• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Mehbooba Mufti: ರಾಷ್ಟ್ರೀಯ ಭದ್ರತೆಗೆ ಹಾನಿಕಾರಕವೆಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿಗೆ ಪಾಸ್​ಪೋರ್ಟ್​ ನಿರಾಕರಿಸಿದ ಕೇಂದ್ರ

Mehbooba Mufti: ರಾಷ್ಟ್ರೀಯ ಭದ್ರತೆಗೆ ಹಾನಿಕಾರಕವೆಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿಗೆ ಪಾಸ್​ಪೋರ್ಟ್​ ನಿರಾಕರಿಸಿದ ಕೇಂದ್ರ

ಮೆಹಬೂಬ ಮುಫ್ತಿ.

ಮೆಹಬೂಬ ಮುಫ್ತಿ.

ಪಾಸ್​ಪೋರ್ಟ್​ ನಿರಾಕರಣೆಯ ವರದಿಯನ್ನು ಉಲ್ಲೇಖಿಸಿ ಟ್ವೀಟ್​ ಮಾಡುವ ಮೂಲಕ ಮೆಹಬೂಬಾ ಮುಫ್ತಿ ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.

  • Share this:

    ನವ ದೆಹಲಿ (ಮಾರ್ಚ್​ 29); ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರಿಗೆ ಪಾಸ್​ಪೋರ್ಟ್​ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಪಾಸ್​ಪೋರ್ಟ್​ ನಿರಾಕರಣೆಯ ವರದಿಯನ್ನು ಉಲ್ಲೇಖಿಸಿ ಟ್ವೀಟ್​ ಮಾಡುವ ಮೂಲಕ ಮೆಹಬೂಬಾ ಮುಫ್ತಿ ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಈ ಹಿಂದೆ ಜಮ್ಮು-ಕಾಶ್ಮೀರಕ್ಕೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿಶೇಷ ಸವಲತ್ತು ಕಲಂ 370ನ್ನು ರದ್ದು ಮಾಡುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸುಮಾರು ಒಂದು ವರ್ಷಗಳಿಗೂ ಅಧಿಕ ಕಾಲ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿ ಇರಿಸಿತ್ತು. ತೀರಾ ಇತ್ತೀಚೆಗೆ ಅವರನ್ನು ಬಿಡುಗಡೆ ಮಾಡಲಾಗಿತ್ತಾದರೂ, ಅವರು ವಿದೇಶಕ್ಕೆ ತೆರಳುವುದನ್ನು ತಡೆಯುವ ಸಲುವಾಗಿ ದೇಶದ ರಾಷ್ಟ್ರೀಯ ಭದ್ರತೆಯ ನೆಪವೊಡ್ಡಿ ಕೇಂದ್ರ ಸರ್ಕಾರ ಇದೀಗ ಅವರ ಪಾಸ್​ಪೋರ್ಟ್​ ಅನ್ನು ತಡೆ ಹಿಡಿದಿದೆ.



    ಈ ಸಂಬಂಧ ಟ್ವೀಟ್ ಮಾಡಿರುವ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ, "ಸಿಐಡಿಯ ವರದಿಯ ಆಧಾರದ ಮೇಲೆ ನನ್ನ ಪಾಸ್‌ಪೋರ್ಟ್ ನೀಡಲು ಪಾಸ್‌ಪೋರ್ಟ್ ಕಚೇರಿ ನಿರಾಕರಿಸಿದೆ. ಅದು ‘ಭಾರತದ ಭದ್ರತೆಗೆ ಹಾನಿಕಾರಕ’ ಎಂದು ಉಲ್ಲೇಖಿಸಿದೆ. ಮಾಜಿ ಮುಖ್ಯಮಂತ್ರಿಯೊಬ್ಬರು ಪಾಸ್‌ಪೋರ್ಟ್ ಹೊಂದಿರುವುದು ಪ್ರಬಲ ರಾಷ್ಟ್ರದ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತದೆ ಎಂಬುದು ಆಗಸ್ಟ್ 2019 ರಿಂದ ಕಾಶ್ಮೀರದಲ್ಲಿ ಸಾಮಾನ್ಯ ಸ್ಥಿತಿಯಾಗಿದೆ" ಎಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


    ಮೆಹಬೂಬಾ ಮುಫ್ತಿ ಈ ಟ್ವೀಟ್‌ನೊಂದಿಗೆ ಪಾಸ್‌ಪೋರ್ಟ್ ಅಧಿಕಾರಿಗಳ ಪತ್ರವನ್ನು ಲಗತ್ತಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಪೊಲೀಸ್ ಪರಿಶೀಲನೆಗಾಗಿ ಸಲ್ಲಿಸಿರುವುದನ್ನು ಸೂಚಿಸುತ್ತದೆ. ಆದರೆ ಪಾಸ್‌ಪೋರ್ಟ್ ನಿರಾಕರಿಸಲಾಗಿದೆ.


    ಸಿಐಡಿ ವರದಿ ಉಲ್ಲೇಖಿಸಿರುವ ಕಚೇರಿಯು ಪಾಸ್‌ಪೋರ್ಟ್‌ ನೀಡಲು ಇದು ಸೂಕ್ತವಾದ ಪ್ರಕರಣವಲ್ಲ ಎಂದಿದ್ದು, ಈ ನಿರ್ಧಾರ ಪ್ರಶ್ನಿಸಿ ಮುಖ್ಯ ಕಚೇರಿ ಸಂಪರ್ಕಿಸಲು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸ್ವತಂತ್ರರಿದ್ದಾರೆ ಎಂದು ಹೇಳಲಾಗಿದೆ.


    ಇದನ್ನೂ ಓದಿ: TamilNadu Assembly Election2021: ಸಿಎಂ ಎಡಪ್ಪಾಡಿ ಪಳನಿಸ್ವಾಮಿ ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚಿಸಿದ ಡಿಎಂಕೆ ನಾಯಕ ಎ. ರಾಜಾ


    2019 ರ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ನೂರಾರು ರಾಜಕೀಯ ಮುಖಂಡರೊಂದಿಗೆ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧನದಲ್ಲಿಡಲಾಗಿತ್ತು. ಒಕ್ಕೂಟ ಸರ್ಕಾರವು ಸಂವಿಧಾನವು ನೀಡಿರುವ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.


    ಮೆಹಬೂಬಾ ಮುಫ್ತಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಡುಗಡೆಯಾದರು. ಪ್ರಸ್ತುತ, ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿದೆ.

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು