Rape: ಅಪ್ರಾಪ್ತೆ ಮೇಲೆ ಅತ್ಯಾಚಾರ; ತನಿಖೆಗೆ ಎಸ್​ಐಟಿ ತಂಡ ರಚನೆ

16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಮೃಗೀಯ ವರ್ತನೆ ತೋರಿರುವ ಘಟನೆ ರಾಜಸ್ಥಾನದ ಅಲ್ವಾರ್​ನಲ್ಲಿ ನಡೆದಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಜೈಪುರ (ಜ. 13):  16 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮಾಂಧರು, ಬಳಿಕ ಆಕೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾರೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯನ್ನು ವೈದ್ಯರು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ರಾಜಸ್ಥಾನದ ಅಲ್ವಾರ್​ನಲ್ಲಿ (Alwar) ದುರ್ಘಟನೆ ನಡೆದಿದೆ. ಬಾಲಕಿಯನ್ನು ಅತ್ಯಾಚಾರಕ್ಕೆ ಒಳಪಡಿಸಿ, ವಿಕೃತಿ ಮೆರೆದ ಬಳಿಕ ಆಕೆಯನ್ನು ನಗರದ ಸೇತುವೆ ಬಳಿ ಎಸೆದು ಹೋಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ತೀವ್ರ ರಕ್ತಸ್ರಾವದಿಂದ ಬಳಲಿದ ಬಾಲಕಿ
    ಇನ್ನು ಅತ್ಯಾಚಾರಕ್ಕೆ ಒಳಗಾದ ಬಾಲಕಿ ವಿಶೇಷ ಚೇತನ ಹುಡುಗಿ ಆಗಿದ್ದು, ಆಕೆಯ ವಯಸ್ಸು 16 ವರ್ಷ ಆಗಿದೆ. ರಕ್ತಸಿಕ್ತವಾಗಿದ್ದ ಆಕೆಯ ದೇಹ ಇಲ್ಲಿನ ತಿಜರ ಫ್ಲೈಓವರ್​ ಮೇಲೆ ಪತ್ತೆಯಾಗಿತ್ತು. ತಕ್ಷಣಕ್ಕೆ ಮಂಗಳವಾರ ಸಂತ್ರಸ್ತ ಬಾಲಕಿಯನ್ನು ಆಳ್ವಾರ್​ನ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ರಕ್ತಸ್ರಾವ ಮಾತ್ರ ನಿಲ್ಲಲ್ಲೇ ಇಲ್ಲ. ಈ ಹಿನ್ನಲೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಜೈಪುರದ ಜೆಕೆ ಲೋನ್ ಆಸ್ಪತ್ರೆಗೆ ಬುಧವಾರ ದಾಖಲಿಸಲಾಯಿತು
    ಇಲ್ಲಿನ ವೈದ್ಯರು ಆಕೆಗೆ ಚಿಕಿತ್ಸೆ ನೀಡಿದ್ದು, ಆಕೆಯನ್ನು ಸರಿ ಸುಮಾರು ಎರಡೂವರೆ ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಗೆ ಒಳಪಡಿಸಿದರು. ಸದ್ಯ ಸಂತ್ರಸ್ತೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

    ಸದ್ಯ ಅಪಾಯದಿಂದ ಪಾರಾದ ಬಾಲಕಿ

    ಈ ವೇಳೆ ವೈದ್ಯರು ಬಾಲಕಿಯನ್ನು ಅತ್ಯಾಚಾರಕ್ಕೆ ಒಳಪಡಿಸಿದ ಬಳಿಕ ಆಕೆಯ ಮೇಲೆ ಹರಿತವಾದ ಆಯುಧ ಬಳಸಿ ಹಲ್ಲೆ ನಡೆಸಲಾಗಿದೆ. ಇದರ ಪರಿಣಾಮ ಆಕೆ ಗಂಭೀರವಾಗಿ ಹಾನಿಗೊಂಡಿದ್ದು, ರಕ್ತಸ್ರಾವ ಉಂಟಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಸದ್ಯ ಸಂತ್ರಸ್ತೆಯ ಸ್ಥಿತಿಯನ್ನು ಗಮನಿಸಲಾಗುತ್ತಿದೆ ಎಂದು ಜೆಕೆ ಲೋನ್ ಆಸ್ಪತ್ರೆಯ ಡಾ ಅರವಿಂದ್ ಶುಕ್ಲಾ ತಿಳಿಸಿದ್ದಾರೆ.

    ಇದನ್ನು ಓದಿ: ಸಿಎಂ ಆಯ್ಕೆಗೆ SMS ಮೂಲಕ ವೋಟಿಂಗ್​; ಅಭ್ಯರ್ಥಿ ಆಯ್ಕೆಯನ್ನು ಜನತೆಗೆ ಬಿಟ್ಟ AAP

    ಕೊಲ್ಲುವ ವಿಫಲ ಯತ್ನ ನಡೆಸಿದ ಕಾಮುಕರು
    ಘಟನೆ ಕುರಿತು ಮಾತನಾಡಿರುವ ಪೊಲೀಸರು ಬಾಲಕಿಯ ಮೇಲೆ ಈ ಕ್ರೂರತನವನ್ನು ಮರೆದಿರುವ ಕೀಚಕರು ಆಕೆಯನ್ನು ಚುಚ್ಚಿ ಕೊಲ್ಲಲು ಯತ್ನಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ. ಘಟನಾ ಸ್ಥಳ ಮತ್ತು ಸುತ್ತಮುತ್ತಲಿನ 25 ಕಿ.ಮೀ ದೂರದೊಳಗೆ ಸುಮಾರು 300 ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗಿದೆ. ಆದರೆ, ಯಾವುದೇ ಸುಳಿವು ಸಿಕ್ಕಿಲ್ಲ ಎಂದಿದ್ದಾರೆ.

    ತನಿಖೆಗೆ ಎಸ್​ಐಟಿ ತಂಡ ರಚನೆ
    ಇನ್ನು ಘಟನೆ ಸಂಬಂಧ ವಿಶೇಷ ತನಿಖಾ ತಂಡ (ಎಸ್​ಐಟಿ) ರಚನೆ ಮಾಡಲಾಗುವುದು, ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ನ್ಯಾಯ ಒದಗಿಸಲಾಗುವುದು ಎಂದು ಸಚಿವ ರಾಜಸ್ಥಾನ ಸಚಿವ ಪರ್ಸದಿ ಲಾಲ ಮೀನಾ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಆರೋಪಿಗಳನ್ನು ಶೀಘ್ರವೇ ಹಿಡಿಯಲಾಗುವುದು ಎಂದು ರಾಜಸ್ಥಾನದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮಮತಾ ಭೂಪೇಶ್ ಕೂಡ ತಿಳಿಸಿದ್ದಾರೆ.

    ಇದನ್ನು ಓದಿ:  2017ರ ಅತ್ಯಾಚಾರ ಸಂತ್ರಸ್ತೆಯ ತಾಯಿಯನ್ನು ಚುನಾವಣಾ ಕಣಕ್ಕೆ ಇಳಿಸಲು ಸಜ್ಜಾದ ಕಾಂಗ್ರೆಸ್​

    ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ಘೋಷಣೆ
    ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ 6 ಲಕ್ಷ ರೂಪಾಯಿ ಪರಿಹಾರವನ್ನು ಮಮತಾ ಭೂಪೇಶ್​ ಘೋಷಿಸಿದ್ದಾರೆ. 6 ಲಕ್ಷದಲ್ಲಿ 5 ಲಕ್ಷ ರೂ.ಗಳನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು 1 ಲಕ್ಷವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ನೀಡಲಿದೆ

    ಸಾಮಾಜಿಕ ನ್ಯಾಯ ಸಚಿವ ಟಿಕಾರಾಂ ಜೂಲಿ ಕೂಡ ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ 3.5 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ. ಸಂತ್ರಸ್ತೆಯ ಪೋಷಕರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಆಕೆಗೆ ಸಹೋದರ ಮತ್ತು ಸಹೋದರಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
    Published by:Seema R
    First published: