Mekedatu Project: DPR ವಜಾಗೊಳಿಸುವಂತೆ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ ತಮಿಳುನಾಡು

'ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಅಣೆಕಟ್ಟು ಯೋಜನೆಯ ಡಿಪಿಆರ್ ಅನ್ನು ವಜಾಗೊಳಿಸಿ ವಾಪಸ್ ಕಳುಹಿಸುವಂತೆ ಕೇಂದ್ರ ಜಲ ಆಯೋಗಕ್ಕೆ ಸೂಚನೆ ನೀಡಿ' ಎಂದು ಮನವಿ ಮಾಡಿಕೊಂಡಿದೆ.

ಎಂ.ಕೆ. ಸ್ಟಾಲಿನ್.

ಎಂ.ಕೆ. ಸ್ಟಾಲಿನ್.

  • Share this:
ನವದೆಹಲಿ(ಆ. 27): ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರನ್ನು ಪೂರೈಸುವ ಮಹತ್ವಾಕಾಂಕ್ಷೆಯ ಯೋಜನೆ ಮೇಕೆದಾಟು(Mekedatu Project) ಬಳಿ‌ ಅಣೆಕಟ್ಟು ನಿರ್ಮಿಸುವ ವಿಷಯಕ್ಕೆ ಸಂಬಂಧಿಸಿದಂತೆ ತಮಿಳುನಾಡು(Tamil Nadu) ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ(Supreme Court) ಮತ್ತೊಂದು ದೂರು ಸಲ್ಲಿಸಿದೆ. 2019ರಂದು ಮೇಕೆದಾಟು ಅಣೆಕಟ್ಟು ಯೋಜನೆ ಬಗ್ಗೆ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿ (Detail Project Report) ಅನ್ನು ವಜಾಗೊಳಿಸುವಂತೆ ಕೇಂದ್ರ ಜಲ ಆಯೋಗಕ್ಕೆ (Central Water Commission) ಸೂಚನೆ ನೀಡುವಂತೆ ಸುಪ್ರೀಂ ಕೋರ್ಟಿಗೆ ಮನವಿ ಮಾಡಿಕೊಂಡಿದೆ.

ಮೊನ್ನೆ (ಆಗಸ್ಟ್ 15) ದೆಹಲಿಯಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gagendra Sing Shekawath) ಅವರನ್ನು ಭೇಟಿ ಮಾಡಿ ರಾಜ್ಯದ ಜಲ ವಿವಾದಗಳ ಬಗ್ಗೆ ಚರ್ಚೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಮೇಕೆದಾಟು ಯೋಜನೆ ಬಗ್ಗೆ ಒತ್ತು ನೀಡಿದ್ದರು. ಕೇಂದ್ರ ಸಚಿವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅವರು, ಮೇಕೆದಾಟು DPR ವಿಷಯವೇ ಮುಂದಿನ ಕರ್ನಾಟಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (Cauvery Water Management Committee) ಸಭೆಯ ಅಜೆಂಡಾ ಆಗಿರಲಿದೆ ಎಂದು ಹೇಳಿದ್ದರು. ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ತಮಿಳುನಾಡು ಸರ್ಕಾರ ‌ಶುಕ್ರವಾರ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದೆ.

ಇದನ್ನೂ ಓದಿ:Gold Price Today: ಮತ್ತೆ ಇಳಿಕೆಯಾದ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಇಂದಿನ ರೇಟ್ ಹೀಗಿದೆ..!

ಕರ್ನಾಟಕ ಸಲ್ಲಿಸಿರುವ ಡಿಪಿಆರ್ ವಿಷಯ ಕರ್ನಾಟಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚೆ ಆಗಿ ಅಂತಿಮ ಅನುಮೋದನೆಗೆ ಕೇಂದ್ರ ಜಲ ಆಯೋಗಕ್ಕೆ ಕಳುಹಿಸಿಕೊಡಬೇಕಾಗುತ್ತದೆ. ಇದೇ ಹಿನ್ನಲೆಯಲ್ಲಿ ಕರ್ನಾಟಕವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಕರ್ನಾಟಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ಪಡೆಯಬಹುದು ಎಂದು ಅನುಮಾನ ಪಟ್ಟಿರುವ ತಮಿಳುನಾಡು, 'ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಅಣೆಕಟ್ಟು ಯೋಜನೆಯ ಡಿಪಿಆರ್ ಅನ್ನು ವಜಾಗೊಳಿಸಿ ವಾಪಸ್ ಕಳುಹಿಸುವಂತೆ ಕೇಂದ್ರ ಜಲ ಆಯೋಗಕ್ಕೆ ಸೂಚನೆ ನೀಡಿ' ಎಂದು ಮನವಿ ಮಾಡಿಕೊಂಡಿದೆ.

ಬಾಕಿ  ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಸಿಎಂ

ಸರ್ವೋಚ್ಛ ನ್ಯಾಯಾಲಯದಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಜಲ ವಿವಾದಗಳಿಗೆ ಸಂಬಂಧಿಸಿದ  ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯ ಸರ್ಕಾರ  ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ  ಸುದೀರ್ಘ ಚರ್ಚೆ ನಡೆದಿದ್ದು,  ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ತಮಿಳುನಾಡು ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗಳ ಕುರಿತು ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದಿದ್ದರು.

ಇದನ್ನೂ ಓದಿ:Mysuru Gang Rape: ಮೈಸೂರು ಅತ್ಯಾಚಾರ ಪ್ರಕರಣಕ್ಕೆ ‘ಮಾನಿನಿ‘ ಎಂದು ಹೆಸರಿಟ್ಟ ಇಂದ್ರಜಿತ್ ಲಂಕೇಶ್

ವಿಶೇಷ ರಜೆ ಅರ್ಜಿಗೆ ಸಂಬಂಧಿಸಿದ ಸಮಸ್ಯೆಗಳ ಇತ್ಯರ್ಥ ಮಾಡಲು ತೀರ್ಮಾನಿಸಲಾಗಿದೆ ಎಂದ ಅವರು ತಮಿಳುನಾಡು ನದಿ ಜೋಡಣೆ ಯೋಜನೆಗಳು ಕಾನೂನು ಬಾಹಿರವಾಗಿದ್ದು, ಆ ಬಗ್ಗೆ ಚರ್ಚಿಸಲಾಗಿದೆ. ಮೇಕೆದಾಟು ಯೋಜನೆಯ ಬಗ್ಗೆ  ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಾಗ ನಮ್ಮ ನಿಲುವನ್ನು ಸ್ಪಷ್ಟಪಡಿಸುವ ಕುರಿತು ಹಾಗೂ ತಮಿಳುನಾಡು ಮಧುರೈ ನ್ಯಾಯಾಲಯದಲ್ಲಿ ಪ್ರಕರಣವೊಂದು ದಾಖಲಾಗಿದೆ. ಪ್ರಕರಣ ಮಧುರೈ ವ್ಯಾಪ್ತಿಗೆ ಒಳಪಡದಿರುವುದರಿಂದ ಪ್ರಕರಣವನ್ನು ಕೈಬಿಡಲು  ಕ್ರಮ ವಹಿಸಲಾಗುವುದು ಎಂದು ಹೇಳಿದ್ದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೂಡ ಉಪಸ್ಥಿತರಿದ್ದರು.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:Latha CG
First published: