HOME » NEWS » National-international » MINISTER MURUGESH NIRANI WHO SOUGHT CENTERS ASSISTANCE FOR THE USE OF 18 THOUSAND CRORES ORE FUNDS MAK

Murugesh Nirani: 18 ಸಾವಿರ ಕೋಟಿ ರೂ. ಅದಿರು ನಿಧಿ ಬಳಕೆಗೆ ಕೇಂದ್ರದ ನೆರವು ಕೋರಿದ ಸಚಿವ ಮುರುಗೇಶ್ ನಿರಾಣಿ

ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಕಬ್ಬಿಣದ ಅದಿರು ಗಣಿಗಾರಿಕೆ ನಡೆಸಿರುವ ದಂಡ ಮತ್ತು ಸುಂಕದ (ಲೆವಿ) ರೂಪದಲ್ಲಿ ಸುಮಾರು 18,000 ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಸಂಗ್ರಹಿಸಲಾಗಿದೆ.

news18-kannada
Updated:February 13, 2021, 7:49 PM IST
Murugesh Nirani: 18 ಸಾವಿರ ಕೋಟಿ ರೂ. ಅದಿರು ನಿಧಿ ಬಳಕೆಗೆ ಕೇಂದ್ರದ ನೆರವು ಕೋರಿದ ಸಚಿವ ಮುರುಗೇಶ್ ನಿರಾಣಿ
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತಿರುವ ಮುರುಗೇಶ್​ ನಿರಾಣಿ.
  • Share this:
ನವದೆಹಲಿ (ಫೆಬ್ರವರಿ. 13): ಸುಪ್ರೀಂ ಕೋರ್ಟ್ ನಿದೇರ್ಶನದಂತೆ ಕಳೆದ ಆರು ವರ್ಷಗಳಿಂದ ಕಬ್ಬಿಣದ ಅದಿರು ಗಣಿ ಕಂಪನಿಗಳಿಂದ  ಸಂಗ್ರಹಿಸಿರುವ ಸುಮಾರು 18 ಸಾವಿರ ಕೋಟಿ ರೂಪಾಯಿಯನ್ನು ಕರ್ನಾಟಕಕ್ಕೆ ನೀಡುವ ನಿಟ್ಟಿನಲ್ಲಿ ಕಾನೂನು ಮತ್ತು ಆಡಳಿತಾತ್ಮಕ ನೆರವು ನೀಡಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಸಚಿವ  ಮುರುಗೇಶ್ ನಿರಾಣಿ ಅವರು ಶನಿವಾರ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಗಣಿ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಜೋಶಿ ಅವರನ್ನು ಭೇಟಿ ಮಾಡಿದ ನಿರಾಣಿ ಅಧಿಕೃತವಾಗಿ ರಾಜ್ಯದ ಪರವಾಗಿ ಮನವಿಪತ್ರವನ್ನು ಸಲ್ಲಿಸಿದರು.

ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಕಬ್ಬಿಣದ ಅದಿರು ಗಣಿಗಾರಿಕೆ ನಡೆಸಿರುವ ದಂಡ ಮತ್ತು ಸುಂಕದ (ಲೆವಿ) ರೂಪದಲ್ಲಿ ಸುಮಾರು 18,000 ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಸಂಗ್ರಹಿಸಲಾಗಿದೆ. ಆ ಹಣವನ್ನು ಗಣಿಗಾರಿಕೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ರೂಪು ರೇಷೆಯನ್ನು ಸಿದ್ಧಪಡಿಸುವ ಕುರಿತು ಚರ್ಚಿಸಿದರು.

ನಿಧಿ ಬಳಕೆಗೆ ನ್ಯಾಯಾಲಯವು ಅನುಮತಿ ನೀಡಿದರೆ,  ಬಳ್ಳಾರಿ, ಚಿತ್ರದುರ್ಗ, ಬಾಗಲಕೋಟೆ ಮತ್ತು ತುಮಕೂರು ಸೇರಿದಂತೆ ಗಣಿಗಾರಿಕೆ ನಡೆಯುವ ಪ್ರದೇಶಗಳಲ್ಲಿ ಈ ಭಾಗದ ಜನರಿಗೆ ಪುನರ್ವಸತಿಗೆ ಅವಕಾಶ ನೀಡುವ ಅಗತ್ಯದ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ಸಚಿವ ನಿರಾಣಿ ಅವರು ತಂದರು.ಈಗಾಗಲೇ ಒರಿಸ್ಸಾದಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸಿದ ಕಂಪೆನಿಗಳನ್ನು ಆಯಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಮತ್ತಿತರ ಅಗತ್ಯತೆಗಳನ್ನು ಕಲ್ಪಿಸಿಕೊಡಲು ಅನುಮತಿ ನೀಡಿತ್ತು. ನಮ್ಮ ರಾಜ್ಯದ ಒಂದು ಪ್ರಕರಣದಲ್ಲಿ ಇದೇ ರೀತಿಯ ಆದೇಶ ಬಂದಿತ್ತು ಎಂಬುದನ್ನು ಮನವರಿಕೆ ಮಾಡಿಕೊಟ್ಟರು.

ಪ್ರಸ್ತುತ ನ್ಯಾಯಾಲಯದ ಅಧೀನದಲ್ಲಿರುವ ₹18 ಸಾವಿರ ಕೋಟಿ ಮುಂದೆ ಸಂಗ್ರಹವಾಗಲಿರುವ ರಾಜಧನ ಸೇರಿದಂತೆ ಒಟ್ಟು ₹25 ಸಾವಿರ ಕೋಟಿ ರೂ. ಕ್ರಿಯಾ ಯೋಜನೆಯನ್ನು ಇಲಾಖೆ ಸಿದ್ಧಪಡಿಸಿದೆ ಎಂಬುದನ್ನು ತಿಳಿಸಿದರು. ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಖನಿಜ ನಿಧಿ ಅಡಿ ₹2,200 ಕೋಟಿ ಸಂಗ್ರಹವಾಗಿದೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮುಖ್ಯಸ್ಥರಾಗುತ್ತಾರೆ. ಈ ಹಣದಿಂದಲೂ ನಾವು ವಿವಿಧ ರೀತಿಯ ಸಮಾಜಮುಖಿ ಕೆಲಸಗಳನ್ನು ಕೈಗೊಳ್ಳಬಹುದಾಗಿದೆ. ಕೇಂದ್ರ ಸರ್ಕಾರ ನಮಗೆ ಅಗತ್ಯವಾದ ನೆರವು ನೀಡಬೇಕೆಂದು ಒತ್ತಾಯ ಮಾಡಿದರು.

ಮೈಸೂರು ಮಿನರಲ್ಸ್ ಲಿಮಿಟೆಡ್‍ಎಂಬ ಸಂಸ್ಥೆಯ ಹೆಸರನ್ನು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ಎಂದು ಬದಲಾಯಿಸುವ ಪ್ರಸ್ತಾವನೆಯೂ ಸೇರಿದಂತೆ, ಉಡುಪಿ ಜಿಲ್ಲೆಯ  ಬೈಂದೂರು ತಾಲ್ಲೂಕಿನ ಪಡುವರಿ, ಯಡಿಟರೆ ಮತ್ತು ಬೈಂದೂರುಗಳಲ್ಲಿ  ಬಾಕ್ಸೈಟ್ ಖನಿಜಕ್ಕಾಗಿ  120.60 ಹೆಕ್ಟೇರ್ ಪ್ರದೇಶವನ್ನು ಕಾಯ್ದಿರಿಸಲಾಗಿದೆ.  ಕುಂದಾಪುರ ತಾಲ್ಲೂಕಿನ ಪಡುವರೆ ಗ್ರಾಮದಲ್ಲಿ 23.80 ಹೆಕ್ಟೇರ್‍ಪ್ರದೇಶವನ್ನು ಕಾಯ್ದಿರಿಸಲಾಗಿದೆ. ಈ ಪ್ರಸ್ತಾಪವು ಕೇಂದ್ರದ ಮುಂದೆ ಬಾಕಿ ಉಳಿದಿದೆ. ಉದ್ದೇಶಿತ ಕಾರ್ಯಯೋಜನೆ ಜಾರಿಗೊಳಿಸುವ ಅಗತ್ಯ ಇದೆ ಎಂಬುದನ್ನು ಸಚಿವರಾದ ಜೋಶಿ ಅವರಿಗೆ ಮನವರಿಕೆ ಮಾಡಿಕೊಟ್ಟರು.

ಇದನ್ನೂ ಓದಿ: Ajit Doval: ಅಜಿತ್ ದೋವಲ್ ಗುರಿಯಾಗಿಸಿ ದಾಳಿಗೆ ಪಾಕ್ ಸ್ಕೆಚ್: ಜೈಶ್ ಭಯೋತ್ಪಾದಕನಿಂದ ಬಹಿರಂಗ!

ಅಂತೆಯೇ ಬಳ್ಳಾರಿ ಜಿಲ್ಲೆಯ  ಸಂಡೂರು ತಾಲ್ಲೂಕಿನಲ್ಲಿ ಗಣಿಗಾರಿಕೆಗಾಗಿ 145.00 ಹೆಕ್ಟೇರ್ ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆ ಕೂಡ ಕೇಂದ್ರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಎಂಒಇಎಫ್ ಮತ್ತು ಸಿಸಿ) ಬಾಕಿ ಇದೆ. ಈ ಬಗ್ಗೆ ಕರ್ನಾಟಕ  ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ 2020ರ ಮೇ ಅನುಮೋದನೆ ನೀಡುವ ಬಗ್ಗೆ ಕೋರಿತ್ತು. ಗಣಿಕಾರಿಕೆ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಿದರೆ ರಾಜ್ಯದ ವರಮಾನ ಹೆಚ್ಚಾಗಲಿದೆ ಎಂದು ಹೇಳಿದರು.

ಸಚಿವ ನಿರಾಣಿಯವರ ಜೊತೆ ದೀರ್ಘ ಕಾಲ ಸಮಾಲೋಚನೆ ಮಾಡಿದ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಈ ಸಂಬಂಧ ಸೂಕ್ತ ತೀರ್ಮಾನ ತೆಗೆದುಕೊಳ್ಳುವ ಭರವಸೆಯನ್ನೂ ನೀಡಿದರು. ಕರ್ನಾಟಕದಲ್ಲಿ  ಪ್ರಸ್ತಾವಿತ ಗಣಿಕಾರಿಕೆ ಯೋಜನೆಗಳು ನೆನೆಗುದಿಗೆ ಬಿದ್ದಿವೆ ಎಂಬ ಸಂಗತಿ ನನ್ನ ಗಮನಕ್ಕೂ ಬಂದಿದೆ. ಸದ್ಯದಲ್ಲೇ  ಅಧಿಕಾರಿಗಳ ಸಭೆ ಕರೆದು ಕಾನೂನಿನ ವ್ಯಾಪ್ತಿಯಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳುವ ಬಗ್ಗೆ ನಿರ್ದೇಶನ ನೀಡುವುದಾಗಿ ಅಭಯ ನೀಡಿದ್ದಾರೆ.
Published by: MAshok Kumar
First published: February 13, 2021, 7:47 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories