Sri Lanka Crisis: ಸ್ವರ್ಣ'ಲಂಕೆ'ಯಲ್ಲಿ ಮುಂದುವರೆದ ಸಂಕಟ! ಸಚಿವರ ಸಾಮೂಹಿಕ ರಾಜೀನಾಮೆ, ರಾಜಪಕ್ಸ ಕಥೆಯೇನು?
ಶ್ರೀಲಂಕಾದಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ನಡೆದ ದಿಢೀರ್ ರಾಜಕೀಯ ಬೆಳವಣಿಯಲ್ಲಿ ಪ್ರಧಾನಮಂತ್ರಿ ಮಹಿಂದಾ ರಾಜಪಕ್ಸ ಹೊರತುಪಡಿಸಿ ಸಂಪುಟದ ಎಲ್ಲಾ 26 ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಶ್ರೀಲಂಕಾ: ರಾಮಾಯಣದ (Ramayana) ಕಾಲದಲ್ಲಿ ರಾವಣನ (Ravana) ರಾಜಧಾನಿಯಾಗಿದ್ದ, ‘ಸ್ವರ್ಣ ಲಂಕೆ’ (Swarna Lanke) ಅಂತಾನೇ ಕರೆಸಿಕೊಂಡಿದ್ದ ಶ್ರೀಲಂಕಾ (Sri Lanka) ಇಂದು ಅಕ್ಷರಶಃ ಅಲ್ಲಾಡುತ್ತಿದೆ. ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ (Economic situation) ಕ್ಷಣ ಕ್ಷಣಕ್ಕೂ ಕುಸಿಯುತ್ತಿದೆ. ಕುಡಿಯುವ ನೀರಿನಿಂದ (Drinking Water) ಹಿಡಿದು ದಿನಬಳಕೆಯ ಎಲ್ಲಾ ಅಗತ್ಯ ವಸ್ತುಗಳ (Essential items) ಬೆಲೆಯೂ ಗಗನಕ್ಕೆ ಏರಿದೆ. ಪರಿಣಾಮ ಜನರು ದಂಗೆಯೆದ್ದಿದ್ದು, ಇಡೀ ದೇಶ ಕಂಗಾಲಾಗಿದೆ. ಈ ಸಂದರ್ಭದಲ್ಲಿ ದೇಶದ ಜನರ ಹಿತ ಕಾಯಬೇಕಾಗಿದ್ದ ಶ್ರೀಲಂಕಾ ಸಚಿವರು (Ministers) ಸಾಮೂಹಿಕ ರಾಜೀನಾಮೆ (Resign) ನೀಡುತ್ತಿದ್ದಾರೆ. ಅಧ್ಯಕ್ಷ (President) ಗೋಟಾಬಯ ರಾಜಪಕ್ಸ (Gotabaya Rajapaksa) ಮತ್ತು ಅವರ ಸಹೋದರ ಪ್ರಧಾನಿ (PM) ಮಹಿಂದಾ ರಾಜಪಕ್ಸ (Mahinda Rajapaksa) ಹೊರತುಪಡಿಸಿ ಶ್ರೀಲಂಕಾದ ಸಂಪೂರ್ಣ ಕ್ಯಾಬಿನೆಟ್ ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಶ್ರೀಲಂಕಾದ 26 ಸಚಿವರ ಸಾಮೂಹಿಕ ರಾಜೀನಾಮೆ
ಶ್ರೀಲಂಕಾದಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ನಡೆದ ದಿಢೀರ್ ರಾಜಕೀಯ ಬೆಳವಣಿಯಲ್ಲಿ ಪ್ರಧಾನಮಂತ್ರಿ ಮಹಿಂದಾ ರಾಜಪಕ್ಸ ಹೊರತುಪಡಿಸಿ ಸಂಪುಟದ ಎಲ್ಲಾ 26 ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ರಾಜಪಕ್ಸ ಪುತ್ರ ಸೇರಿ ಹಲವು ಸಚಿವರ ರಾಜೀನಾಮೆ
ಇನ್ನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ರಾಜಪಕ್ಸ ಅವರ ಪುತ್ರ ನಮಲ್ ರಾಜಪಕ್ಸ ಕೂಡ ಸೇರಿದ್ದಾರೆ ಅನ್ನೋದು ಗಮನಾರ್ಹ. ನಮನ್ ರಾಜಪಕ್ಸ ಕ್ರೀಡಾ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ನನ್ನ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ನಾನು ನಿರ್ವಹಿಸುತ್ತಿರುವ ಎಲ್ಲ ಜವಾಬ್ದಾರಿಗಳಿಂದಲೂ ಹಿಂದೆ ಸರಿಯುತ್ತಿರುವುದಾಗಿ ಅಧ್ಯಕ್ಷರ ಕಾರ್ಯದರ್ಶಿಗೆ ಮಾಹಿತಿ ನೀಡಿದ್ದೇನೆ. ನನ್ನ ಪಕ್ಷ ಮತ್ತು ಕ್ಷೇತ್ರದ ಮತದಾರರಿಗೆ ನಿಷ್ಠನಾಗಿಯೇ ಮುಂದಿನ ಜೀವನ ನಡೆಸುತ್ತೇನೆ. ದೇಶ ಎದುರಿಸುತ್ತಿರುವ ಬಿಕ್ಕಟ್ಟು ನಿರ್ವಹಿಸಲು ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಸಹಕರಿಸುತ್ತೇನೆ ಎಂದು ಅವರು ಭರವಸೆ ನೀಡಿದ್ದಾರೆ.
ಇನ್ನು ಸಚಿವರ ಸಾಮೂಹಿಕ ರಾಜೀನಾಮೆಯಿಂದ ಶ್ರೀಲಂಕಾ ಆಡಳಿತದಲ್ಲೂ ಬಿಕ್ಕಟ್ಟು ಶುರುವಾಗಿದೆ. ಹೀಗಾಗಿ ಪ್ರಧಾನಿ ಮಹಿಂದ ರಾಜಪಕ್ಸ ಕೂಡ ರಾಜೀನಾಮೆ ನೀಡುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಆದರೆ "ಪ್ರಧಾನಿ ಮಹಿಂದ ರಾಜಪಕ್ಸ ರಾಜೀನಾಮೆ ನೀಡುತ್ತಾರೆ ಎಂಬ ವದಂತಿಗಳಿಗೆ ಯಾವುದೇ ಆಧಾರವಿಲ್ಲ" ಎಂದು ವಾರ್ತಾ ಇಲಾಖೆಯ ಮಹಾನಿರ್ದೇಶಕ ಮೋಹನ್ ಸಮಾರನಾಯಕ ಹೇಳಿದ್ದಾರೆ.
ಕ್ಷಣ ಕ್ಷಣಕ್ಕೂ ಕುಸಿಯುತ್ತಿರುವ ಆರ್ಥಿಕ ಪರಿಸ್ಥಿತಿ
ಸದ್ಯಕ್ಕೆ ಶ್ರೀಲಂಕಾದಲ್ಲಿ ಅರಾಜಕತೆ ತಲೆದೋರಿದೆ. ಕೋವಿಡ್ -19 ಕಾರಣದಿಂದಾಗಿ ಪ್ರವಾಸೋದ್ಯಮ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ ಪರಿಣಾಮ ವಿದೇಶಿ ವಿನಿಮಯ ಕೊರತೆಯನ್ನು ದೇಶ ಎದುರಿಸುತ್ತಿದೆ. ಅಷ್ಟೇ ಅಲ್ಲದೆ, ನಾಗರಿಕರು ಅಗತ್ಯ ಆಹಾರ ವಸ್ತುಗಳು, ಇಂಧನ ಮತ್ತು ಅನಿಲದ ಕೊರತೆಯನ್ನು ಎದುರಿಸುತ್ತಿದ್ದಾರೆ.
ದೇಶದ್ಯಂತ ಮುಂದುವರೆದ ತುರ್ತು ಪರಿಸ್ಥಿತಿ
ಹೆಚ್ಚುತ್ತಿರುವ ಸಾರ್ವಜನಿಕ ಅಶಾಂತಿಯ ಹಿನ್ನೆಲೆಯಲ್ಲಿ ಅಧ್ಯಕ್ಷ ರಾಜಪಕ್ಸೆ ಶುಕ್ರವಾರ ತಡರಾತ್ರಿ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸರಬರಾಜು ಮತ್ತು ಅಗತ್ಯ ಸೇವೆಗಳ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಈಗಾಗಲೇ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ದೇಶದ ಪಶ್ಚಿಮ ಪ್ರಾಂತ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಈ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಾತ್ರಿ 644 ಜನರನ್ನು ಬಂಧಿಸಲಾಗಿದೆ.
Published by:Annappa Achari
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ