• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Mehul Choksi: PNB ಹಗರಣ; ಡೊಮಿನಿಕಾದಿಂದ ಮೆಹುಲ್ ಚೋಕ್ಸಿ ಗಡಿಪಾರು ಸಾಧ್ಯತೆ; ದೆಹಲಿಯಿಂದ ವಿಮಾನ ರವಾನೆ

Mehul Choksi: PNB ಹಗರಣ; ಡೊಮಿನಿಕಾದಿಂದ ಮೆಹುಲ್ ಚೋಕ್ಸಿ ಗಡಿಪಾರು ಸಾಧ್ಯತೆ; ದೆಹಲಿಯಿಂದ ವಿಮಾನ ರವಾನೆ

ಮೇಹುಲ್ ಚೋಕ್ಸಿ

ಮೇಹುಲ್ ಚೋಕ್ಸಿ

Mehul Choksi | ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದ ಗಡಿಪಾರು ಮಾಡುವ ಸಾಧ್ಯತೆಗಳಿರುವುದರಿಂದ ಆತನನ್ನು ಭಾರತಕ್ಕೆ ಕರೆತರಲು ದೆಹಲಿಯಿಂದ ಡೊಮಿನಿಕಾಗೆ ವಿಶೇಷ ವಿಮಾನವನ್ನು ಕಳುಹಿಸಲಾಗಿದೆ.

  • Share this:

ನವದೆಹಲಿ (ಮೇ 30): ಭಾರತದಿಂದ ತಲೆಮರೆಸಿಕೊಂಡಿದ್ದ ಪಿಎನ್​ಬಿ ಹಗರಣದ ಆರೋಪಿ, ವಜ್ರದ ಉದ್ಯಮಿ ಮೆಹುಲ್ ಚೋಕ್ಸಿ ಅವರನ್ನು ಡೊಮಿನಿಕಾ ದ್ವೀಪದಲ್ಲಿ ಬಂಧಿಸಲಾಗಿತ್ತು. ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದ ಗಡಿಪಾರು ಮಾಡುವ ಸಾಧ್ಯತೆಗಳಿರುವುದರಿಂದ ಆತನನ್ನು ಭಾರತಕ್ಕೆ ಕರೆತರಲು ದೆಹಲಿಯಿಂದ ಡೊಮಿನಿಕಾಗೆ ವಿಶೇಷ ವಿಮಾನವನ್ನು ಕಳುಹಿಸಲಾಗಿದೆ. ಕತಾರ್ ಎಕ್ಸಿಕ್ಯೂಟಿವ್​ನ ಬಾಂಬಾರ್ಡಿಯರ್ ಗ್ಲೋಬಲ್ 5000 ಏರ್​ಕ್ರಾಫ್ಟ್​ ಮೇ 28ರಂದು ಡೊಮಿನಿಕಾದ ಡೌಗ್ಲಾಸ್ ಚಾರ್ಲ್ಸ್​ ಏರ್​ಪೋರ್ಟ್​ಗೆ ಬಂದಿಳಿದಿದೆ ಎಂದು ಮೂಲಗಳು ತಿಳಿಸಿವೆ.


ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದ ಗಡಿಪಾರು ಮಾಡಿದ ಬಳಿಕ ಆತನನ್ನು ಭಾರತಕ್ಕೆ ಕರೆತರಲು ದೆಹಲಿಯಿಂದ ಯಾರಾದರೂ ಹೋಗಿದ್ದಾರಾ? ಅಥವಾ ಕೇವಲ ವಿಮಾನವನ್ನು ಮಾತ್ರ ಕಳುಹಿಸಲಾಗಿದೆಯಾ? ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಸರ್ಕಾರದಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.


ಕಳೆದ ಸೋಮವಾರ ಸಂಜೆ ಆಂಟಿಗುವಾ ದ್ವೀಪದಿಂದ ನಾಪತ್ತೆಯಾಗಿದ್ದ ಭಾರತದ ವಜ್ರದ ಉದ್ಯಮಿ ಮೆಹುಲ್ ಚೋಕ್ಸಿ ಕ್ಯೂಬಾಕ್ಕೆ ಪಲಾಯನ ಮಾಡುವ ಸಂದರ್ಭದಲ್ಲಿ ಡೊಮಿನಿಕಾ ದ್ವೀಪದಲ್ಲಿ ಬಂಧಿಸಲಾಗಿದೆ. ಆಂಟಿಗುವಾ ಪೊಲೀಸರು ಡೊಮಿನಿಕಾದಲ್ಲಿ ಮೆಹುಲ್ ಚೋಕ್ಸಿಯನ್ನು ಬಂಧಿಸಿದ್ದರು. ಪಿಎನ್​ಬಿ (ಪಂಜಾಬ್ ನ್ಯಾಷನಲ್ ಬ್ಯಾಂಕ್‌) ಹಗರಣದಲ್ಲಿ ಭಾರತಕ್ಕೆ ಬೇಕಾಗಿರುವ ಆರೋಪಿಗಳಲ್ಲಿ ಒಬ್ಬರಾಗಿರುವ ಮೆಹುಲ್ ಚೋಕ್ಸಿ ಈಗ ಡೊಮಿನಿಕಾದಲ್ಲಿ ಬಂಧನದಲ್ಲಿದ್ದಾರೆ.


ಇದನ್ನೂ ಓದಿ: Chikmagalur Crime: ಹಣ ನೀಡಲಿಲ್ಲವೆಂದು ಮೂಡಿಗೆರೆಯಲ್ಲಿ ಅಪ್ಪನನ್ನು ಕೊಚ್ಚಿ ಕೊಂದ ಪಾಪಿ ಮಗ


62 ವರ್ಷದ ಚೋಕ್ಸಿ, ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬಡೋಸ್‌ನಲ್ಲಿ ನೆಲೆಸಿದ್ದರು. ಸೋಮವಾರ ಸಂಜೆ ಊಟಕ್ಕಾಗಿ ಮನೆಯಿಂದ ಹೊರಗೆ ಹೋದವರು ವಾಪಾಸ್ ಬಂದಿರಲಿಲ್ಲ. ಆತ ಕ್ಯೂಬಾಕ್ಕೆ ಪರಾರಿಯಾಗಿರುವ ಅನುಮಾನಗಳು ವ್ಯಕ್ತವಾಗಿದ್ದವು. ಆಂಟಿಗುವಾದಿಂದ ಚೋಕ್ಸಿಯನ್ನು ಭಾರತಕ್ಕೆ ಗಡಿಪಾರು ಮಾಡಿಸುವ ಸಂಬಂಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಗಳು ಪ್ರಯತ್ನ ನಡೆಸಿರುವ ಸಂದರ್ಭದಲ್ಲಿಯೇ ಅವರು ಆಂಟಿಗುವಾದಿಂದಲೂ ಪಲಾಯನ ಮಾಡಲು ಯೋಜನೆ ರೂಪಿಸಿದ್ದರು.


ಸೋಮವಾರ ಸಂಜೆ ಮನೆಯಿಂದ ಹೊರಹೋಗಿದ್ದ ಚೋಕ್ಸಿ, ದೋಣಿಯೊಂದರಲ್ಲಿ ಪುಟ್ಟ ದ್ವೀಪವಾದ ಡೊಮಿನಿಕಾಕ್ಕೆ ತೆರಳಿದ್ದರು. ಆತನ ವಿರುದ್ಧ ಆಂಟಿಗುವಾ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಿದ್ದರು. ಚೋಕ್ಸಿಯನ್ನು ಗಮನಿಸಿದ ಆಂಟಿಗುವಾ ಪೊಲೀಸರು ಡೊಮಿನಿಕಾದಲ್ಲಿ ಆತನನ್ನು ಬಂಧಿಸಿದ್ದರು. ಆತನನ್ನು ಭಾರತಕ್ಕೆ ಹಸ್ತಾಂತರಿಸಲಾಗುತ್ತದೆ ಎನ್ನಲಾಗುತ್ತಿದ್ದು, ಆ ಹಿನ್ನೆಲೆಯಲ್ಲಿ ಡೊಮಿನಿಕಾಗೆ ದೆಹಲಿಯಿಂದ ವಿಮಾನವನ್ನು ಕಳುಹಿಸಲಾಗಿದೆ.


ಇದನ್ನೂ ಓದಿ: Petrol Price Today: ಮುಂಬೈ, ಜೈಪುರದಲ್ಲಿ ಮತ್ತೆ 100 ರೂ. ದಾಟಿದ ಪೆಟ್ರೋಲ್ ಬೆಲೆ; ಡೀಸೆಲ್ ಬೆಲೆಯಲ್ಲೂ ಏರಿಕೆ


ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಸಾವಿರಾರು ಕೋಟಿ ರೂ. ವಂಚಿಸಿ ಭಾರತದಿಂದ ಪರಾರಿಯಾಗಿದ್ದ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಗಾಗಿ ಹಲವು ವರ್ಷಗಳಿಂದ ಪೊಲೀಸರು ಹುಡುಕಾಟ ನಡೆಸಿದ್ದರು. ಆಂಟಿಗುವಾ ಮತ್ತು ಬಾರ್ಬುಡಾದ ಪೌರತ್ವ ಪಡೆದಿರುವ ಚೋಕ್ಸಿ 2018ರಿಂದ ಅಲ್ಲಿಯೇ ವಾಸ್ತವ್ಯ ಹೂಡಿದ್ದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಪಿಎನ್ ಬಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಡೊಮಿನಿಕಾ ಮತ್ತು ಆಂಟಿಗುವಾ ಸರ್ಕಾರವನ್ನು ಕೇಳಿತ್ತು.


ಭಾರತದಿಂದ ಯೆಲ್ಲೋ ಕಾರ್ನರ್​ ನೊಟೀಸ್​ ಜಾರಿಯಾದ ನಂತರ, ದೇಶಬಿಟ್ಟು ಪರಾರಿಯಾಗಲು ಚೋಕ್ಸಿ ಯತ್ನಿಸಿದರೆ ಪೌರತ್ವ ಹಿಂಪಡೆಯುವುದಾಗಿ ಆಂಟಿಗುವಾ ಹೇಳಿತ್ತು. ಮೇಹುಲ್​ ಚೋಕ್ಸಿ ಮತ್ತು ನೀರವ್​ ಮೋದಿ ಇಬ್ಬರೂ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಇಂದ ರೂ. 13,500 ಕೋಟಿ ಸಾಲ ಪಡೆದು ವಂಚಿಸಿದ್ದರು. ಜಾರಿ ನಿರ್ದೇಶನಾಲಯಕ್ಕೆ ವಂಚನೆಯ ವಾಸನೆ ಬಂದ ತಕ್ಷಣ ಇಬ್ಬರೂ ದೇಶ ಬಿಟ್ಟು ಕಾಲ್ಕಿತ್ತಿದ್ದರು. ಸದ್ಯ ನೀರವ್​​ ಮೋದಿ ಇಂಗ್ಲೆಂಡ್​ನ ಜೈಲಿನಲ್ಲಿದ್ದು, ಕೋರ್ಟ್​​ ಭಾರತಕ್ಕೆ ಹಸ್ತಾಂತರಿಸಲು ಅನುಮತಿ ನೀಡಿದೆ. ಆದರೆ ನೀರವ್​ ಕೋರ್ಟ್​ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿದ್ದಾರೆ.

Published by:Sushma Chakre
First published: