HOME » NEWS » National-international » MINISTER BC PATIL REACTION ON TERRORISTS PLANNED TO ATTACK ON RSS LEADER MOHAN BHAGWAT GNR

‘ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್‌ ಹತ್ಯೆಗೆ ಸಂಚು ಖಂಡನೀಯ‘; ಸಚಿವ ಬಿ.ಸಿ ಪಾಟೀಲ್​​

ಹಾಗಾಗಿಯೇ ಬಸವನಗುಡಿಯಲ್ಲಿ ಭಾನುವಾರ ನಡೆದ ಆರ್‌ಎಸ್‌ಎಸ್‌ ಕಾರ್ಯಕರ್ತರ ಬೃಹತ್ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್​​ ಬಂದೋಬಸ್ತ್​​ ಆಯೋಜಿಸಲಾಗಿತ್ತು. ಮೋಹನ್​​ ಭಾಗವತ್​​ ಹತ್ಯೆಗೆ ಸಂಚು ಎಂಬ ಕಾರಣ ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದರು.

news18-kannada
Updated:March 9, 2020, 4:41 PM IST
‘ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್‌ ಹತ್ಯೆಗೆ ಸಂಚು ಖಂಡನೀಯ‘; ಸಚಿವ ಬಿ.ಸಿ ಪಾಟೀಲ್​​
ಬಿ.ಸಿ. ಪಾಟೀಲ್.
  • Share this:
ಬೆಂಗಳೂರು(ಮಾ.09): ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹತ್ಯೆಗೆ ಸಂಚು ಖಂಡನೀಯ ಎಂದು ಕೃಷಿ ಸಚಿವ ಬಿ‌.ಸಿ ಪಾಟೀಲ್ ಹೇಳಿದ್ದಾರೆ. ಇಂದು ವಿಧಾನಸಭೆ ಕಲಾಪಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಬಿ.ಸಿ ಪಾಟೀಲ್​, ಮೋಹನ್​​ ಭಾಗವತ್​​​​ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಮಾಹಿತಿ ಗುಪ್ತಚರ ಇಲಾಖೆ ನೀಡಿದೆ. ಕೂಡಲೇ ರಾಷ್ಟ್ರೀಯವಾದಿಗಳ ಹತ್ಯೆಗೆ ಸಂಚು ರೂಪಿಸಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಗೃಹ ಇಲಾಖೆಗೆ ಮನವಿ ಮಾಡುತ್ತೇನೆ ಎಂದರು.

ಇತ್ತೀಚೆಗೆ ಭಾನುವಾರ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮೇಲೆ ಉಗ್ರರು ಕಣ್ಣಿಟ್ಟಿದ್ದರು ಎಂಬ ಮಾಹಿತಿ ಕೇಂದ್ರ ಗುಪ್ತದಳ ಇಲಾಖೆ ಪೊಲೀಸರಿಗೆ ಮಾಹಿತಿ ನೀಡಿತ್ತು.

ಇನ್ನು, ಮೋಹನ್​​ ಭಾಗವತ್​ ಹತ್ಯೆ ಮಾಡಲು ನಾಗಪುರದ ಆರ್​ಎಸ್​ಎಸ್​ ಕಚೇರಿ ಮೇಲೆ ದಾಳಿ ನಡೆಸಬೇಕೆಂದು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿಯೂ ಗ್ಲೋಬಲ್ ಟೆರರಿಸ್ಟ್ ಗ್ರೂಪ್‌ನಲ್ಲಿ ಹರಿದಾಡುತ್ತಿದೆ. ಹೀಗೆಂದು ಖುದ್ದು ಕೇಂದ್ರ ಗುಪ್ತದಳದ ಅಧಿಕಾರಿಗಳು ರಾಜ್ಯದ ಪೊಲೀಸರಿಗೆ ಎಚ್ಚರಿಕಾ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ಮೋಹನ್ ಭಾಗವತ್ ಸಮಾವೇಶದ ಮೇಲೆ ಉಗ್ರರ ಕಣ್ಣು; ಪೊಲೀಸರಿಂದ ತಪ್ಪಿತಾ ಅನಾಹುತ?

ಹಾಗಾಗಿಯೇ ಬಸವನಗುಡಿಯಲ್ಲಿ ಭಾನುವಾರ ನಡೆದ ಆರ್‌ಎಸ್‌ಎಸ್‌ ಕಾರ್ಯಕರ್ತರ ಬೃಹತ್ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್​​ ಬಂದೋಬಸ್ತ್​​ ಆಯೋಜಿಸಲಾಗಿತ್ತು. ಮೋಹನ್​​ ಭಾಗವತ್​​ ಹತ್ಯೆಗೆ ಸಂಚು ಎಂಬ ಕಾರಣ ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದರು.

ಕಾರ್ಯಕ್ರಮಕ್ಕೆ ಬಿಗಿ ಭದ್ರತೆಗಾಗಿ ನುರಿತ ಅಧಿಕಾರಿಗಳನ್ನು ನೇಮಕ ಮಾಡಿ ಆಂತರಿಕ ಭದ್ರತಾ ವಿಭಾಗದ(ಐಎಸ್‌ಡಿ) ಎಸ್ಪಿ ಜಿನೇಂದ್ರ ಕಣಗಾವಿ ಆದೇಶ ಹೊರಡಿಸಿದ್ದರು. ಜತೆಗೆ ಕಾರ್ಯಕ್ರಮ ಆಯೋಜಿಸಲಾಗಿದ್ದ ಸ್ಥಳಗಳಲ್ಲಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಮಾಹಿತಿ ರವಾನಿಸುವಂತೆ ಸೂಚಿಸಿದ್ದರು.
First published: March 9, 2020, 4:32 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories