ್ವನಿಯನ್ನು ಎತ್ತಿದ್ದರು. ಸಂತೋಷ್ ಪಾಟೀಲ್ ಪ್ರಧಾನಿಗೆ, ಸಿಎಂಗೆ ಹಾಗೂ ಅವರ ಪಕ್ಷದ ಹಿರಿಯರಿಗೆ ಮನವಿ ಸಲ್ಲಿಸಿದ್ದರು ಎಂದು ತಿಳಿಸಿದರು

  ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದ ಈಶ್ವರಪ್ಪ

  ಸಂತೋಷ್​​​ಗೆ ಯಾರೋ ಕುಮ್ಮಕ್ಕು ನೀಡಿದ್ದಾರೆ. ಪ್ರಕರಣ ಸಂಬಂಧ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ನನ್ನ ವಿರುದ್ಧದ ಆರೋಪ ನಿರಾಧಾರ. ನಾನು ರಾಜೀನಾಮೆ ಕೊಡಲು ಕಾರಣಗಳೇ ಇಲ್ಲ ಎನ್ನುವ ಮೂಲಕ ತಾವು ಪ್ರಕರಣ ಸಂಬಂಧ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು
  Published by:Seema R
  First published: